BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
  • ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ
  • ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ ಸ್ಥಾಪನೆ ಕೈಬಿಡುವಂತೆ ಸಿಪಿಐ ಆಗ್ರಹ
ಇತರೆ ಸುದ್ಧಿಗಳು

ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ ಸ್ಥಾಪನೆ ಕೈಬಿಡುವಂತೆ ಸಿಪಿಐ ಆಗ್ರಹ

By News Desk BenkiyabaleUpdated:November 06, 2025 3:21 pm

ತುಮಕೂರು: ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ (ಪಿಪಿಪಿ) ಸ್ಥಾಪನೆ ಕೈಬಿಡುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಈ ಸಂಬ0ಧ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಭಾರತ ಕಮ್ಯನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಈಗಾಗಲೇ ತುಮಕೂರು ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಹಾಗೂ ನವೀಕರಣದ ನೆಪದಲ್ಲಿ ನೆಲಸಮ ಮಾಡಿ ಖಾಸಗಿ ಸಹಭಾಗಿತ್ವಕ್ಕೆ ಒಪ್ಪಿಸಲು ಸಿದ್ಧತೆ ನಡೆಸಿರುವುದು ಖಂಡನೀಯ. ಸುಮಾರು ೩೨ ಎಕರೆ ಇದ್ದು ಜಿಲ್ಲಾಸ್ಪತ್ರೆಯನ್ನು ೫ ಎಕರೆಯಷ್ಟನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿದರು.
ಸಾವಿರಾರು ಕೋಟಿ ಬೆಲೆ ಬಾಳುವ ೩೨ ಎಕರೆ ಜಾಗದಲ್ಲಿ ಇರುವ ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿರ್ಮಾಣ ಮಾಡಿದರೆ ಮುಂದೆ ಖಾಸಗಿಯವರ ಸ್ವತ್ತಾಗಲಿದೆ. ಇದರಿಂದಾಗಿ ಬಡ ಮಕ್ಕಳು ವೈದ್ಯರಾಗುವ ಕನಸು ನನಸಾಗುವುದಿಲ್ಲ. ಆದ್ದರಿಂದ ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಸ್ಪತ್ರೆಯ ೩೨ ಎಕರೆ ಜಾಗದಲ್ಲಿ ೫ ಎಕರೆ ಒತ್ತುವರಿಯಾಗಿದೆ ಎಂಬ ಆರೋಪವಿದೆ. ಒತ್ತುವರಿಯಾಗಿರುವ ಜಾಗವನ್ನು ಕೂಡಲೇ ತೆರವುಗೊಳಿಸುವ ಕೆಲಸವನ್ನು ಸರ್ಕಾರ ಮಾಡಬೇಕಾಗಿದೆ ಎಂದರು.
ಸಣ್ಣ ಬಂಡವಾಳದ ಮೂಲಕ ಸರ್ಕಾರ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ನಿರ್ಮಾಣ ಮಾಡಬಹುದಾಗಿದೆ. ಆದರೆ ಸರ್ಕಾರ ಪಿಪಿಪಿ ಮಾಡೆಲ್‌ಗೆ ಮುಂದಾಗಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬಾರದು. ಕೂಡಲೇ ಪಿಪಿಪಿ ಮಾಡೆಲ್ ಕೈಬಿಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.
ಜಿಲ್ಲಾಸ್ಪತ್ರೆ ಆವರಣದಲ್ಲಿ ಫಾರ್ಮಸಿ ಕಾಲೇಜು, ನರ್ಸಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ ನುರಿತ ವೈದ್ಯರು, ಸಿಬ್ಬಂದಿ ವರ್ಗ ಕೆಲಸ ಮಾಡುತ್ತಿದ್ದು, ಪ್ರತಿದಿನ ನಗರ ಸೇರಿದಂತೆ ಜಿಲ್ಲೆಯಲ್ಲಿ ೧೫೦೦ ರಿಂದ ೨ ಸಾವಿರ ಹೊರ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿರಾರು ಕೋಟಿ ರೂ. ಮೌಲ್ಯದ ತುಮಕೂರು ಜಿಲ್ಲಾಸ್ಪತ್ರೆ ಸರ್ಕಾರಿ ಜಾಗವನ್ನು ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ತಡೆಗಟ್ಟುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದರು.
ಹಾಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಫಾರ್ಮಸಿ ಕಾಲೇಜು, ನರ್ಸಿಂಗ್ ಕಾಲೇಜು, ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ ನುರಿತ ವೈದ್ಯರು, ಸಿಬ್ಬಂದಿ ವರ್ಗ ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ನಗರ ಸೇರಿದಂತೆ ಜಿಲ್ಲೆಯಿಂದ ೧೫೦೦ ದಿಂದ ೨೦೦೦ ಸಾವಿರ ಹೊರ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ನವೆಂಬರ್ ೭ ರಂದು ಮುಖ್ಯಮಂತ್ರಿಗಳಿ0ದ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆಗೊಳ್ಳಲು ಸಜ್ಜಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿರುವ ತುಮಕೂರು ಜಿಲ್ಲಾಸ್ಪತ್ರೆ ಆವರಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಲು ಅರ್ಹವಾಗಿದೆ. ಆದರೆ ಖಾಸಗಿ ಸಹಭಾಗಿತ್ವವನ್ನು ಕೈಬಿಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.
ಸಿಪಿಐ(ಎ0) ರಾಜ್ಯ ಕಾರ್ಯದರ್ಶಿ ಸ್ವಾತಿ ಸುಂದರೇಶ್ ಮಾತನಾಡಿ, ಖಾಸಗಿಯವರ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರವನ್ನು ಅಭಿವೃದ್ದಿಪಡಿಸುವುದು ಒಂದು ಹುನ್ನಾರವಾಗಿದೆ. ಹಾಗೆಯೇ ತುಮಕೂರು ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣವನ್ನು ಪಿಪಿಪಿ ಮಾದರಿಯಲ್ಲಿ ಕೈಗೆತ್ತಿಕೊಳ್ಳುವುದು ಸಹ ಖಾಸಗಿಯವರ ಪಾರುಪತ್ಯಕ್ಕೆ ನೀಡುವುದಾಗಿದೆ. ಸರ್ಕಾರದ ಈ ನೀತಿ ಖಂಡನೀಯ ಎಂದರು.
ಯಾವುದೇ ಕಾರಣಕ್ಕೂ ಭಾರತೀಯ ಕಮ್ಯುನಿಸ್ಟ್ ಪಕ್ಷ ತುಮಕೂರು ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಖಾಸಗಿ ಸ್ಥಾಪನೆಗೆ ಅವಕಾಶ ನೀಡದಂತೆ ಹೋರಾಟ ನಡೆಸಲಿದೆ ಎಂದರು.
ರಾಜ್ಯದ ಆರೋಗ್ಯ ವ್ಯವಸ್ಥೆ ಸರ್ಕಾರದ ಕೈಯಲ್ಲೇ ಇರಬೇಕು. ಬಡವರಿಗೆ ಉಚಿತ ಆರೋಗ್ಯ ವ್ಯವಸ್ಥೆ ದೊರೆಯುವಂತೆ ಮಾಡಬೇಕಾದ್ದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಖಾಸಗೀ ಸಹಭಾಗಿತ್ವವನ್ನು (ಪಿಪಿಪಿ ಮಾದರಿ)ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜುನ್ನು ತೆರೆದು ಜನಸಾಮಾನ್ಯರಿಗೆ ಅನುಕೂಲ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಫಿಟ್‌ವೆಲ್‌ನ ಎಂಪ್ಲಾಯಿಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ರಮೇಶ್, ಉಮೇಶ್, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ರಾಜೇಶ್, ಜಿಲ್ಲಾ ಮಂಡಳಿ ಮಂಜುನಾಥ್, ಖಜಾಂಚಿ ಅಶ್ವತ್ಥ್ನಾರಾಯಣ್, ಜಿಲ್ಲಾ ಕಾರ್ಯದರ್ಶಿ ಕಂಬೇಗೌಡ, ಜಿ. ಚಂದ್ರಶೇಖರ್, ಭೂತರಾಜು ಸೇರಿದಂತೆ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಿದ್ದರು.

(Visited 1 times, 1 visits today)
Previous Articleರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ
Next Article ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ
News Desk Benkiyabale

Related Posts

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm news
ತಾಜಾ ಸುದ್ಧಿಗಳು
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm
news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm
news

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
news

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
Our Youtube Channel
Our Picks

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

By News Desk BenkiyabaleAugust 24, 2026 5:49 pm

ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ – ಶಿಸ್ತು ಅಗತ್ಯ. ಕೆಲಸ ಮಾಡುವಾಗ ಸಣ್ಣಪುಟ್ಟ ತಪುö್ಪಗಳು ಆಗುವುದು ಸಹಜ. ಆದರೆ,…

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.