ತುಮಕೂರು: ಮಳೆಯಿಂದ ಹಾನಿಗೊಳಗಾದ ಮನೆ, ತೋಟ, ಜಾನುವಾರುಗಳನ್ನು ಪರಿಶೀಲಿಸಿ ಪರ‍್ಟಲ್ ನಲ್ಲಿ ದಾಖಲಿಸಿ ತಕ್ಷಣವೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನರ‍್ವಹಣಾ ಪ್ರಾಧಿಕಾರ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ವಿವಿಧ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿವೆ, ಕುಡಿಯುವ ನೀರಿಗೆ ಕಲುಷಿತ ನೀರು ಸೇರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಇತ್ತೀಚೆಗೆ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸರ‍್ವಜನಿಕರು ಮನೆಗಳ ಸುತ್ತಮುತ್ತ ನೀರು ನಿಲುಗಡೆಯಾಗದಂತೆ ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಜೊತೆಗೆ ಪ್ರತಿ ವರ‍್ಡ್ ಹಾಗೂ ಗ್ರಾಮಗಳಲ್ಲಿ ಪ್ರತಿದಿನ ಫಾಗಿನೇಷನ್ ಕರ‍್ಯಾಚರಣೆ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಡಲೆಕಾಯಿ ಬಿತ್ತನೆಗೆ ಸಮಯಮಿತಿಯೊಳಗೆ ಮಳೆಯಾಗದ ಕಾರಣ ರೈತರು ರಾಗಿ ಬಿತ್ತನೆಗೆ ಮುಂದಾಗಿದ್ದಾರೆ. ಈ ಸಂರ‍್ಭದಲ್ಲಿ ಯೂರಿಯ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ರೈತರಿಗೆ ಯಾವುದೇ ತೊಂದರೆ ಉಂಟಾಗದಂತೆ ಯೂರಿಯ ವಿತರಣೆ ಮಾಡಬೇಕೆಂದು ಕೃಷಿ ಜಂಟಿ ನರ‍್ದೇಶಕ ರಮೇಶ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಸರ‍್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ, ಜಿಲ್ಲೆಯ ೩೩೦ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ೧೫ ದಿನಕ್ಕೊಮ್ಮೆ ಕ್ಲೋರಿನೇಷನ್ ಹಾಗೂ ಬಯೋಲಾಜಿಕಲ್ ಪರೀಕ್ಷೆ ಮಾಡಬೇಕು ಎಂದು ಕರ‍್ಯನರ‍್ವಾಹಕ ಎಂಜಿನಿಯರ್ ಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಪೈಪ್ ಲೈನ್ ಹಾನಿಯಾಗದ ವರದಿ ಮತ್ತು
ಬಯೋಲಾಜಿಕಲ್ ಪರೀಕ್ಷೆ ಮಾಡಿರುವ ವರದಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪಕರ‍್ಯರ‍್ಶಿ ಸಂಜೀವಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಡಾ. ಚಂದ್ರಶೇಖರ್ ತೋಟಗಾರಿಕೆ ಇಲಾಖೆ ಉಪ ನರ‍್ದೇಶಕ ಶಾರದಮ್ಮ, ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.