
ತುಮಕೂರು: ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಗಳನ್ನು ರಾತ್ರಿ 8 ಗಂಟೆಯವರೆಗೂ ತೆರೆದಿರಲು ಕ್ರಮ ಕೈಗೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಜಿಲ್ಲೆಯ ಗುಬ್ಬಿ ತಾಲ್ಲೂಕು ಜಿ.ಹೊಸಹಳ್ಳಿ ಗ್ರಾಮದ ಸಮುದಾಯಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರ ಅದಾಲತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉದ್ಯೋಗಸ್ಥ ಮಹಿಳೆಯರು ಸಂಜೆ ೬ ಗಂಟೆಯೊಳಗೆ ಪಡಿತರ ಧಾನ್ಯವನ್ನು ಪಡೆಯಲು ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ರಾತ್ರಿ ೮ ಗಂಟೆಯವರೆಗೂ ತೆರೆದಿರಲು ಕ್ರಮ ಕೈಗೊಳ್ಳ ಲಾಗುವುದು ಎಂದು ತಿಳಿಸಿದರು.
ಪಡಿತರ ಚೀಟಿ ಹೊಂದಿರುವ ಗ್ರಾಹಕರ ಕುಂದು-ಕೊರತೆಗಳನ್ನು ಬಗೆಹರಿಸಲು ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಗ್ರಾಹಕರು ಕುಂದು-ಕೊರತೆಗಳನ್ನು ಸಕಾಲದಲ್ಲಿ ಬಗೆಹರಿಸಬೇಕು. ಪಡಿತರ ಚೀಟಿದಾ ರರು ಕುಂದು-ಕೊರತೆಗಳ ನಿವಾರಣೆಗಾಗಿ ಜಿಲ್ಲಾ ಕೇಂದ್ರ ತುಮಕೂರಿಗೆ ಬರುವುದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಅನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪ ಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಪಡಿತರ ವಿತರಣೆಯಲ್ಲಿ ತೂಕ ವ್ಯತ್ಯಾಸ, ಬಯೋಮೆಟ್ರಿಕ್ ಹೊಂದಾಣಿಕೆಯಾಗದಿರುವುದು, ಪಡಿತರ ಚೀಟಿ ರದ್ದಾಗಿರುವುದು, ಅನರ್ಹರನ್ನು ಪಡಿತರ ಚೀಟಿಯಿಂದ ಕೈಬಿಡುವುದು, ಪಡಿತರ ಚೀಟಿಗೆ ಹೊಸದಾಗಿ ಕುಟುಂಬ ಸದಸ್ಯರನ್ನು ಸೇರ್ಪಡೆ ಮಾಡುವುದು ಸೇರಿದಂತೆ ಹಲವಾರು ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದ ಅವರು, ಪ್ರತಿ ತಿಂಗಳು ನಿಗದಿತ ಅವಧಿಯಲ್ಲಿ ಪಡಿತರ ಧಾನ್ಯ ಸಾರ್ವಜನಿಕರಿಗೆ ವಿತರಣೆ ಮಾಡ ಬೇಕು ಎಂದು ಸೂಚಿಸಿದರು.
ಅನರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆ ಮಾಡುತ್ತಿರುವುದು ಕಂಡು ಬಂದರೆ ಸಂಬAಧಿಸಿದ ಆಹಾರ ನಿರೀಕ್ಷಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಪಡಿತರ ಚೀಟಿಯಲ್ಲಿರುವ ಕುಟು ಂಬ ಸದಸ್ಯರಿಗನುಗುಣವಾಗಿ ಕಡ್ಡಾಯ ಪಡಿತರ ಧಾನ್ಯ ವಿತರ ಣೆಯಾಗಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತುರ್ತು ಆಹಾರ ಸಮಸ್ಯೆ ಹಾಗೂ ಕಡು ಬಡತನದ ಹಿನ್ನೆಲೆಯಲ್ಲಿ ೬೦ ವರ್ಷದ ಲಕ್ಷö್ಮಮ್ಮ, ೩೪ ವರ್ಷದ ಶಬಾನ, ೨೬ ವರ್ಷದ ಸುಮನ್ ಅವರಿಗೆ ಹೊಸದಾಗಿ ಪಡಿತರ ಚೀಟಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್, ತಹಶೀಲ್ದಾರ್ ಆರತಿ, ಉಪ ತಹಶೀಲ್ದಾರ್ ಯಶೋಧಮ್ಮ, ಆಹಾರ ನಿರೀಕ್ಷಕ ಸಿದ್ದೇಗೌಡ, ಕವಿತ ಮತ್ತಿತರರು ಉಪಸ್ಥಿತರಿದ್ದರು.





