BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ
ಇತರೆ ಸುದ್ಧಿಗಳು

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

ಸಹಕಾರ ಸಂಘಗಳ ಸಹಾಯಕ ನಿಬಂಧಕರ ವಿರುದ್ಧ ಪಟ್ಟಣದಲ್ಲಿ ಪ್ರತಿಭಟನೆ
By News Desk BenkiyabaleUpdated:November 21, 2025 3:27 pm

ತುಮಕೂರು: ಗುಬ್ಬಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಅನುಮೋದನೆ ನೀಡದೆ, ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ತುಮುಲ್ ನಿರ್ದೇಶಕರಾದ ಭಾರತಿ ಶ್ರೀನಿವಾಸ್ ನೇತೃತ್ವದಲ್ಲಿ ಗುಬ್ಬಿ ತಾಲೂಕಿನ ವಿವಿಧ ಗ್ರಾಮಗಳ ಜನರು ಪ್ರತಿಭಟನೆ ನಡೆಸಿದರು.

ನಗರದ ಟೌನ್‌ಹಾಲ್ ಬಳಿಯ ಅಂಬೇಡ್ಕರ್ ಪ್ರತಿಮೆಯ ಬಳಿ ಸಮಾವೇಶಗೊಂಡ ಗುಬ್ಬಿ ತಾಲೂಕಿನ ವಿವಿಧ ಗ್ರಾಮಗಳ ಜನರು ಎ.ಆರ್. ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೂಡಲೇ ಗುಬ್ಬಿ ತಾಲೂಕಿನಲ್ಲಿ ಪ್ರಾಸ್ತಾವನೆ ಸಲ್ಲಿಸಿರುವ ಗ್ರಾಮಗಳಲ್ಲಿ ಹಾಲಿನ ಡೈರಿ ಸ್ಥಾಪಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ ಮನವಿಯನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ತುಮುಲ್ ನಿರ್ದೇಶಕರಾದ ಶ್ರೀಮತಿ ಭಾರತಿ ಶ್ರೀನಿವಾಸ್, ತುಮಕೂರು ಡೈರಿಗೆ ಬರುವ ಹಾಲಿನಲ್ಲಿ ಗುಬ್ಬಿ ತಾಲೂಕಿನ ಹಾಲಿನ ಪ್ರಮಾಣ ಹೆಚ್ಚಾಗಿದೆ. ಹೆಚ್ಚು ಹಾಲು ಉತ್ಪಾಧಿಸುತ್ತಿರುವ ಸುಮಾರು ೩೨ ಉಪಕೇಂದ್ರಗಳಲ್ಲಿ ೯ ಕೇಂದ್ರಗಳಲ್ಲಿ ಮುಖ್ಯ ಡೈರಿಗಳಾಗಿ ಪರಿವರ್ತಿಸಲು ಅನುಮತಿ ಕೋರಿ ೬ ತಿಂಗಳ ಹಿಂದೆಯೇ ಸಹಕಾರ ಇಲಾಖೆಗಳ ಸಹಾಯಕ ನಿಬಂಧಕರಿಗೆ ಮನವಿ ಸಲ್ಲಿಸಲಾಗಿದೆ.ಆದರೆ ಇದುವರೆಗೂ ಒಂದು ಡೈರಿ ಸ್ಥಾಪನೆಗೂ ಅನುಮತಿ ನೀಡಿಲ್ಲ.ಕಡಬ ಮತ್ತಿತರ ಗ್ರಾಮಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಅಲ್ಲಿನ ತೀರ್ಮಾನದಂತೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಅನುಮತಿ ನೀಡಲು ಮೀನಾಮೇಷ ಎಣಿಸಲಾಗುತ್ತಿದೆ.ಸಕಾರಣ ನೀಡದೆ ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ದೂರಿದರು.

ಕಡಬ ಗ್ರಾಮಕ್ಕೆ ಸಂಬ0ಧಪಡದ ವ್ಯಕ್ತಿಯೊಬ್ಬರು ನೀಡಿದ ತಕರಾರು ಅರ್ಜಿಯನ್ನು ಮುಂದಿಟ್ಟುಕೊ0ಡು ಹಲವರು ಗ್ರಾಮಗಳ ಡೈರಿ ತೆರೆಯಲು ಅನುಮತಿ ನಿರಾಕರಿಸುವ ಕೆಲಸವನ್ನು ಎ.ಆರ್.ರವರು ಮಾಡಿದ್ದಾರೆ.ನಿಯಮದ ಪ್ರಕಾರ ಖಾಸಗಿ ಡೈರಿಗೆ ಹಾಲು ಹಾಕುತ್ತಿರುವ ವ್ಯಕ್ತಿಯಿಂದ ತುಮುಲ್ ಡೈರಿ ನಿರ್ಮಾಣಕ್ಕೆ ಷೇರ ಸಂಗ್ರಹಿಸಲು ಅವಕಾಶವಿಲ್ಲ.ಆದರೆ ತುಮುಲ್‌ನ ಎಂ.ಡಿ ಮತ್ತು ಅಧಿಕಾರಿಗಳು ಯಾರದೋ ಮುಲಾಜಿಗೆ ಒಳಗಾದವಂತೆ ಖಾಸಗಿ ಡೈರಿಗೆ ಹಾಲು ಹಾಕುವವರಿಂದಲೂ ಷೇರು ಸಂಗ್ರಹಿಸಿ ಎಂದು ಮೌಖಿಕವಾಗಿ ಹೇಳುತ್ತಾರೆ.ಲಿಖಿತ ರೂಪದಲ್ಲಿ ಕೊಡಿ ಎಂದರೆ ನೀಡಲು ಹಿಂಜರಿಯುತ್ತಿದ್ದಾರೆ. ಇದರ ಹಿಂದೆ ಮೂರನೇ ವ್ಯಕ್ತಿಯ ಕೈವಾಡ ಇರುವುದು ಕಂಡು ಬರುತ್ತಿದೆ.ಎ.ಆರ್.ಅವರ ವರ್ತನೆ ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಡೈರಿಗಾಗಿ ಅರ್ಜಿ ಸಲ್ಲಿಸಿರುವ ೩೨ ಗ್ರಾಮಗಳ ಜನರು ತಮ್ಮ ಎಮ್ಮೆ, ಹಸು,ಕರುಗಳೊಂದಿಗೆ ಎ.ಆರ್.ಕಚೇರಿ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಭಾರತಿ ಶ್ರೀನಿವಾಸ್ ಎಚ್ಚರಿಸಿದರು.

ಹಾಲು ಉತ್ಪಾದಕರು ನನಗೆ ಮತ ನೀಡಿ, ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ನನ್ನ ಗುರಿ ಇರುವುದು ಜಿಲ್ಲೆಯಲ್ಲಿ ಗುಬ್ಬಿ ತಾಲೂಕು ಹಾಲು ಹಾಕುವುದರಲ್ಲಿ ಪ್ರಥಮ ಸ್ಥಾನದಲ್ಲಿ ಇರಬೇಕು ಎಂಬುದು,ನಮ್ಮ ತಾಲೂಕಿನಲ್ಲಿ ಅಷ್ಟು ಹಾಲು ಉತ್ಪಾಧನೆ ಯಾಗುತ್ತಿದೆ.ಸಿಕ್ಕ ಅವಕಾಶವನ್ನು ಬಳಸಿಕೊಂಡು ನಾಲ್ಕು ಜನರಿಗೆ ಅನುಕೂಲ ಮಾಡಿಕೊಡುವ ಕೆಲಸಕ್ಕೆ ಮುಂದಾದರೆ ಕಾಣದ ಕೈಗಳು ಅದನ್ನು ತಡೆಯಲು ಪ್ರಯತ್ನಿಸುತ್ತಿದೆ.ಬೇರೆ ತಾಲೂಕುಗಳಿಗೆ ಇಲ್ಲದೆ ನಿರ್ಭಂಧ ನಮ್ಮ ಗುಬ್ಬಿ ತಾಲೂಕಿಗೆ ಇದೆ.ತುಮುಲ್ ಮತ್ತು ಖಾಸಗಿ ಡೈರಿಯವರ ನಡುವೆ ಒಳಒಪ್ಪಂದ ನಡೆದಿದೆಯೇ ಎಂಬ ಅನುಮಾನ ಮೂಡುತ್ತಿದೆ.ಮಾವಿನ ಹಳ್ಳಿಯ ವ್ಯಕ್ತಿ ಕಡಬದಲ್ಲಿ ಡೈರಿ ಮಾಡಲು ಅಕ್ಷೇಪ ಸಲ್ಲಿಸಿದರೆ ಒಪ್ಪಿಕೊಳ್ಳಲು ಸಾಧ್ಯವೇ ? ಇದರ ಹಿಂದೆ ಇರುವವರು ಯಾರು ಎಂಬುದು ಜನತೆಗೆ ತಿಳಿಯಬೇಕು. ನಮಗೆ ಜನರು ಕೊಟ್ಟಿರುವ ಅಧಿಕಾರವನ್ನು ಬಳಕೆ ಮಾಡಿಕೊಳ್ಳಲು ಅಡ್ಡಿ ಪಡಿಸಬಾರದು ಎಂದು ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಾಕೀತು ಮಾಡಿದರು.

ಪ್ರತಿಭಟನೆಯಲ್ಲಿ ಕೋಡಿಯಾಲ ಮಹದೇವ್,ಮಳೆನಹಳ್ಳಿ ನಟರಾಜು, ಲಿಂಗಮನಹಳ್ಳಿ ಚೇತನ್, ಚೇಳೂರು ಸೋಮೇಶ್, ಕಡಬ ದರ್ಶನ್, ಯೋಗೀಶ್‌ಗೌಡ ಎಂ.ಹೆಚ್.ಪಟ್ನ,ಗುರುರೇಣುಕರಾಧ್ಯ, ಸಣ್ಣ ರಂಗಯ್ಯ ಹೂವಿನಕಟ್ಟೆ, ಯೋಗೀಶ್, ಫಣೀಂದ್ರ ಬಿದರೆ ಹಳ್ಳ ಕಾವಲ್, ಆರೀಫ್ ಸೋನಿ ಲಿಂಗಮನಹಳ್ಳಿ ಹಾಗೂ ಗುಬ್ಬಿ ತಾಲೂಕಿನ ವಿವಿಧ ಹಳ್ಳಿಗಳ ಜನರು ಭಾಗವಹಿಸಿದ್ದರು.

 

(Visited 1 times, 1 visits today)
Previous Articleಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ
Next Article ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು: ಶಾಸಕ ಹೆಚ್.ವಿ.ವೆಂಕಟೇಶ್ ಸೂಚನೆ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.