
ತುಮಕೂರು: ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿ ಹೊಂದಿ ಕಠಿಣ ಪರಿಶ್ರಮದಿಂದ ಓದಿದರೆ ಖಂಡಿತವಾಗಿಯೂ ಉತ್ತಮ ಫಲಿತಾಂಶವನ್ನು ಕಾಣಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು.ಜಿ ಅವರು ಅಭಿಪ್ರಾಯಪಟ್ಟರು.
ಶ್ರೀದೇವಿ ಫಾರ್ಮಸಿ ಕಾಲೇಜು ಶ್ರೀ ರಮಣ ಮಹರ್ಷಿ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಗುರುವಾರ ಕೇಂದ್ರದ ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದ ಮೇರಾ ಯುವ ಭಾರತ್ ಮೈ ಭಾರತ್ ತುಮಕೂರು, ಡಾ: ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಇನ್ಹರ್ ವೀಲ್ ಕ್ಲಬ್ ಆಫ್ ತುಮಕೂರು ಸೆಂಟ್ರಲ್ ಹಾಗೂ ಶ್ರೀ ರಮಣ ಮಹರ್ಷಿ ನರ್ಸಿಂಗ್ ಕಾಲೇಜು ಶ್ರೀದೇವಿ ಔಷಧ ಮಹಾವಿದ್ಯಾಲಯದ ಸಹಯೋಗದಲ್ಲಿ ಸರ್ಕಾರದ ಪ್ರಮುಖ ಯೋಜನೆಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಗೆ ಹೆಚ್ಚು ಸಮಯ ವ್ಯಯಿಸದೆ ತಮ್ಮ ಜೀವನದ ಗುರಿ, ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ಹೆಚ್ಚು ಆಸಕ್ತಿ ತೋರಬೇಕು. ಅತಿಯಾದ ಮೊಬೈಲ್ ಬಳಕೆ ಮತ್ತು ಆನ್‌ಲೈನ್ ವ್ಯಸನವು ವಿದ್ಯಾರ್ಥಿಗಳ ಏಕಾಗ್ರತೆಯನ್ನು ಕುಗ್ಗಿಸಿ ಅಧ್ಯಯನಕ್ಕೆ ಅಡ್ಡಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಅಮೂಲ್ಯ ಸಮಯವನ್ನು ಸರಿಯಾಗಿ ಬಳಸಿಕೊಂಡು ಕೌಶಲ್ಯಾಭಿವೃದ್ಧಿ, ಪುಸ್ತಕ ಓದು, ಕ್ರೀಡೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು.
ಡಾ: ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ರಾಜಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದ ದೇಶದ ಶಕ್ತಿ. ಅವರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಮಾಜದಲ್ಲಿ ಹೊಣೆಗಾರ ನಾಗರಿಕರಾಗಿ ಬೆಳೆಯುವಿಕೆ ಹಾದಿಯನ್ನು ಸುಗಮಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ ಎಂದರಲ್ಲದೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯು ವಿದ್ಯಾರ್ಥಿಗಳಿಗಾಗಿ ತಾಂತ್ರಿಕ, ಕೈಗಾರಿಕಾ ಕೌಶಲ್ಯ, ಡಿಜಿಟಲ್ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ. ವಿದ್ಯಾರ್ಥಿಗಳು ಕೇವಲ ಪದವಿ ಪಡೆದರೆ ಸಾಲದು, ಉದ್ಯೋಗಕ್ಕಾಗಿ ಬೇಕಾಗುವ ನೈಪುಣ್ಯತೆಯನ್ನು ಪಡೆಯಲು ಈ ತರಬೇತಿಗಳಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.
ಕಾರ್ಯಗಾರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ, ಜಲ್ ಜೀವನ್ ಮಿಷನ್, ರಾಷ್ಟಿçÃಯ ಆರೋಗ್ಯ ಅಭಿಯಾನ, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಶ್ರಮಶಕ್ತಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳು ಸೇರಿದಂತೆ ಹಲವಾರು ಪ್ರಮುಖ ಯೋಜನೆಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಡಾ: ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ನಿರ್ದೇಶಕ ಡಾ: ರಂಗಸ್ವಾಮಿ ಎಂ.ಆರ್. ಹಾಗೂ ಕಾರ್ಯದರ್ಶಿ ಮಂಜುನಾಥ್ ಎಂ.ಬಿ., ಶ್ರೀದೇವಿ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಶಿವಕುಮಾರ್, ಶ್ರೀದೇವಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಡಾ. ಉಷಾ, ಇನ್ಹರ್ ವೀಲ್ ಕ್ಲಬ್ ಆಫ್ ತುಮಕೂರು ಸೆಂಟ್ರಲ್ ಅಧ್ಯಕ್ಷ ಟಿ.ಎಸ್. ಲಲಿತಾ ಮಹೇಶ್ ಹಾಗೂ ಕಾರ್ಯದರ್ಶಿ ಶಿವಮ್ಮ ಚಂದ್ರಶೇಖರ್, ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ನ ಅಂಬಿಕಾ ಎಂ.ಹುಲಿನಾಯ್ಕರ್ ಹಾಗೂ ನಿರ್ದೇಶಕ ಎಂ.ಎಸ್ ಪಾಟೀಲ್ ಸೇರಿದಂತೆ ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.





