BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು
ಇತರೆ ಸುದ್ಧಿಗಳು

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ರವರ ೧೧೦ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ
By News Desk BenkiyabaleUpdated:August 20, 2025 3:03 pm

ತುಮಕೂರು: ಸಂವಿಧಾನದ ಆಶಯಗಳನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಿ ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣವಾಗಿರುವ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸುರವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದರು.
ನಗರದ ಟೌನ್‌ಹಾಲ್ ವೃತ್ತದಲ್ಲಿರುವ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ರವರ ೧೧೦ನೇ ಜನ್ಮ ದಿನಾಚರಣೆಯಲ್ಲಿ ಡಿ. ದೇವರಾಜು ಅರಸು ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಅವರು ಮಾತನಾಡಿದರು.
ನಮ್ಮ ಸಂವಿಧಾನದ ಮೂಲ ಆಶಯವಾಗಿರುವ ಸಾಮಾಜಿಕ ನ್ಯಾಯವನ್ನು ರಾಜ್ಯದಲ್ಲಿ ಚಾಚೂ ತಪ್ಪದೇ ಅನುಷ್ಠಾನಕ್ಕೆ ತಂದ ಮುಖ್ಯಮಂತ್ರಿ ಅಂದರೆ ಡಿ. ದೇವರಾಜು ಅರಸು ರವರು ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಡಿ. ದೇವರಾಜು ಅರಸು ರವರು ರಾಜ್ಯದಲ್ಲಿ ಉಳುವವನೇ ಭೂಮಿ ಒಡೆಯ ಎಂಬ ಕಾನೂನನ್ನು ಜಾರಿಗೊಳಿಸಿ ಬಡವರ ಆಶಾಕಿರಣವಾಗಿದ್ದಾರೆ ಎಂದರು.
ಉಳುವವನೇ ಭೂಮಿ ಒಡೆಯ ಎಂಬ ಯೋಜನೆ ಜಾರಿಗೊಳಿಸಿ ೪ ಎಕರೆ ಜಮೀನು ನೀಡುವ ಮೂಲಕ ಬಡವರಿಗೆ ಶಕ್ತಿ ತುಂಬಿದ್ದಾರೆ. ಇದರೊಂದಿಗೆ ಯಾರಿಗೆ ಶಕ್ತಿ ಇಲ್ಲವೋ, ಧ್ವನಿ ಇಲ್ಲವೋ ಅಂತಹ ಸಮುದಾಯದ ಜನರ ಧ್ವನಿಯಾಗಿ ಅರಸುರವರು ಸೇವೆ ಸಲ್ಲಿಸಿದ್ದಾರೆ. ಇವರ ಸೇವೆ ಸದಾ ಸ್ಮರಣೀಯ ಎಂದರು.
ಹಿAದಿನ ಕಾಲದಲ್ಲಿ ಗ್ರಾಮಗಳಲ್ಲಿ ಶಾನುಭೋಗರು, ಪಟೇಲರ ಪದ್ದತಿ ಚಾಲ್ತಿಯಲ್ಲಿತ್ತು. ಈ ವ್ಯವಸ್ಥೆಯಿಂದ ಜನರಿಗೆ ತೊಂದರೆಯಾಗುತ್ತಿದೆ ಎಂಬುದನ್ನು ಅರಿತ ಡಿ. ದೇವರಾಜು ಅರಸು ರವರು ಅಂದೇ ೫೦೦ ಗ್ರಾಮ ಆಡಳಿತಾಧಿಕಾರಿಗಳ ನೇಮಕ ಮಾಡಿದರು. ಈ ಗ್ರಾಮ ಆಡಳಿತಾಧಿಕಾರಿಗಳ ನೇಮಕ ವ್ಯವಸ್ಥೆ ಇಂದಿಗೂ ಸಹ ನಡೆಯುತ್ತಿದೆ ಎಂದರು.
ರಾಜ್ಯದಲ್ಲಿ ಆಶ್ರಯ ಯೋಜನೆ, ಜನತಾ ಮನೆಗಳ ಯೋಜನೆಯನ್ನು ದೇವರಾಜು ಅರಸು ರವರು ಜಾರಿಗೊಳಿಸಿ ಬಡವರಿಗೆ ಸೂರು ಒದಗಿಸಿದರು. ಈ ಯೋಜನೆಯನ್ನು ನಗರ ಪ್ರದೇಶವಲ್ಲದೆ, ಗ್ರಾಮೀಣ ಪ್ರದೇಶದಲ್ಲೂ ಜಾರಿಗೊಳಿಸಬೇಕು ಎಂದು ಸಹ ಅರಸುರವರು ಯೋಚನೆ ಮಾಡಿ, ಈ ಯೋಜನೆಯನ್ನು ಜಾರಿಗೆ ತಂದರು ಎಂದರು.
ಕಲಾವಿದರ ಸಂಕಷ್ಟವನ್ನು ಅರಿತ ದೇವರಾಜು ಅರಸುರವರು ಕಲಾವಿದರಿಗೆ ಪಿಂಚಣಿ ನೀಡುವ ಯೋಜನೆಯನ್ನು ಸಹ ಪ್ರಾರಂಭಿಸಿದರು. ಈ ಮೂಲಕ ದೇವರಾಜು ಅರಸು ರವರು ಕರ್ನಾಟಕ ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಅರಸರು ರವರ ತತ್ವಾದರ್ಶಗಳನ್ನು ನಾವೆಲ್ಲರೂ ಚಾಚೂ ತಪ್ಪದೇ ಪಾಲಿಸಬೇಕು. ಇದರೊಂದಿಗೆ ನಮ್ಮ ಕೈಲಾದಷ್ಟು ಸಾಮಾಜಿಕ ಸೇವೆಯನ್ನು ಮಾಡಬೇಕು ಎಂದು ಅವರು ಸಲರೆ ಮಾಡಿದರು.
ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ ಮಾತನಾಡಿ, ಭಾರತ ದೇಶದಲ್ಲಿ ಎಲ್ಲ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಇದಕ್ಕೆ ಮೂಲ ಕಾರಣ ಡಿ. ದೇವರಾಜು ಅರಸು ರವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಎಲ್ಲ ರಂಗದಲ್ಲೂ ಕೈಗೊಂಡ ನಿರ್ಧಾರಗಳು ಎಂದರು.
ಪಟೇಲರು, ಶಾನುಭೋಗರು ಹಾಗೂ ಗೌಡರ ಜಮೀನುಗಳನ್ನು ಉಳುಮೆ ಮಾಡುತ್ತಿದ್ದ ಬಡವರನ್ನೆ ಮಾಲೀಕರನ್ನಾಗಿ ಮಾಡುವ ಉದ್ದೇಶದಿಂದ ಉಳುವವನೇ ಭೂಮಿ ಒಡೆಯ ಎಂಬ ಐತಿಹಾಸಿಕ ಕಾನೂನನ್ನು ಜಾರಿಗೊಳಿಸಿದರು. ಎಷ್ಟೇ ಒತ್ತಡ ಇದ್ದರೂ ಯಾವುದಕ್ಕೂ ಜಗ್ಗದೆ, ಬಗ್ಗದೆ ಬಡವರು, ಹಿಂದುಳಿದವರು ಹಾಗೂ ಶೋಷಿತರ ಏಳ್ಗೆಗೆ ಶ್ರಮಿಸಿದರು ಎಂದು ಬಣ್ಣಿಸಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ರಾಜೀವ್‌ಗಾಂಧಿ, ದೇವರಾಜು ಅರಸುರವರ ಅನುಯಾಯಿಗಳಾಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರವರು ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ಪರಿಕಲ್ಪನೆಯನ್ನು ತಂದು ಮಹಿಳೆಯರು, ಬಡವರ ಪಾಲಿಗೆ ಆಶಾಕಿರಣವಾಗಿದ್ದಾರೆ ಎಂದರು.
ಸಮಾರ0ಭದಲ್ಲಿ ಚಿಂತನಾ ಬಳಗದ ಮುಖ್ಯಸ್ಥರಾದ ಕೆ.ಪಿ. ಲಕ್ಷಿ÷್ಮÃಕಾಂತ ರಾಜೇ ಅರಸು ಡಿ. ದೇವರಾಜು ಅರಸು ವಿಚಾರಧಾರೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಹಿಂದುಳಿದ ಸಮುದಾಯದ ಪ್ರಾಂಶುಪಾಲರು ಹಾಗೂ ಸಾಹಿತಿ ಡಾ. ಕೆ.ವಿ. ಕೃಷ್ಣಮೂರ್ತಿ, ಸಂಘಟನೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆ.ವಿ. ಅಜಯಕುಮಾರ್, ಪದ್ಮನಾಭ (ಮಧು), ಆರ್. ಅನಿಲ್‌ಕುಮಾರ್, ಗುರುರಾಘವೇಂದ್ರ ರವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಮಹಾನಗರ ಪಾಲಿಕೆ ಬಿ.ವಿ. ಅಶ್ವಿಜ, ಅಡಿಷನಲ್ ಎಸ್ಪಿ ಗೋಪಾಲ್, ಜಿಲ್ಲಾ ಬಿಸಿಎಂ ಅಧಿಕಾರಿ ಸೋನಿಯಾ ವರ್ಣೇಕರ್, ತಾಲ್ಲೂಕು ಬಿಸಿಎಂ ವಿಸ್ತರಣಾಧಿಕಾರಿ ಹಾಗೂ ಕಲ್ಯಾಣಾಧಿಕಾರಿ ರಂಗಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ರವಿಕುಮಾರ್, ಜಿಲ್ಲಾ ಪತ್ರಾಂಕಿತ ವ್ಯವಸ್ಥಾಪಕರಾದ ವನಜಾಕ್ಷಮ್ಮ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಟಿ.ಎಸ್. ಮಧುಕರ್, ಜಿಲ್ಲಾಧ್ಯಕ್ಷ ಧನಿಯಕುಮಾರ್, ಮಲ್ಲಸಂದ್ರ ಶಿವಣ್ಣ, ಪಿ. ಮೂರ್ತಿ, ಮಂಜೇಶ್, ನಾಗರಾಜು, ಮೈಲಪ್ಪ, ಡಮರುಗೇಶ್, ಮಹಾಲಿಂಗಯ್ಯ, ಚಿ.ನಿ. ಪುರುಷೋತ್ತಮ್, ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

(Visited 1 times, 1 visits today)
Previous Articleಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ
Next Article ಸೆ.೨೨ ರಿಂದ ದಸರಾ ಉತ್ಸವ
News Desk Benkiyabale

Related Posts

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.