
ಚಿಕ್ಕನಾಯಕನಹಳ್ಳಿ: ಧರ್ಮಸ್ಥಳದ ಹಲವು ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿಯಾಗಿದೆ ಎಂದು ಕುಪ್ಪೂರು ತಮಡಿಹಳ್ಳಿ ವಿರಕ್ತ ಮಠದ ಡಾಕ್ಟರ್ ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಮಹಾ ಸ್ವಾಮೀಜಿಯವರು ಹೇಳಿದರು.
ತಾಲೂಕಿನ ಕಂದಿಕೆರೆ ವಲಯದ ತಿಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹುಚ್ಚಣ್ಣ ಕಟ್ಟೆ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ತಮ್ಮಡಿಹಳ್ಳಿ ಮಠದ ಶ್ರೀ ಗಳು ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಕ್ರಮಗಳು ನಿತ್ಯ ನಿರಂತರೊ0ದಿಗೆ ಸ್ವಾವಲಂಬಿ ಬದುಕಿನ ದಾರಿ ದೀಪವಾಗಿದೆ ಹಾಗೂ ಪೂಜ್ಯರು ನಮ್ಮೆಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಪ್ರಕಾಶ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ಜನಜಾಗೃತಿ ವೇದಿಕೆ ಸದಸ್ಯರಾದ ಉಮೇಶ್ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಮಾಡದ ಕಾರ್ಯಕ್ರಮವಿಲ್ಲ. ಸರಕಾರ ಮಾಡದಂತಹ ಕಾರ್ಯಕ್ರಮಗಳನ್ನು ಪೂಜ್ಯರು ಇಂತಹ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತೆ ಸಮಾಜಮುಖಿ ಕಾರ್ಯಕ್ರಮಗಳನ್ನ ಮಾಡುತ್ತಿದ್ದಾರೆ. ಹಾಗೂ ಶಾಲೆಗಳಿಗೆ ಶುದ್ಧ ನೀರಿನ ಘಟಕಗಳ ಸ್ಥಾಪನೆ ಹಾಗೂ ಜನಪರ ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ತಾಲೂಕಿನ ಯೋಜನಾಧಿಕಾರಿಗಳಾದ ಪ್ರೇಮಾನಂದ್ ಮಾತನಾಡಿ, ಹುಚ್ಚಣ್ಣ ಕಟ್ಟೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಈ ದಿನ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡುತ್ತಿದ್ದು, ಊರಿನ ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಂಡು ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿದರು.
ಕೆರೆ ಸಮಿತಿ ಅಧ್ಯಕ್ಷರಾದ ತನ್ಮನ್, ಪಿಡಿಒ ಬಾಬು ಶ್ರೀನಿವಾಸ, ಪಂಚಾಯತ್ ಅಧ್ಯಕ್ಷರಾದ ನೇತ್ರಾವತಿ, ವಲಯದ ಮೇಲ್ವಿಚಾರಕರಾದ ಗಾಯತ್ರಿ, ಕೃಷಿ ಮೇಲ್ವಿಚಾರಕರಾದ ಪ್ರಕಾಶ್ ಕೆರೆ ಸಮಿತಿ ಸದಸ್ಯ ರುಗಳು,ಪಂಚಾಯತ್ ಸದಸ್ಯರುಗಳು.ವಲಯದ ಸೇವಪ್ರತಿನಿಧಿಗಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.





