ತುಮಕೂರು: ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ವಿಶ್ವ ಹಿಂದೂ ಪರಿಷದ್, ಬಜರಂಗದಳದ ೮ನೇ ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ಶುಕ್ರವಾರ ವೈಭವದಿಂದ ನೆರವೇರಿತು.
ಅಲಂಕೃತ ಹೂವಿನ ಪಲ್ಲಕ್ಕಿಯಲ್ಲಿ ಬೃಹತ್ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮಂಗಳವಾದ್ಯ, ಕಲಾ ಮೇಳಗಳೊಂದಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ವಿಸರ್ಜನೆ ಮಾಡುವ ಕೆಎನ್‌ಎಸ್ ಕಲ್ಯಾಣಿವರೆಗೆ ಅದ್ದೂರಿ ಮೆರವಣಿಗೆ ಮಾಡಲಾಯಿತು.
ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ, ಹೆಬ್ಬೂರು ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ, ಅಟಿವಿ ಸುಕ್ಷೇತ್ರದ ಅಟವಿ ಮಲ್ಲಿಕಾರ್ಜುನ ಸ್ವಾಮೀಜಿ, ರೇವಣ್ಣಸಿದ್ಧೇಶ್ವರ ಮಠದ ಬಿಂದುಶೇಖರ ಒಡೆಯರ್ ಸ್ವಾಮೀಜಿ ಮತ್ತಿತರ ಗಣ್ಯರು ಗಣಪತಿಗೆ ಪೂಜೆ ಸಲ್ಲಿಸಿ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಹಿಂದೂ ಮಹಾಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಅಧ್ಯಕ್ಷ ಬಿ.ಎಸ್.ಮಂಜುನಾಥ್, ಉಪಾಧ್ಯಕ್ಷರಾದ ಮಹೇಂದ್ರ ವೈಷ್ಣವ್, ಡಾ.ಎಸ್.ಪರಮೇಶ್, ಸ್ವಚ್ಛ ಮಂಜುನಾಥ್, ಹೆಚ್.ಜಿ.ಚಂದ್ರಶೇಖರ್, ಕೆ.ಜೆ.ರುದ್ರಪ್ಪ, ಸುರೇಶ್‌ರಾವ್, ಕಾರ್ಯದರ್ಶಿ ಜಿ.ಕೆ.ಶ್ರೀನಿವಾಸ್, ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್, ಸಮಿತಿ ಸಹ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ, ಜೀವನ್, ಮೃದುಲ್ ವೈಷ್ಣವ್, ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಪ್ರದೀಪ್ ಸೇರಿದಂತೆ ಪದಾಧಿಕಾರಿಗಳು, ವಿವಿಧ ಸಂಘಸ0ಸ್ಥೆ, ಸಮಾಜಗಳ ಪ್ರಮುಖರು, ವಿಶ್ವ ಹಿಂದೂ ಪರಿಷದ್, ಬಜರಂಗದಳ ಕಾರ್ಯಕರ್ತರು ಉತ್ಸವದಲ್ಲಿ ಭಾಗವಹಿಸಿದ್ದರು. ಮೆರವಣಿಗೆಗೆ ಮುನ್ನ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆಗಮಿಸಿ ಗಣಪತಿಗೆ ಪೂಜೆ ಸಲ್ಲಿಸಿದರು.
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಪುತ್ಥಳಿಯೊಂದಿಗೆ ಭಾರತ ಮಾತೆ, ಶ್ರೀರಾಮ, ಆಂಜನೇಯ, ಶಿವ, ವರಹಾ ಸ್ವಾಮಿ, ಆಪರೇಷನ್ ಸಿಂಧೂರದಲ್ಲಿ ಬಳಕೆಯಾದ ಬ್ರಹ್ಮೋಸ್ ಕ್ಷಿಪಣಿಯ ಸ್ತಬ್ಧ ಚಿತ್ರಗಳು, ಬಾಲಗಂಗಾಧರ ತಿಲಕ್, ಶಿವಾಜಿ ಮೊದಲಾದವರ ಭಾವಚಿತ್ರಗಳ ಪ್ರದರ್ಶನದೊಂದಿಗೆ ಗಣಪತಿ ವಿಸರ್ಜನಾ ಉತ್ಸವ ಆಕರ್ಷಣೀಯವಾಗಿತ್ತು. ಜೊತೆಗೆ ಮಂಗಳ ವಾದ್ಯಗಳು, ನಂದಿಧ್ವಜ, ವೀರಗಾಸೆ, ಡಂಕವಾದ್ಯ, ತಮಟೆ ವಾದ್ಯ, ನಾಸಿಕ್ ಡೋಲು ಮತ್ತಿತರ ಜಾನಪದ ಕಲಾ ತಂಡಗಳ ಆಕರ್ಷಕ ಪ್ರದರ್ಶನ ಮೆರವಣಿಗೆಯ ವೈಭವ ಹೆಚ್ಚಿಸಿತ್ತು. ಭದ್ರಮ್ಮ ವೃತ್ತ, ಬಿ.ಹೆಚ್.ರಸ್ತೆ, ಬಿಜಿಎಸ್ ವೃತ್ತ, ಲಕ್ಕಪ್ಪ ವೃತ್ತದ ಮೂಲಕ ಜೆ.ಸಿ.ರಸ್ತೆ, ಮಂಡಿಪೇಟೆ ಮುಖ್ಯರಸ್ತೆ, ಸ್ವತಂತ್ರö್ಯ ವೃತ್ತ, ಅಶೋಕ ರಸ್ತೆ ಮುಖಾಂತರ ಗಾಯತ್ರಿ ಚಿತ್ರಮಂದಿರ, ಎಂ.ಜಿ.ರಸ್ತೆ, ರಾಮಪ್ಪ ವೃತ್ತ, ಕೋಟೆ ಆಂಜನೇಯಸ್ವಾಮಿ ವೃತ್ತದ ಮಾರ್ಗವಾಗಿ ಮೆರವಣಿಗೆ ಸಾಗಿತು. ಮಾರ್ಗದುದ್ದಕ್ಕೂ ಸಾವಿರಾರು ಜನ ಸೇರಿ ವೈಭವದ ಉತ್ಸವವನ್ನು ಸಂಭ್ರಮಿಸಿದರು.
ಸ0ಜೆ ಕೋಟೆ ಆಂಜನೇಯಸ್ವಾಮಿ ವೃತ್ತದಲ್ಲಿ ಸಂಜೆ ಆಕರ್ಷಕ ಸಿಡಿದ್ದಿನ ಪ್ರದರ್ಶನ, ಪಟಾಕಿಗಳ ವಿನೋದಾವಳಿ ವಿಶೇಷ ಆಕರ್ಷಣೆಯಾಗಿತ್ತು. ನಂತರ ಗಾರ್ಡನ್ ರಸ್ತೆಯ ಕೆಎನ್‌ಎಸ್ ಕಲ್ಯಾಣಿಯಲ್ಲಿ ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.