BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಕಲಚೇತನರಿಗೆ ಬೇಕಾದುದು ಸಹಾನುಭೂತಿ ಅಲ್ಲ-ಸಮಾನ ಅವಕಾಶ ಅಗತ್ಯ
ಇತರೆ ಸುದ್ಧಿಗಳು

ವಿಕಲಚೇತನರಿಗೆ ಬೇಕಾದುದು ಸಹಾನುಭೂತಿ ಅಲ್ಲ-ಸಮಾನ ಅವಕಾಶ ಅಗತ್ಯ

By News Desk BenkiyabaleUpdated:December 04, 2025 4:06 pm

ತುಮಕೂರು: ಸಮಾಜದಲ್ಲಿ ವಿಕಲಚೇತನರಿಗೆ ಬೇಕಾದುದು ಕೇವಲ ಸಹಾನುಭೂತಿ ಅಲ್ಲ. ಬದಲಾಗಿ ಎಲ್ಲ ಸಮಾನ ಅವಕಾಶಗಳು ಸಿಗಬೇಕು. ಅವಕಾಶಗಳು ನೀಡಿದರೆ ಅವರಲ್ಲಿರುವ ಪ್ರತಿಭೆಯನ್ನು ಹೊರತರಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅಭಿಪ್ರಾಯ ವ್ಯಕ್ತಪಡಿಸಿದರು.
ಬುಧವಾರ ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರ ಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದ ಅವರು, ವಿಕಲಚೇತನರು ವಿಶೇಷ ಚೇತನರು. ಸಮಾಜ ದಲ್ಲಿ ಅವರಿಗೆ ಸಮಾನವಾಗಿ ಅವಕಾಶಗಳು ತಲುಪಿದ್ದಲ್ಲಿ, ಅವರು ಇನ್ನಷ್ಟು ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮನೆ, ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ವಿಕಲಚೇತನರು ಅಥವಾ ಬುದ್ಧಿಮಾಂದ್ಯತೆ ಹೊಂದಿರುವವರನ್ನು ಮೂಢನಂಬಿಕೆಗಳ ಕಾರಣದಿಂದ ಸಂಕೋಲೆಗಳಲ್ಲಿ ಸಿಲುಕಿಸಿ ಹಿಂಸೆ ನೀಡುವುದು ಗಂಭೀರ ಅಪರಾಧ. ಇಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆಯ ಜೊತೆಗೆ ದಂಡವನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಸಿದರು. ಸಂವಿಧಾನದಡಿ ವಿಕಲಚೇತನರು ಘನತೆ-ಗೌರವದಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ ಮತ್ತು ಅವರ ಹಕ್ಕುಗಳಿಗೆ ಧಕ್ಕೆ ಉಂಟಾಗದAತೆ ನೋಡಿಕೊಳ್ಳಬೇಕು ಎಂದರು.
ವಿಕಲಚೇತರ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಟರಾಜು ಮಾತನಾಡಿ ವಿಶ್ವ ವಿಕಲಚೇತನರ ದಿನಾಚರಣೆಯ ಇತಿಹಾಸ ಮತ್ತು ಉದ್ದೇಶವನ್ನು ವಿವರಿಸಿದರು. ವಿಕಲಚೇತನರೂ ಸಹ ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಸಂವಿಧಾನಾತ್ಮಕವಾಗಿ ಅವರಿಗೂ ಸಹ ಎಲ್ಲ ರಂತೆ ಸಮಾಜದಲ್ಲಿ ಬದುಕುವ ಹಕ್ಕನ್ನು ನೀಡಲಾಗಿದೆ ಎಂದು ತಿಳಿಸಿದರು.
ವಿಕಲಚೇತನರನ್ನು ಎಲ್ಲಾ ಕೆಲಸಗಳಲ್ಲಿ ತೊಡಗುವಂತೆ ಮಾಡಬೇಕು. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳು ಅವರಿಗೆ ಸಮರ್ಪಕವಾಗಿ ತಲುಪಬೇಕು. ವಿಕಲಚೇತನರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಬಲ್ಲರು ಎಂಬುದನ್ನು ಈಗಾಗಲೇ ತೋರಿಸಿಕೊಟ್ಟಿದ್ದಾರೆ. ಇತ್ತೀಚೆಗೆ ಅಂಗವಿಕಲ ಮಹಿಳೆಯರ ವಿಶ್ವ ವರ್ಲ್ಡ್ ಕಪ್ ಕ್ರಿಕೆಟ್‌ನಲ್ಲಿ ನಮ್ಮ ದೇಶ ವಿಜಯಶಾಲಿಯಾಗಿದ್ದು, ಈ ತಂಡದಲ್ಲಿ ತುಮಕೂರು ಜಿಲ್ಲೆಯವರಾದ ದೀಪಿಕಾ ಹಾಗೂ ಕಾವ್ಯ ಅವರು ಭಾಗವಹಿಸಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಈಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಿದ್ರಾಮಣ್ಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಡಿಸೆಂಬರ್ ೫ರಂದು ಗುಬ್ಬಿಯಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
Next Article ದತ್ತಾತ್ರೇಯ ಕ್ಷೇತ್ರ ಯಾತ್ರೆ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.