BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಿಪಟೂರಿನಲ್ಲಿ ವಿವಿಧ ಕಡೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ: ಅಧಿಕಾರಿಗಳಿಗೆ ಕಡಕ್ ಸೂಚನೆ
ಇತರೆ ಸುದ್ಧಿಗಳು

ತಿಪಟೂರಿನಲ್ಲಿ ವಿವಿಧ ಕಡೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ: ಅಧಿಕಾರಿಗಳಿಗೆ ಕಡಕ್ ಸೂಚನೆ

By News Desk BenkiyabaleUpdated:December 01, 2025 2:52 pm

ತುಮಕೂರು: ಶನಿವಾರ ಬೆಳ್ಳಂ ಬೆಳಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಿಪಟೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ವಿದ್ಯಾರ್ಥಿ ನಿಲಯಗಳು ಮತ್ತು ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವಚ್ಛತೆ, ಮೂಲಸೌಕರ್ಯ ಮತ್ತು ಗುಣಮಟ್ಟ ಕುರಿತು ಅಧಿಕಾರಿಗಳಿಗೆ ಕಡಕ್ ಸೂಚನೆಗಳನ್ನು ನೀಡಿದರು.
ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ:
ಉಪಲೋಕಾಯುಕ್ತರ ಭೇಟಿ ಹಿನ್ನೆಲೆಯಲ್ಲಿ ಎಪಿಎಂಸಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿ, ಬೆಳ್ಳಂ ಬೆಳಗ್ಗೆ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದ್ದರು. ಉಪಲೋಕಾಯುಕ್ತರು ಸ್ಥಳಕ್ಕೆ ಭೇಟಿ ನೀಡಿದ ವೇಳೆ ರೈತರೊಂದಿಗೆ ಮಾತನಾಡಿದಾಗ ಮಾರುಕಟ್ಟೆಯ ಅವ್ಯವಸ್ಥೆ ಬಗ್ಗೆ ರೈತರು ತಮ್ಮ ಅಸಮಾಧಾನವನ್ನು ಹೊರಹಾಕುತ್ಥಾ ಇಂದು ಮಾತ್ರ ಸ್ವಚ್ಛತೆ ಇದೆ. ಉಳಿದ ದಿನಗಳಲ್ಲಿ ಇಲ್ಲಿಯ ಅನೈರ್ಮಲ್ಯತೆಯನ್ನು ಊಹಿಸಲೂ ಸಾಧ್ಯವಿಲ್ಲ. ಅಂಗಡಿಗಳನ್ನು ಅನುಕೂಲಕ್ಕೆ ತಕ್ಕಂತೆ ಹಂಚಿಕೆ ಮಾಡಿದ್ದು, ಅವರಿಗೆ ಇಷ್ಟ ಬಂದ ಹಾಗೆ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ರೈತರು ದೂರು ನೀಡಿದರು.
ರೈತರ ಅಹವಾಲು ಆಲಿಸಿದ ಉಪಲೋಕಾಯುಕ್ತರು ತಕ್ಷಣವೇ ಎಪಿಎಂಸಿ ಅಧಿಕಾರಿಗಳಿಗೆ ಅಂಗಡಿಗಳ ಹಂಚಿಕೆ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಶುಲ್ಕವನ್ನು ನಿಗದಿಪಡಿಸಬೇಕು. ಮಾರುಕಟ್ಟೆಯ ಸ್ವಚ್ಛತೆಯನ್ನು ದಿನನಿತ್ಯ ಇದೇ ರೀತಿಯಲ್ಲಿ ಕಾಯ್ದುಕೊಳ್ಳಬೇಕು. ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸಬೇಕು. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಮಳೆ ಬಂದಾಗ ರೈತರಿಗೆ ಆಶ್ರಯ ವ್ಯವಸ್ಥೆ ಒದಗಿಸಬೇಕು ಎಂದು ಸೂಚನೆ ನೀಡಿದರು.
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಪರಿಶೀಲನೆ: ನಂತರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ನಿಲ್ದಾಣದಲ್ಲಿರುವ ಹೋಟೆಲ್‌ಗಳಲ್ಲಿ ಊಟ-ತಿಂಡಿ-ತಿನಿಸಿನ ದರಗಳ ಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಅವಧಿ ಮುಗಿದ ತಂಪು ಪಾನೀಯ, ಮತ್ತಿತರ ತಿಂಡಿ ತಿನಿಸುಗಳನ್ನು ಮಾರಾಟ ಮಾಡಬಾರದು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಪೀಕ್ ಅವಧಿಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿ ನಿಲಯಗಳ ಪರಿಶೀಲನೆ : ಡಾ: ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಾಸಿಗೆಯ ವ್ಯವಸ್ಥೆ ಕಲ್ಪಿಸಬೇಕು. ನೀರಿನ ಶೇಖರಣಾ ಟ್ಯಾಂಕ್‌ಗಳ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರಿಗೆ ಸೂಚಿಸಿದರು.
ಸ್ಥಳದಲ್ಲಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಕಡೆ ಗಮನಹರಿಸಿ ತಂದೆ ತಾಯಿಯರಿಗೆ ಗೌರವ ತರುವಂತರಾಗಬೇಕು ಎಂದು ಹಿತೋಪದೇಶ ನೀಡಿದರು.
ನಂತರ ನಗರದ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು ನಿಮ್ಮ ಮುಂದಿನ ಭವಿಷ್ಯ ಶಿಕ್ಷಣದಲ್ಲಿ ಅಡಗಿದೆ. ಪ್ರೀತಿ-ಪ್ರೇಮದ ಕಡೆ ಗಮನ ಕೊಡದೆ ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು. ಮುಂದಿನ ದಿನಗಳಲ್ಲಿ ನೀವು ಉನ್ನತ ಮಟ್ಟದ ಹುದ್ದೆಗಳನ್ನು ಪಡೆದು ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ದನಿಯಾಗಬೇಕು ಎಂದು ಪ್ರೇರೇಪಿಸಿದರು.
ಪ್ರತಿ ತಿಂಗಳು ವಿದ್ಯಾರ್ಥಿನಿಯರಿಗೆ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು. ನಿಲಯದಲ್ಲಿ ಹೆಚ್ಚು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಊಟದ ವಿಚಾರದಲ್ಲಿ ಯಾವುದೇ ಅಸಡ್ಡೆ ತೋರದೆ ಗುಣಮಟ್ಟ ಕಾಯ್ದುಕೊಳ್ಳಬೇಕು. ನಿಲಯದಿಂದ ಸಿಗುವ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸಬೇಕೆಂದು ಸೂಚನೆ ನೀಡಿದರು.
ಕೆರೆಗಳ ಸ್ವಚ್ಛತೆ ಮತ್ತು ನೀರಿನ ಗುಣಮಟ್ಟ ಪರಿಶೀಲನೆ: ಹಿಂಡಿಸ್ಕೆರೆ ಹಾಗೂ ಈಚನೂರು ಕೆರೆಗಳಿಗೆ ಭೇಟಿ ನೀಡಿದ ಉಪಲೋಕಾಯುಕ್ತರು ಕೆರೆಯನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಬೇಕು. ಕೆರೆಯ ಸಮೀಪದಲ್ಲಿರುವ ಕೊಳವೆ ಬಾವಿಗಳ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ವರದಿ ನೀಡುವಂತೆ ಪರಿಸರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಉಪನಿಬಂಧಕ ಅರವಿಂದ ಎನ್.ವಿ. ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ಜಿ.ವಿ. ಮೋಹನ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

(Visited 1 times, 1 visits today)
Previous Articleಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ
Next Article ನಗರದಲ್ಲಿ ಸಾವಿರಾರು ನೌಕರರ ಅಹೋರಾತ್ರಿ ಧರಣಿ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.