
ತುಮಕೂರು: ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರು ವೇಕೆರೆ ತಾಲೂಕುಗಳಿಗೆ ಸಂಬ0ಧಿಸಿದ0ತೆ ಲೋಕಾಯುಕ್ತದಲ್ಲಿ ದಾಖಲಾಗಿ ಬಾಕಿಯಿರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ
ನಡೆಸಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ೭೭ ದೂರುಗಳ ವಿಚಾರಣೆ ನಡೆಸಿ, ಸ್ಥಳದಲ್ಲೇ ೫೬ ದೂರುಗಳನ್ನು ಇತ್ಯ ರ್ಥಪಡಿಸಿದರು.
ಉಳಿದ ೨೧ ದೂರುಗಳಿಗೆ ಕಾನೂನಾತ್ಮಕ ಪರಿಹಾರ ಒದಗಿಸು ವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ನಿಗದಿತ ಕಾಲಮಿತಿಯಲ್ಲಿ ಕ್ರಮ ಕೈಗೊಂಡು ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರು.
ನವೆಂಬರ್ ೨೮ರ ಭೇಟಿ: ಸಂಜೆ ತಿಪಟೂರು ನಗರದಲ್ಲಿರುವ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಡಾ: ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿ, ಕಂಡು ಬಂದ ಅವ್ಯವಸ್ಥೆಗಳನ್ನು ಸರಿಪಡಿಸಲು ಸಂಬ0ಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ರಲ್ಲದೆ, ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಅವ್ಯವಸ್ಥೆಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುತ್ತಾರೆ.
ನವೆ0ಬರ್ ೨೯ರ ಭೇಟಿ: ಬೆಳಿಗ್ಗೆ ತಿಪಟೂರು ನಗರದ ಎ.ಪಿ.ಎಂ.ಸಿ ಮಾರುಕಟ್ಟೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ತಿಪಟೂರು ತಾಲ್ಲೂಕು ಹಿಂಡಿಸ್ಕೆರೆ ಗ್ರಾಮದ ಕೆರೆ ಮತ್ತು ಈಚನೂರು ಗ್ರಾಮದ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲಿನ ಸ್ಥಿತಿ-ಗತಿ ಹಾಗೂ ಅವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದು ಕಂಡು ಬಂದ ಅವ್ಯವಸ್ಥೆಗಳ ಬಗ್ಗೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದರ ಜೊತೆಗೆ, ಎ.ಪಿ.ಎಂ.ಸಿ ಮಾರುಕಟ್ಟೆ ಮತ್ತು ಹಿಂಡಿಸ್ಕೆರೆ ಗ್ರಾಮದ ಕೆರೆ ಹಾಗೂ ಈಚನೂರು ಗ್ರಾಮದ ಕೆರೆಯ ಅವ್ಯವಸ್ಥೆಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುತ್ತಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಹಾಗೂ ಚಿಕ್ಕನಾಯಕನಹಳ್ಳಿ, ತುರುವೇಕೆರೆ ಮತ್ತು ತಿಪಟೂರು ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



