
algolist: 0;
multi-frame: 1;
brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 42;
ಪಾವಗಡ: ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ಯೋಜನೆಗಳ ಬಗ್ಗೆ ಪ್ರಚಾರ ಕೈಗೊಂಡು ಯೋಜನೆಗಳು ದೊರಕಿಸಿಕೊಡುವ ಕೆಲಸ ಆಗಬೇಕಾಗಿದೆ ಎಂದು ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಲಜೀವನ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು, ಬಾಕಿ ಉಳಿದ ಕಾಮಗಾರಿಗಳು ಗುಣಮಟ್ಟ ಕಾಯ್ದುಕೊಂಡು ಶೀಘ್ರ ಪೂರ್ಣಗೊಳಿಸುವಂತೆ ಸಂಬ0ಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಸೋಲಾರ್ ಕಂಪನಿಗಳು ನಮ್ಮ ನೆಲ, ಜಲವನ್ನು ಬಳಸಿಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೆ ಇರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕಂಪನಿಗಳ ಬಗ್ಗೆ ವರದಿ ತಯಾರಿಸಿ ಉದ್ಯೋಗ ಪಟ್ಟಿಯನ್ನು ತಕ್ಷಣ ನೀಡಬೇಕು. ನಮ್ಮಲ್ಲಿ ಸಾಕಷ್ಟು ಪ್ರತಿಭಾನ್ವಿತರಿದ್ದಾರೆ. ಇಂತವರಿಗೆ ಉದ್ಯೋಗ ದೊರಕಬೇಕು ಎಂದರು.
ಶೈಕ್ಷಣಿಕ, ಆರೋಗ್ಯ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.
ಸಾಮಾಜಿಕ ಅರಣ್ಯ ಪ್ರಗತಿಯ ಬಗ್ಗೆ ವಿವರ ಕೇಳಿದ ಶಾಸಕರು, ತಾಲ್ಲೂಕಿನಾದ್ಯಂತ ಗಿಡಗಳನ್ನು ನೆಡುವ ಪ್ರಕ್ರಿಯೆ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ಕೊರತೆಗಳು ಉಂಟಾದಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿಗೊಳಿಸುವ ಬಗ್ಗೆ ಅಗತ್ಯ ಕ್ರಮವಹಿಸಬೇಕು ಎಂದು ನುಡಿದರು.
ಪಂಚಾಯಿತ್ ರಾಜ್ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಅದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಂದ ಪ್ರಗತಿಯ ಬಗ್ಗೆ ಚರ್ಚೆ ನಡೆಸಿ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ತರಕಾರಿ ಹಾಗೂ ಆಹಾರ ಪದಾರ್ಥಗಳನ್ನು ಒದಿಗಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತ ಅಧಿಕಾರಿಗಳಾದ ಈಶ್ವರಪ್ಪ, ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ರವಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ.ಉತ್ತಮ ತಾ.ಪಂ ಸಹಾಯಕ ನಿರ್ದೇಶಕರಾದ ಮಾರುತಿ ಪ್ರಸಾದ್,ತಾಲ್ಲೂಕು ಗ್ಯಾರೆಂಟಿ ಸಮಿತಿಗಳ ಅಧ್ಯಕ್ಷರಾದ ಪಾಪಣ್ಣ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.



