ತುಮಕೂರು: ತಾಲ್ಲೂಕು ವ್ಯಾಪ್ತಿ ನಂದಿಹಳ್ಳಿಯಿ0ದ ವಸಂತನರಸಾಪುರದವರೆಗೆ ನಿರ್ಮಾಣಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಹಂತ-೨ ಭೂಸ್ವಾಧೀನ ಪ್ರಕ್ರಿಯೆ ಹಿನ್ನೆಲೆಯಲ್ಲಿ ಪೆರಮನಹಳ್ಳಿ ಹಾಗೂ ದೊಡ್ಡನಾರವಂಗಲ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ರೈತರ ಆತಂಕ, ಸಮಸ್ಯೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ಅಡಚಣೆಗಳನ್ನು ಜಿಲ್ಲಾಧಿಕಾರಿಗಳು ಮನಗಂಡು ರೈತರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನ್ಯಾಯಸಮ್ಮತ ಹಾಗೂ ಕಾನೂನುಬದ್ಧ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದುರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಎಸ್. ಧರ್ಮಪಾಲ್ ಹಾಗೂ ರಾಜಸ್ವ ನಿರೀಕ್ಷಕರಾದ ಗುರು ಸಿದ್ದರಾಮಣ್ಣ ಮತ್ತು ಮ್ಯಾನೇ ಜರ್ ಅಭಯ್ ಅವರಿಗೆ ಸೂಚಿಸಿದರು.
ರೈತರ ಭೂಮಿ ಸರ್ಕಾರದ ಯೋಜನೆಗಳಿಗೆ ಅಗತ್ಯವಾದರೂ, ಅವರಿಗೆ ನ್ಯಾಯಯುತ ಪರಿ ಹಾರ ದೊರಕಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದ0ತೆ ಭೂಸ್ವಾಧೀನ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಸಂಬAಧಿಸಿದ0ತೆ ಬಾಣಾವರ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಗ್ರಾಮಸ್ಥರೊಂದಿಗೆ ಸಂವಾದಿಸಿ, ಸಮೀಕ್ಷೆಯ ಪ್ರಗತಿ ಹಾಗೂ ಜನರ ಸಹಕಾರ ಕುರಿತು ಮಾಹಿತಿ ಪಡೆದರು. ಸಮೀಕ್ಷೆಯ ಉದ್ದೇಶ ಮತ್ತು ಅದರ ಮಹತ್ವವನ್ನು ಗ್ರಾಮಸ್ಥರಿಗೆ ವಿವರಿಸಿ, ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕ ಭಾವನಾ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಹನು ಮಂತಪ್ಪ, ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)