
ತುಮಕೂರು: ಜಿಲ್ಲೆಯ ತೆಂಗು ಬೆಳೆಗೆ ತಗುಲಿರುವ ನುಸಿಪೀಡೆ ಹಾಗೂ ಬಿಳತಲೆ ಹುಳು ನಿಯಂತ್ರಣದಲ್ಲಿ ಕೃಷಿ ಹಾಗು ತೊಟಗಾರಿಕೆ ಇಲಾಖೆ ವೈಫಲ್ಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ನಿವಾರಣೆ ಮಾಡುವಲ್ಲಿ ನಿರ್ಲಕ್ಷö್ಯವಹಿಸಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಮುಖಂಡರು ಬುಧವಾರ ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನುಸಿಪೀಡಿತ ತೆಂಗು ಹಿಡಿದು ಸ್ವಾತಂತ್ರö್ಯ ಚೌಕದಿಂದ ಕೃಷಿ ಇಲಾಖೆ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಮುಖಂಡರು ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯಿಂದ ರೈತರು ಜೀವನ ಅರಸಿ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಅನ್ನಭಾಗ್ಯ ಕೊಡುತ್ತೇವೆ, ಅಕ್ಕಿ, ಸಕ್ಕರೆ ಕೊಡುತ್ತೇವೆ ಎನ್ನುವ ಕಾಂಗ್ರೆಸ್ ನಾಯಕರು, ಅದನ್ನು ಬೆಳೆಯುವ ರೈತರ ಕಷ್ಟವನ್ನು ಕೇಳುತ್ತಿಲ್ಲ. ಯಾವುದೇ ನೀರಾವರಿ ಯೋಜನೆಗೆ ಹಣ ನೀಡಿಲ್ಲ, ರಸ್ತೆಗಳ ಗುಂಡಿ ಮುಚ್ಚಲೂ ದುಡ್ಡು ಕೊಟ್ಟಿಲ್ಲ. ಬಿಜೆಪಿ ಸರ್ಕಾರದ ಅನೇಕ ರೈತಪರ ಯೋಜನೆಗಳನ್ನು ರದ್ದುಗೊಳಿಸಿ, ಕೇವಲ ಮತ ಬ್ಯಾಂಕಿಗಾಗಿ ಕಾಂಗ್ರೆಸ್ ನಾಯಕರು ಜಾತಿ-ಜಾತಿಗಳನ್ನು ಎತ್ತಿಕಟ್ಟುವ ಕೆಟ್ಟ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ ಎಂದು ಹರಿಹಾಯ್ದರು.
ರೈತರಿಗೆ ಯಾವುದೇ ಸಬ್ಸಿಡಿ ಬೇಡ, ಅವರಿಗೆ ನೀರು, ವಿದ್ಯುತ್, ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಮಾಡಿದರೆ ಸಾಕು ರೈತರು ಬದುಕುತ್ತಾರೆ. ಆದರೆ ಕಾಂಗ್ರೆಸ್ ಸರ್ಕಾರ ಇದ್ಯಾವುದನ್ನೂ ಮಾಡುವ ಪ್ರಯತ್ನ ಮಾಡಿಲ್ಲ. ಯಡಿಯೂರಪ್ಪನವರ ಸರ್ಕಾರ ಹಲವಾರು ರೈತಪರ ಯೋಜನೆಗಳನ್ನು ರೂಪಿಸಿದ್ದರು. ಈ ಸರ್ಕಾರ ಅಂತಹ ಯಾವುದೇ ಕಾರ್ಯಕ್ರಮ ಮಾಡಿಲ್ಲ. ಈ ಕೆಟ್ಟ ಸರ್ಕಾರ ರೈತರ ಪರ ನಿಲ್ಲದಿದ್ದರೆ ರೈತರ ನೇತೃತ್ವದಲ್ಲಿ ಸರ್ಕಾರವನ್ನು ಕಿತ್ತೊಗೆಯುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ರಸಗೊಬ್ಬರವನ್ನು ದುಬಾರಿ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಅನ್ಯಾಯ ಕೇಳುವವರಿಲ್ಲ. ಗೊಬ್ಬರದ ಅಂಗಡಿಗಳಲ್ಲಿ ದರಪಟ್ಟಿ ಪ್ರದರ್ಶನ ಮಾಡಿಲ್ಲ. ಹಾಲು ಉತ್ಪಾದಕರಿಗೆ ಕೊಡಬಾಕಾಗಿರುವ ೬೫೦ ಕೋಟಿ ರೂ. ಹಾಲಿನ ಪ್ರೋತ್ಸಾಹಧನವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಯಡಿಯೂರಪ್ಪ ಸರ್ಕಾರದಲ್ಲಿ ೨೫ ಸಾವಿರ ರೂ. ಇದ್ದ ಟಿ.ಸಿ. ಸಂಪರ್ಕಕ್ಕೆ ಈಗ ೩ ಲಕ್ಷ ರೂ. ಮಾಡಿದ್ದಾರೆ ಎಂದು ಆಪಾದಿಸಿದ ಬ್ಯಾಟರಂಗೇಗೌಡರು, ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳ ಬಗ್ಗೆಯೇ ವಿಶೇಷ ಚಚೆ ನಡೆಸಬೇಕು ಎಂದು ಒತ್ತಾಯಿಸಿದರು.
ರೈತರ ಕಡೆಗಣಿಕೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಸರ್ಕಾರದ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡದೆ ಅನ್ಯಾಯ ಮಾಡಲಾಗುತ್ತದೆ. ಫಲಾನುಭವಿಗಳನ್ನು ಗ್ರಾಮ ಸಭೆಗಳಲ್ಲಿ ಆಯ್ಕೆ ಮಾಡಬೇಕು. ಆದರೆ ಸರ್ಕಾರದ ಪ್ರತಿನಿಧಿಗಳ ಹಿಂಬಾಲಕರಿಗೆ ಸವಲತ್ತು ನೀಡುವ ಕೆಲಸಗಳಾಗುತ್ತಿವೆ. ರಸಗೊಬ್ಬರ ಬೆಲೆಗೆ ೧೦೦ರಿಂದ ೧೫೦ ರೂ. ಹೆಚ್ಚು ಹಣ ವಸೂಲು ಮಾಡುತ್ತಾ ರೈತರನ್ನು ಶೋಷಣೆ ಮಾಡಲಾಗುತ್ತಿದೆ. ಈ ಮೂಲಕ ಸರ್ಕಾರ ರೈತರನ್ನು ಲೂಟಿ ಮಾಡುತ್ತಿದೆ ಎಂದರು.
ಈ ಸರ್ಕಾರ ರೈತರಪರವಾಗಿ ಕೆಲಸ ಮಾಡುತ್ತಿಲ್ಲ. ನಮ್ಮ ಜಿಲ್ಲೆಯ ಹೇಮಾವತಿ ನೀರನ್ನು ಬೇರೆ ಜಿಲ್ಲೆಗೆ ತೆಗೆದುಕೊಂಡು ಹೊರಟಿದ್ದರು, ಹೋರಾಟ ಮಾಡಿ ತಡೆಯಬೇಕಾಯಿತು. ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ವ್ಯಾಪಕವಾಗಿದೆ. ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.
ಮಾಜಿ ಶಾಸಕ ಎಂ.ಡಿ.ಲಕ್ಷಿö್ಮÃನಾರಾಯಣ, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಮುಖಂಡ ದಿಲೀಪ್‌ಕುಮಾರ್ ಮೊದಲಾ ದವರು ಮಾತನಾಡಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿದರು. ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್‌ಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎ.ಹೆಚ್.ಆಂಜನಪ್ಪ, ಮುಖಂಡರಾದ ಮೊದಲಾದವರು ಭಾಗವಹಿಸಿದ್ದರು.



