BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

ಸಿಎಂ, ಡಿಸಿಎಂ ರಾಜೀನಾಮೆ ನೀಡುವಂತೆ ನಗರದಲ್ಲಿ ಜೆಡಿಎಸ್ ಪ್ರತಿಭಟನೆ
By News Desk BenkiyabaleUpdated:August 04, 2025 3:55 pm

ತುಮಕೂರು: ರಾಜ್ಯ ಕಾಂಗ್ರೆಸ್ ಸರಕಾರದ ಸಾರ್ವಜನಿಕರು, ರೈತರ ಪರ ಕೆಲಸ ಮಾಡದೆ, ದಲ್ಲಾಳಿಗಳು, ವ್ಯಾಪಾರಿಗಳ ಪರ ಕೆಲಸ ಮಾಡುತಿದ್ದು,ಸಂಪೂರ್ಣವಾಗಿ ರೈತರ ಹಿತ ಕಡೆಗಣಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಆರೋಪಿಸಿದ್ದಾರೆ.
ಜೆಡಿಎಸ್ ಪಕ್ಷದವತಿಯಿಂದ ಇಂದು ಹಮ್ಮಿಕೊಂಡಿದ್ದ ಸರಕಾರದ ವಿರುದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡುತಿದ್ದ ಅವರು,ರಾಜ್ಯ ಸರಕಾರ ರೈತರಿಗೆ ಸ್ಪಂದಿಸುತ್ತಿಲ್ಲ.ಹಾವಾಮಾನ ಇಲಾಖೆಯ ಮುನ್ಸೂಚನೆ ಇದ್ದರೂ ರಸಗೊಬ್ಬರ, ಬಿತ್ತನೆ ಬೀಜಗಳಿಗೆ ಸಮರ್ಪಕ ವಿತರಣೆಗೆ ಪೂರ್ವ ತಯಾರಿ ಮಾಡಿಕೊಳ್ಳದೆ, ರೈತರು ಪರದಾಡುವಂತೆ ಮಾಡಿದ್ದಾರೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರು ಸಂಪೂರ್ಣ ವಿಫಲರಾಗಿದ್ದು, ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಕಳೆದ ೨ ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಲಂಚಗುಳಿತನ, ದುರಾಡಳಿ, ಆಡಳಿತ ವೈಫಲ್ಯತೆಯಿಂದ ಜನರ ಆಕ್ರೋಶಕ್ಕೆ ತುತ್ತಾಗಿದೆ.ಉತ್ತಮ ಮಳೆಯಾಗಿ ರೈತರು ಕೃಷಿ ಚಟುಟವಟಿಕೆ ಆರಂಭಿಸುತ್ತಿರುವ ಸಂದರ್ಭದಲ್ಲಿ ಅವರಿಗೆ ಸರಕಾರ ರಸಗೊಬ್ಬರ, ಬಿತ್ತನೆಬೀಜ ಪೂರೈಸುವಲ್ಲಿ ವಿಫಲವಾಗಿದೆ.ಮುಂಜಾಗೃತವಾಗಿ ರಸಗೊಬ್ಬರನ್ನು ದಾಸ್ತಾನು ಮಾಡದೆ ನಿರ್ಲಕ್ಷ ಮಾಡಿದ ಪರಿಣಾಮ ಇಂದು ರೈತರು ಗಿಬ್ಬರ ಸಿಗದೆ ಪರಿತಪಿಸುವಂತಾಗಿದೆ.ಅಲ್ಲದೆ, ಮಳೆ ಹಾಗೂ ನೆರೆ ಹಾವಳಿಯಿಂದ ಫಸಲು ನಷ್ಟವಾದ ಹಾಗೂ ಮಳೆ ಅಭಾವದ ಕಡೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ, ವಿಮಾ ಹಣವನ್ನು ತಪುಪಿಸುವಲ್ಲಿ ಸರಕಾರ ವಿಫಲವಾಗಿದೆ.ಇಂತಹ ಹೊಣೆಗೇಡಿ ಸರಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದು ಅರ್.ಸಿ.ಆಂಜನಪ್ಪ ನುಡಿದರು.
ಕುಣಿಗಲ್ ಮುಖಂಡರಾದ ಜಗದೀಶ್ ನಾಗರಾಜಯ್ಯ ಮಾತನಾಡಿ,ಎರಡೂ ವರ್ಷಗಳಿಂದ ರೈತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ.ರಾಜ್ಯದಲ್ಲಿ ಭಷ್ಟ ಸರಕಾರ ಅಧಿಕಾರದಲ್ಲಿದೆ.ಜನಸಾಮಾನ್ಯರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ರಸಗೊಬ್ಬರಕ್ಕಾಗಿ ಹೋರಾಟ ಮಾಡುತ್ತಿದ್ದರೂ ಸಮಸ್ಯೆ ಬಗೆಹರಿಸಬೇಕಾದ ಸರ್ಕಾರದ ನಾಯಕರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಾ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಸರಬರಾಜು ಮಾಡಿದ್ದ ರಸಗೊಬ್ಬರವನ್ನು ರೈತರಿಗೆ ಹಂಚಿಕೆ ಮಾಡದೆ ದಳ್ಳಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಾರೆ.ಕೃಷಿ ಮಂತ್ರಿ ಚಲುವರಾಯಸ್ವಾಮಿ ಕಮಿಷನ್ ದಂಧೆಯಲ್ಲಿ ತೊಡಗಿದ್ದಾರೆ. ದೇವೇಗೌಡರ ಕುಟುಂಬದವರನ್ನು ಜರಿಯುವುದನ್ನು ಬಿಟ್ಟರೆ ಬೇರೆ ಉದ್ಯೋಗವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಿಪಟೂರು ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ಕೇಂದ್ರ ಸರಕಾರದ ಜೊತೆ ವ್ಯವಹರಿಸಿ ಅಗತ್ಯ ಗೊಬ್ಬರ ಪಡೆಯುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರ, ಸಮಸ್ಯೆಗೆ ಪರಿಹಾರ ಕಂಡುಕೊAಡು ರೈತರಿಗೆ ಗೊಬ್ಬರ ನೀಡದೆ, ಕೇಂದ್ರದ ಮೇಲೆ ಆರೋಪ ಮಾಡುತ್ತಾ ಸಮಸ್ಯೆಯನ್ನು ಮತ್ತಷ್ಟು ಜಟಿಲ ಮಾಡುತ್ತಿದೆ. ಇರುವ ಗೊಬ್ಬರವನ್ನು ಬ್ರೋಕರ್‌ಗಳ ಮೂಲಕ ಮಾರಾಟ ಮಾಡಿ ಹಣ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಆಡಳಿತಕ್ಕೆ ರೈತರು ರೋಸಿಹೋಗಿದ್ದಾರೆ.ಗ್ಯಾರಂಟಿ ಆಸೆ ತೋರಿಸಿ ಜನರಿಂದ ವೋಟು ಪಡೆದ ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ ನಂತರ ಜನರ ಹಿತ ಮರೆತಿದ್ದಾರೆ. ರೈತರನ್ನು ಕಡೆಗಣಿಸಿದ್ದಾರೆ. ಎಲ್ಲಾ ಕಡೆ ಭ್ಯಷ್ಟಾಚಾರ ತುಂಬಿದೆ. ಸರಕಾರಿ ಕಚೇರಿಗಳಲ್ಲಿ ರೈತರ ಅಹವಾಲು ಕೇಳುವವರಿಲ್ಲ. ಜಿಲ್ಲಾಡಳಿತವೂ ಹದಗೆಟ್ಟಿದೆ. ಎಕ್ಸ್ಪ್ರೆಸ್ ಕೆನಾಲ್ ವಿರುದ್ಧ ಹೋರಾಟಕ್ಕಿಳಿದ ರೈತರನ್ನು ಪೊಲೀಸರನ್ನು ಬಳಸಿ ಬೆದರಿಸಲಾಗಿದೆ.ಆದರೆ ಕಾಂಗ್ರೆಸ್‌ನ ಸಚಿವರಾಗಲಿ, ಶಾಸಕರಾಗಲಿ ರೈತರ ಪರ ನಿಲ್ಲಲಿಲ್ಲ ಎಂದು ಟೀಕಿಸಿದರು.
ಈ ಸಂಬ0ಧ ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಅಧೀಕ್ಷಕರಿಗೆ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ,ಪಿ.ಆರ್.ಸುಧಾಕರಲಾಲ್,ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು,ನಗರ ಅಧ್ಯಕ್ಷ ವಿಜಯ್‌ಗೌಡ,ಯೋಗಾನಂದಕುಮಾರ್,ಟಿ.ಕೆ.ನರಸಿAಹಮೂರ್ತಿ,ಧರಣೇAದ್ರಕುಮಾರ್,ಹೆಚ್.ಡಿ.ಕೆ.ಮAಜುನಾಥ್,ರಾಮಕೃಷ್ಣಪ್ಪ, ಮುಖಂಡರಾದ ಉಗ್ರೇಶ್,ಕಾಮರಾಜು,ಕೊಂಡವಾಡಿ ಚಂದ್ರಶೇಖರ್, ತಿಮ್ಮಾರೆಡ್ಡಿ, ಸೋಲಾರ್ ಕೃಷ್ಣಮೂರ್ತಿ, ಗಂಗಣ್ಣ, ಮೆಡಿಕಲ್ ಮಧು, ರೇಖಾ ರಾಜು, ಸೊಗಡು ವೆಂಕಟೇಶ್, ಚೆನ್ನಮಲ್ಲಯ್ಯ, ತಾಹೇರಾ ಕುಲ್ಸಂ, ಲೀಲಾವತಿ, ಲಕ್ಷಿö್ಮÃದೇವಮ್ಮ ಮತ್ತಿತರರು ಪಾಲ್ಗೊಂಡಿದ್ದರು.

(Visited 1 times, 1 visits today)
Jds tumkur
Previous Articleಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
Next Article ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.