ತುಮಕೂರು: ಜಿಲ್ಲೆಯಲ್ಲಿ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಂಬ0ಧಿಸಿದ0ತೆ ಮತದಾರರ ಪಟ್ಟಿಗೆ ೨೩,೦೮೦ ಪುರುಷ ಹಾಗೂ ೧೬, ೯೭೧ ಮಹಿಳಾ ಪದವೀಧರರು ಸೇರಿ ಒಟ್ಟು ೪೦,೦೫೧ ಸೇರ್ಪಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪದವೀಧರ ಕ್ಷೇತ್ರದ ಚುನಾವಣೆ ಮತದಾರರ ಪಟ್ಟಿ ತಯಾರಿಕೆ ಹಾಗೂ ಇತರೆ ಚುನಾವಣಾ ಕುರಿತು ಮಾನ್ಯತೆ ಪಡೆದ  ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆಗ್ನೇಯ ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿ ಈಗಾಗಲೇ ಪ್ರಕಟಿಸಲಾಗಿದೆ ಎಂದರು.
ಈ ಕರಡು ಪಟ್ಟಿಯಲ್ಲಿ ಸೇರ್ಪಡೆ ಹಾಗೂ ತಿರಸ್ಕೃತ ವಾಗಿರುವ ಪದವೀಧರರ ಅರ್ಜಿಗಳನ್ನು ಪುನಃ ಪರಿಶೀ ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಮಾಹಿತಿ ತಿದ್ದುಪಡಿ ಅಥವಾ ಪೂರಕ ದಾಖಲೆಗಳ ತಿದ್ದುಪಡಿ ಮಾಡಿ ಸಲು ಹಾಗೂ ಹೊಸದಾಗಿ ನೋಂದಾಯಿಸಿಕೊಳ್ಳಲು ಡಿ. ೧೦ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಪ್ರಭಾರ ಚುನಾವಣಾ ತಹಶೀಲ್ದಾರ್  ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪದಾಧಿ ಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)