BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ
ಇತರೆ ಸುದ್ಧಿಗಳು

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

ಕಾಂಗ್ರೆಸ್ ಹೈಕಮಾಂಡ್ ಕ್ರಮ ಖಂಡಿಸಿ ಕಲ್ಪತರುನಾಡಿನಲ್ಲಿ ವಿವಿಧ ಸಂಘಟನೆಗಳ ಮುಖಂಡರಿ0ದ ಪ್ರತಿಭಟನೆ
By News Desk BenkiyabaleUpdated:August 13, 2025 2:48 pm

ತುಮಕೂರು: ಸಚಿವ ಸಂಪುಟದಿ0ದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕಾಂಗ್ರೆಸ್ ಹೈಕಮಾಂಡ್ ಕ್ರಮ ಖಂಡಿಸಿ ಕಲ್ಪತರುನಾಡು ತುಮಕೂರಿನಲ್ಲಿ ಆಕ್ರೋಶ ಭುಗಿಲೆದಿದ್ದು, ಕೆ.ಎನ್. ರಾಜಣ್ಣನವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕೆ.ಎನ್.ಆರ್. ಅಭಿಮಾನಿಗಳು, ವಾಲ್ಮೀಕಿ ಸಮುದಾಯದವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ವಿವಿಧ ಸಂಘಟನೆಗಳು ಮುಖಂಡರು ಪ್ರತಿಭಟನೆ ನಡೆಸಿದರು.
ಕೆ.ಎನ್.ಆರ್, ಆರ್.ಆರ್. ಅಭಿಮಾನಿ ಬಳಗ, ಕಾಂಗ್ರೆಸ್ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ನಗರದ ಟೌನ್‌ಹಾಲ್ ವೃತ್ತ ಜಮಾಯಿಸಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಯಾವುದೇ ತಪುö್ಪ ಮಾಡದ ಕೆ.ಎನ್.ರಾಜಣ್ಣನವರನ್ನು ಸಂಪುಟದಿ0ದ ವಜಾ ಮಾಡಿ ಅಪಮಾನ ಮಾಡಲಾಗಿದೆ ಎಂದು ಆಕ್ರೋಶ ಹೊರ ಹಾಕಿದರು.
ಟೌನ್‌ಹಾಲ್ ವೃತ್ತದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದ ಕೆಎನ್‌ಆರ್ ಅಭಿಮಾನಿಗಳು, ಮಧುಗಿರಿ ಕ್ಷೇತ್ರದ ಕಾರ್ಯಕರ್ತರು ಕೆಎನ್‌ಆರ್ ಪರ ಘೋಷಣೆಗಳನ್ನು ಕೂಗುತ್ತಾ ಬಿ.ಹೆಚ್. ರಸ್ತೆ ಮುಖೇನ ಎಂ.ಜಿ. ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮುಖಂಡ ಗಂಗಣ್ಣ ಮಾತನಾಡಿ, ಕೆ.ಎನ್. ರಾಜಣ್ಣ ಅವರು ಸಂಪುಟದಿ0ದ ವಜಾ ಮಾಡಿರುವುದು ತುಮಕೂರು ಜಿಲ್ಲೆಯ ಅಹಿಂದ ವರ್ಗದವರಿಗೆ ತುಂಬಾ ನೋವಾಗಿದೆ. ಮತ್ತೆ ರಾಜಣ್ಣನವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಈ ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲವಾಗುತ್ತದೆ. ಇದಕ್ಕೆ ಅವಕಾಶ ನೀಡದೆ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ರಾಜಣ್ಣನವರನ್ನು ವಜಾ ಮಾಡಿರುವುದನ್ನು ವಾಪಸ್ ಪಡೆದು ಮತ್ತೆ ಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.
೧೯೬೮ ರಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡು, ಅಸಹಾಯಕರಿಗೆ ಸಹಾಯ ಮಾಡುತ್ತಾ ಜನಪರ ನಾಯಕರಾಗಿ ಬೆಳೆದ ಕೆ.ಎನ್.ರಾಜಣ್ಣನವರನ್ನು ತುಮಕೂರು ಜಿಲ್ಲೆಯ ದೇವರಾಜ ಅರಸು ಎಂದು ಜನ ಗುರುತಿಸಿ ಗೌರವಿಸುತ್ತಾರೆ. ಸರ್ಕಾರದ ಅಭಿವೃದ್ಧಿ ಕೆಲಸಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇಂತಹ ನಾಯಕನನ್ನು ಸಚಿವ ಸ್ಥಾನದಿಂದ ತೆಗೆದು ಅವಮಾನ ಮಾಡಿರುವುದು ಜಿಲ್ಲೆಯ ಅವರ ಅಭಿಮಾನಿಗಳಿಗೆ ನೋವಾಗಿದೆ ಎಂದು ಪ್ರತಿಭಟನಾನಿರತರು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ೭ ಸ್ಥಾನ ಗಳಿಸಲು ಕೆ.ಎನ್.ಆರ್ ಕೊಡುಗೆ ಇದೆ. ೩೦ ವರ್ಷಗಳಿಂದ ಕಾಂಗ್ರೆಸ್ ಗೆಲುವು ಸಾಧ್ಯವಾಗದ ಹಾಸನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಪಡೆಯಲು ಅಲ್ಲಿನ ಉಸ್ತುವಾರಿ ಸಚಿವರಾಗಿದ್ದ ಕೆ.ಎನ್.ರಾಜಣ್ಣನವರು ಪಕ್ಷ ನಿಷ್ಠೆ ಕಾರ್ಯತಂತ್ರ ಕಾರಣ ಎಂದರು.
ಕೆ.ಎನ್.ರಾಜಣ್ಣನವರು ೧೯೬೮ ರಿಂದ ಎಲ್ಲಾ ಕಾಂಗ್ರೆಸ್ ನಾಯಕರ ಒಡನಾಡಿಯಾಗಿ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಶ್ರಮಿಸಿದ್ದಾರೆ. ಅಶಕ್ತರಿಗೆ, ಶೋಷಿತರಿಗೆ ಧ್ವನಿಯಾಗಿ ನಿಂತು ಅವರಿಗೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಾ ಜನಾನುರಾಗಿಯಾಗಿದ್ದಾರೆ. ಅವರನ್ನು ಸಚಿವ ಸಂಪುಟದಿ0ದ ತೆಗೆದಿರುವುದು ಅವರ ಲಕ್ಷಾಂತರ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಂಡು ಅವರಿಗೆ ಮತ್ತೆ ಮಂತ್ರಿ ಸ್ಥಾನ ನೀಡಬೇಕು ಎಂದು ಕೆಎನ್‌ಆರ್ ಅಭಿಮಾನಿಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಲ್ಲಹಳ್ಳಿ ದೇವರಾಜು, ಎಸ್. ನಾಗಣ್ಣ, ಸಿಂಗನಹಳ್ಳಿ ರಾಜ್‌ಕುಮಾರ್, ವೆಂಕಟೇಗೌಡ, ಧನಿಯಕುಮಾರ್, ಪ್ರತಾಪ್ ಮದಕರಿ, ಪುರುಷೋತ್ತಮ್, ಟಿ.ಪಿ. ಮಂಜುನಾಥ್,ಕುಂದೂರು ತಿಮ್ಮಯ್ಯ, ಮಂಜೇಶ್, ಕುಪ್ಪೂರು ಶ್ರೀಧರ್, ಮುರುಳಿ ಕುಂದೂರು, ತಿಮ್ಮಣ್ಣ ಕುಂದೂರು, ಮಂಜುನಾಥ್, ನಾರಾಯಣಗೌಡ, ರಾಯಸಂದ್ರ ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಕೆಎನ್‌ಆರ್ ಅಭಿಮಾನಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಟೌನ್‌ಹಾಲ್ ಸರ್ಕಲ್, ಬಿ.ಹೆಚ್. ರಸ್ತೆ, ಎಂ.ಜಿ. ರಸ್ತೆಯ ಬದಿಗಳ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳನ್ನು ತೆರವುಗೊಳಿಸಿದ ಪೊಲೀಸರು ಯಾವುದೇ ಅಹಿತಕರ ಘಟನೆಗಳಾಗದಂತೆ ಬಿಗಿ ಭದ್ರತೆ ಕೈಗೊಂಡಿದ್ದರು.

(Visited 1 times, 1 visits today)
Previous Articleವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ
Next Article ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.