
ತುಮಕೂರು: ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನ ಪ್ರವಾಹದ ಸಂಕೇತವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬಣ್ಣಿಸಿದ್ದಾರೆ. ತುಮಕೂರು ಜಿಲ್ಲೆಯ ಬಿದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ‘ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡ’ಗಳನ್ನು ಶುಕ್ರವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
“ಜ್ಞಾನಸಿರಿ” ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು ಬೆಳಗಿಸುವ, ನಿರಂತರವಾಗಿ ಹರಿಯುವ ಜ್ಞಾನದ ಪ್ರವಾಹವನ್ನು ಸಂಕೇತಿಸುತ್ತದೆ. ಹೊಸ ಶೈಕ್ಷಣಿಕ ಕಟ್ಟಡ ಮತ್ತು ಕಲಾ ಕಟ್ಟಡವು ವಿಶ್ವವಿದ್ಯಾನಿಲಯದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಈ ಕಟ್ಟಡಗಳು ಕಲಿಕಾ ಸೌಲಭ್ಯಗಳನ್ನು ಹೆಚ್ಚಿಸುತ್ತವೆ ಮತ್ತು ಸಂಶೋಧನೆ, ನಾವೀನ್ಯತೆ ಮತ್ತು ಸೃಜನಶೀಲತೆಗೆ ಹೊಸ ದೃಷ್ಟಿಕೋನಗಳನ್ನು ತೆರೆಯುತ್ತವೆ ಎಂದರು.
ಈ ನೂತನ ಕಟ್ಟಡಗಳು ಬೋಧನೆ, ತರಬೇತಿ, ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಮತ್ತಷ್ಟು ಬಲಪಡಿಸುವ ಆಧುನಿಕ ಸೌಲಭ್ಯಗಳನ್ನು ಹೊಂದಿವೆ. ಇದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ಒದಗಿಸುತ್ತದೆ. ಈ ಕಟ್ಟಡಗಳು ಹೊಸ ಶಕ್ತಿ, ಹೊಸ ನಿರ್ದೇಶನ ಮತ್ತು ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಸ್ಥಾಪನೆ ಶ್ಲಾಘನೀಯವಾಗಿದೆ. ಈ ಕೇಂದ್ರವು ರಾಷ್ಟಿçÃಯ ಸೇವೆಗೆ ಬದ್ಧರಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಿರ್ದೇಶನ ನೀಡುತ್ತದೆ. ಇಲ್ಲಿಂದ ಪದವಿ ಪಡೆಯುವ ವಿದ್ಯಾರ್ಥಿಗಳು ದೇಶದ ಆಡಳಿತ, ಶಿಕ್ಷಣ, ವಿಜ್ಞಾನ ಮತ್ತು ಸಮಾಜದ ಪ್ರತಿಯೊಂದು ಕ್ಷೇತ್ರಕ್ಕೂ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದರು.
ನಮ್ಮ ದೇಶವು ಸಾವಿರಾರು ವರ್ಷಗಳಿಂದ ಜ್ಞಾನದ ದೀಪವನ್ನು ಬೆಳಗಿಸುತ್ತಿದೆ. ವೇದ, ಉಪನಿಷತ್ತು, ಆಯುರ್ವೇದ, ಯೋಗ, ವಾಸ್ತು, ತತ್ವಶಾಸ್ತ, ನ್ಯಾಯಶಾಸ್ತ, ಇವು ನಮ್ಮ ಅಮೂಲ್ಯ ಪರಂಪರೆ. ಹೊಸ ಶಿಕ್ಷಣ ನೀತಿಯು ಈ ಜ್ಞಾನ ಧಾರೆಗಳನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೆ ಪರಿಚಯಿಸಿದೆ. ಇಂದಿನ ಯುವಪೀಳಿಗೆ ಈ ಜ್ಞಾನ ಧಾರೆಗಳನ್ನು ಆಧುನಿಕ ಸಂದರ್ಭದಲ್ಲಿ ಅರ್ಥಮಾಡಿಕೊಂಡು, ಸಂಶೋಧನೆ ನಡೆಸಬೇಕು ಮತ್ತು ಜಾಗತಿಕ ವೇದಿಕೆಯಲ್ಲಿ ಅವುಗಳನ್ನು ಪ್ರಸ್ತುತಪಡಿಸಬೇಕು” ಎಂದು ಸಲಹೆ ನೀಡಿದರು.
ಭಾರತ ಇಂದು ಸ್ವಾವಲಂಬನೆಯತ್ತ ಸಾಗುತ್ತಿದೆ. ಸ್ವಾವಲಂಬಿ ಭಾರತದ ಕನಸನ್ನು ನನಸಾಗಿಸಲು, ದೇಶವು “ಮೇಕ್ ಇನ್ ಇಂಡಿಯಾ” ನಂತಹ ಯೋಜನೆಯ ಮೂಲಕ ತನ್ನ ಪ್ರತಿಭೆ, ನಾವೀನ್ಯತೆ ಮತ್ತು ತಾಂತ್ರಿಕ ಸಾಮರ್ಥ್ಯಗಳನ್ನು ಬಲಪಡಿಸುತ್ತಿದೆ. ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ದಿಕ್ಕಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಡಿಜಿಟಲ್ ಇಂಡಿಯಾ ಮೂಲಕ, ನಮ್ಮ ದೇಶವು ಪಾರದರ್ಶಕತೆ ಮತ್ತು ಸಮಾನತೆಯ ಹೊಸ ಯುಗಕ್ಕೆ ನಾಂದಿ ಹಾಡಿದೆ. ಈ ಯೋಜನೆಗಳು ಶಿಕ್ಷಣ ಮತ್ತು ಆಡಳಿತವನ್ನು ಪ್ರತಿಯೊಬ್ಬ ನಾಗರಿಕನ ಬೆರಳ ತುದಿಗೆ ತಂದಿದೆ. ನಗರ ಮತ್ತು ಗ್ರಾಮೀಣ ಭಾರತದ ನಡುವಿನ ಅಂತರವನ್ನು ಕಡಿಮೆ ಮಾಡಿದೆ ಎಂದು ತಿಳಿಸಿದರು.
ಡಿಜಿಟಲ್ ಸಬಲೀಕರಣ ಮತ್ತು ಸ್ವಾವಲಂಬನೆಯ ಈ ಸಂಗಮವು ೨೦೪೭ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯತ್ತ ನಮ್ಮನ್ನು ಮುನ್ನಡೆಸುತ್ತಿದೆ. ಈ ಗುರಿಯನ್ನು ಸಾಧಿಸುವಲ್ಲಿ ನಮ್ಮ ವಿಶ್ವವಿದ್ಯಾಲಯಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಯುವ ಪೀಳಿಗೆಯಲ್ಲಿ ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ ಮತ್ತು ರಾಷ್ಟç ನಿರ್ಮಾಣದ ಮನೋಭಾವವನ್ನು ಬೆಳೆಸಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿರುವ ಈ ವಿಶ್ವವಿದ್ಯಾಲಯವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮಾತ್ರವಲ್ಲದೆ ಜ್ಞಾನ, ಸಂಶೋಧನೆ, ನಾವೀನ್ಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಶ್ರೀಮಂತ ಸಂಪ್ರದಾಯಗಳನ್ನು ಹೊಂದಿದೆ. ಈ ಸಾಧನೆಗಾಗಿ ವಿಶ್ವವಿದ್ಯಾನಿಲಯ ಕುಟುಂಬದ ಎಲ್ಲ ಸದಸ್ಯರು ಅಭಿನಂದನಾರ್ಹರು ಎಂದರು.
ಜ್ಞಾನಸಿರಿ ಹಾಗೂ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಸಚಿವರು, ಶಾಸಕರು, ಕುಲಪತಿ, ಎಂಜಿನಿಯರ್‌ಗಳು, ವಾಸ್ತುಶಿಲ್ಪಿಗಳು ಮತ್ತು ನಿರ್ಮಾಣ ಸಂಸ್ಥೆಗೆ ಅಭಿನಂದಿಸಿದರು.
ಸಮಾರಂಭದಲ್ಲಿ ಗೃಹ ಸಚಿವ ಡಾ: ಜಿ. ಪರಮೇಶ್ವರ, ಉನ್ನತ ಶಿಕ್ಷಣ ಸಚಿವ ಡಾ: ಎಂ.ಸಿ. ಸುಧಾಕರ್, ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ, ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ. ಜ್ಯೋತಿಗಣೇಶ್, ಕುಲಪತಿ ಪ್ರೊಫೆಸರ್ ಎಂ.ವೆ0ಕಟೇಶ್ವರಲು, ಕುಲಸಚಿವೆ ನಹೀದಾ ಜಮ್ ಜಮ್, ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಶಿಕ್ಷಣದಿಂದ ಮಾತ್ರ ದೇಶ ಬಲಿಷ್ಠ: ಡಾ: ಜಿ.ಪರಮೇಶ್ವರ
ದೇಶದಲ್ಲಿ ಪ್ರತಿವರ್ಷ ೧೨ಲಕ್ಷ ಎಂಜಿನಿಯರ್ ಹಾಗೂ ವೈದ್ಯ ಪದವೀಧರರು ಬರುತ್ತಿದ್ದಾರೆ. ಇದರಿಂದ ಜಗತ್ತಿನಾದ್ಯಂತ ಪ್ರತಿಭೆಗಳ ಮಹಾಪೂರವೇ ಹರಿಯುತ್ತಿದೆ. ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ ನೆಹರೂ ಅವರು ಶಿಕ್ಷಣಕ್ಕೆ ಒತ್ತು ನೀಡಿದ ಪರಿಣಾಮ ಎಂದ ಅವರು, ಪ್ರಾಚೀನ ಭಾರತದಿಂದಲೂ ತಕ್ಷಶಿಲಾ, ನಳಂದ ವಿಶ್ವವಿದ್ಯಾಲಯಗಳಿಂದಲೂ ದೇಶದಲ್ಲಿ ಶಿಕ್ಷಣ ಕ್ರಾಂತಿ ನಡೆದಿದೆ ಎಂದರು.
ಇಂದಿನ ಯುವ ಸಮುದಾಯ ಆಧುನಿಕ ಜಗತ್ತಿಗೆ ಒಗ್ಗಿಕೊಳ್ಳಬೇಕಿದೆ ಎಂದ ಅವರು, ಎಐ ಮತ್ತು ರೋಬೋಟಿಕ್ ತಂತ್ರಜ್ಞಾನದ0ತಹ ಹೊಸ ಅನ್ವೇಷಣೆಗಳತ್ತ ಗಮನ ಹರಿಸಬೇಕು. ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದರು.
ತುಮಕೂರು ಜಿಲ್ಲೆ ಈಗಾಗಲೇ ಶಿಕ್ಷಣ ಕಾಶಿ ಎಂಬುದನ್ನು ಸಾಬೀತು ಮಾಡಿದೆ. ಮೂರು ವೈದ್ಯಕೀಯ ಕಾಲೇಜುಗಳು, ಎಂಜಿನಿಯರಿ0ಗ್ ಕಾಲೇಜುಗಳು, ಪ್ರತಿ ತಾಲೂಕಿನಲ್ಲೂ ಪದವಿ ಕಾಲೇಜುಗಳು ಇದ್ದು, ಗ್ರಾಮೀಣ ಪ್ರದೇಶದ ಬಡವರಿಗೆ, ಪರಿಶಿಷ್ಟ ಹಾಗೂ ಹಿಂದುಳಿದ ಬಡ ವಿದ್ಯಾರ್ಥಿಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ಅನುಕೂಲವಾಗುತ್ತಿದೆ ಎಂದರು.
ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಹೆದ್ದಾರಿ ಸಂಪರ್ಕ ರಸ್ತೆ, ಬೋಧಕ ಸಿಬ್ಬಂದಿ ಸೇರಿದಂತೆ ಹಣಕಾಸಿನ ನೆರವು ಅಗತ್ಯವಿದ್ದು, ಸರ್ಕಾರ ಮುಂದಿನ ದಿನಗಳಲ್ಲಿ ಅಗತ್ಯ ನೆರವು ನೀಡಲಿದೆ ಎಂದರು.
ವಿಶ್ವವಿದ್ಯಾಲಯಗಳಿಗೆ ಪೂರಕ ಸೌಲಭ್ಯ:
ಅಧ್ಯಕ್ಷತೆ ವಹಿಸಿದ್ದ ಉನ್ನತ ಶಿಕ್ಷಣ ಸಚಿವ ಡಾ: ಎಂ.ಸಿ.ಸುಧಾಕರ್ ಮಾತನಾಡಿ, ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬ0ಧಿಸಿದ0ತೆ ಬೇಡಿಕೆಗಳು ಬರುತ್ತಿವೆ. ಆದರೆ ಭೌತಿಕ ಕಟ್ಟಡಗಳನ್ನು ಕಟ್ಟಿಸಿದಾಕ್ಷಣ ಜ್ಞಾನಕೇಂದ್ರ ಆಗುವುದಿಲ್ಲ. ಅದಕ್ಕೆ ಪೂರಕ ಮೂಭೂತ ಸೌಲಭ್ಯ, ಬೋಧಕ ಸಿಬ್ಬಂದಿ ಸೇರಿದಂತೆ ಪೂರಕ ವಾತಾವರಣ ನಿರ್ಮಿಸಬೇಕು ಎಂದರು.
ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ ೫೦೦ ಕೋಟಿ ರೂ.ಗಳ ವಿಸ್ತೃತ ಯೋಜನೆಯಿದ್ದು, ಮುಂದಿನ ದಿನಗಳಲ್ಲಿ ಎಲ್ಲವನ್ನೂ ಪೂರೈಸಲಾಗುವುದು ಎಂದರು.
ರಾಜ್ಯದ ಬಡ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಕನಸಿನ ಮಾತಾಗಿತ್ತು. ಆದರೆ ರಾಜ್ಯ ಸರ್ಕಾರ ಬ್ರಿಟನ್ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದೇಶಿ ಶಿಕ್ಷಣ ಕೊಡಿಸಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿ ರಾಜ್ಯದ ೬ ವಿಶ್ವವಿದ್ಯಾಲಯದ ತಲಾ ಐದು ವಿದ್ಯಾರ್ಥಿಗಳನ್ನು ಆಯ್ದು ಲಂಡನ್ ಪ್ರವಾಸಕ್ಕೆ ಕಳಿಸಲಾಗಿತ್ತು. ಮರಳಿ ಬಂದ ವಿದ್ಯಾರ್ಥಿಗಳಲ್ಲಿ ಹೊಸ ಬದಲಾವಣೆ ಬಂದಿದೆ ಎಂದ ಅವರು, ರಾಜ್ಯದ ೮ ಸರ್ಕಾರಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣ ಕೊಡಿಸುವ ಸಂಬ0ಧ ಗ್ಲೋಬಲ್ ವೇಲ್ಸ್ ಸಂಸ್ಥೆಯೊ0ದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಅಲ್ಲದೆ ಈಗಾಗಲೆ ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿ0ದ ರಾಜ್ಯದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಲಾಗಿದೆ. ಈಗಾಗಲೆ ೩೭,೦೦೦ ವಿದ್ಯಾರ್ಥಿನಿಯರು ನೋಂದಾಯಿಸಿಕೊAಡಿದ್ದಾರೆ. ಜನವರಿಯಿಂದ ಮತ್ತೆ ನೋಂದಾಯಿಸಿಕೊಳ್ಳಲಾಗುವುದು. ಬಡ ವಿದ್ಯಾರ್ಥಿನಿಯರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಮಾರ0ಭದಲ್ಲಿ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ. ಜಯಚಂದ್ರ, ಶಾಸಕರಾದ ಬಿ. ಸುರೇಶ್ ಗೌಡ, ಜಿ.ಬಿ. ಜ್ಯೋತಿಗಣೇಶ್, ಕುಲಪತಿ ಪ್ರೊಫೆಸರ್ ಎಂ. ವೆಂಕಟೇಶ್ವರಲು, ಕುಲಸಚಿವೆ ನಹೀದಾ ಜಮ್ ಜಮ್, ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.





