ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ಹಿತರಕ್ಷಣಾ ಸಮಿತಿಯಿಂದ ಕರ್ನಾಟಕ ರಾಜ್ಯ ಸರ್ಕಾರದಿಂದ ತುಮಕೂರು ಜಿಲ್ಲೆಯಲ್ಲಿ ಸಾಮಾಜಿ, ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಮತ್ತು ಪ್ರಮಾಣಿಕವಾಗಿ ನಡೆಸಲು ಒತ್ತಾಯಿಸಿ ಜಿಲ್ಲಾ ಧಿಕಾರಿಗಳಿಗೆ ಮನವಿ ನೀಡಲಾಯಿತು.
ತುಮಕೂರು ಜಿಲ್ಲೆಯಲ್ಲಿ ಶೇಕಡ ೯೦% ಸಮೀಕ್ಷೆ ಆಗಿರುವುದು ಪ್ರಸಂಶನೀಯ ಇದಕ್ಕೆ ಕಾರಣರಾದ ಜಿಲ್ಲಾಡಳಿತದ ಅಧಿಕಾರಿಗಳು, ಶಿಕ್ಷಕರು ಮತ್ತು ಸ್ಥಳೀಯ ಸಂಸ್ಥೆಗಳ ಗಣತಿದಾರರನ್ನು ಅಭಿನಂದಿಸುತ್ತೇವೆ ಉಳಿದ ೧೦% ಸಮೀಕ್ಷೆಯನ್ನು ಪೂರ್ಣಗೊಳಿಸಿ ಶೇ ,೧೦೦%ರಷ್ಟು ತಲುಪಬೇಕೆಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿಲಾಯಿತು. ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಪ್ರತಿಕ್ರಿಯಿಸಿ ನಿಗಧಿತ ಕಾಲಮಿತಿಯಲ್ಲಿ ಶೇ.೧೦೦% ರಷ್ಟು ಸಮೀಕ್ಷೆ ಯನ್ನು ಸಂಪೂರ್ಣಗೊಳಿಸುವುದಾಗಿ ಹೇಳಿದರು.
ಎ.ನರಸಿಂಹಮೂರ್ತಿ ಮಾತನಾಡಿ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿರುವುದು ಸಂವಿಧಾನದ ಆಶಯವಾಗಿದೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ೧೯೯೫ ಕಾಯ್ದೆಯನ್ವಯ ಪ್ರತಿ ೧೦ ವರ್ಷ ಗಳಿಗೊಮ್ಮೆ ಕಡ್ಡಾಯವಾಗಿ ರಾಜ್ಯದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷ ಣಿಕ ಸಮೀಕ್ಷೆಯನ್ನು ಮಾಡಿ ಅವರ ಸ್ಥಿತಿ ಗತಿಗಳ ಮಾಹಿತ ಆ ಧಾರದ ಮೇಲೆ ಮೀಸಲಾತಿಯನ್ನು ಪರಿಷ್ಕರಿಸಿ ಇದಕ್ಕೆ ಪೂರಕವಾದ ಯೋಜನೆಯನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುವುದು ಆಯೋಗದ ಕರ್ತವ್ಯವಾಗಿದೆ. ಧುರ್ಬಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ನೀಡುವುದು ವಿರೋಧ ಪಕ್ಷದ ಕೆಲವು ಮುಖಂಡರು ಮೇಲ್ವರ್ಗದ ಬಲಿಷ್ಠ ಜಾತಿಗಳು ಧಾರ್ಮಿಕ ಕ್ಷೇತ್ರದ ಸ್ವಾಮಿಜಿಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಅಸಮಾನತೆಯ ಸರ್ವಾಧಿಕಾರದ ಧೋರಣೆಯಾಗಿದೆ ಇದು ಖಂಡನೀಯ. ಈ ಸಮೀಕ್ಷೆಯನ್ನು ಜಿಲ್ಲೆ ಯನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ವಿಡಂಬಣೆ ಮಾಡಿರುವುದು ತಮ್ಮ ಜಾತಿ ಮನಸ್ಸಿಗೆ ಸಾಕ್ಷಿಯಾಗಿದೆ. ಆದ್ದರಿಂದ ಸಮೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಸಮರ್ಪಕ ಮತ್ತು ಪಾರದರ್ಶಕತೆಯಿಂದ ನಡೆಸಿ ರಾಜ್ಯದ ಯಾವೊಂದು ಕುಟುಂಬವು ಸಮೀಕ್ಷೆಯಿಂದ ಹೊರಗುಳಿಯದಂತೆ ಸರ್ಕಾರ ಕ್ರಮವಹಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತುಮಕೂರು ಸ್ಲಂ ಸಮಿತಿಯ ಪದಾಧಿಕಾರಿಗಳಾದ ಅರುಣ್, ತಿರುಮಲಯ್ಯ, ಕೃಷ್ಣಮೂರ್ತಿ, ಮುಬಾರಕ್, ಗೋವಿಂದರಾಜ್, ಶರಾದಮ್ಮ, ಮಂಗಳಮ್ಮ, ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯ ಅನುಪಮಾ, ಗಂಗಾ, ರಾಜೀವ್‌ಗಾಂಧಿ ಬಡಾವಣೆಯ ಮಾರಣ್ಣ, ಶಾಂತಪ್ಪ, ರಮೇಶ್,ಹನುಮಂತ, ಅಶ್ವತ್, ಕೆಂಪಣ್ಣ, ಮುಂತಾದವರು ಪಾಲ್ಗೊಂಡಿದ್ದರು.

(Visited 1 times, 1 visits today)