ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕ ಬಿ.ಸುರೇಶ್‌ಗೌಡರು ಕೋಟ್ಯಾಂತರ ರೂ.ಗಳ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಮನೆಮನೆಗೆ ಕುಡಿಯುವ ನೀರು ಪೂರೈಕೆಗಾಗಿ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಅರೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿಯಲ್ಲಿ ೨೫ ಲಕ್ಷ ರೂ. ವೆಚ್ಚದ ಕಾಮಗಾರಿ, ಮಲ್ಲಸಂದ್ರದಲ್ಲಿ ೧.೬೬ ಕೋಟಿ ರೂ., ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಕ್ಕೋಡಿ ಗ್ರಾಮದಲ್ಲಿ ೧.೨೬ ಕೋಟಿ ರೂ.ಗಳ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಲ್ಲಸಂದ್ರದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ೨೫ ಲಕ್ಷ ರೂ. ಅಂದಾಜು ವೆಚ್ಚದ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ನಂತರ ತಿಮ್ಮರಾಜನಹಳ್ಳಿಯಲ್ಲಿ ೩೦ ಲಕ್ಷ ರೂ.ಗಳ ಸಭಾ ಭವನ ನಿರ್ಮಾಣ ಕಾರ್ಯಕ್ಕೆ ಶಾಸಕ ಸುರೇಶ್‌ಗೌಡ ಶಂಕುಸ್ಥಾಪನೆ ಮಾಡಿದರು.
ಎಲ್ಲಾ ಕಾರ್ಯಕ್ರಮಗಳಲ್ಲಿ ಆಯಾ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬಿಜೆಪಿ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.

(Visited 1 times, 1 visits today)