
ತುಮಕೂರು: ಜಿಲ್ಲೆಯಲ್ಲಿ ಒಟ್ಟು ೩೨೫ ಬಾಲ ಗರ್ಭಿಣಿ ಪ್ರಕರಣಗಳು ನ್ಯಾಯಾಲಯ ಹಂತದಲ್ಲಿ ದಾಖಲಾಗಿದ್ದು, ಜಿಲ್ಲಾಸ್ಪತ್ರೆ ಮಟ್ಟದಲ್ಲಿ ೨೩೦ ಪ್ರಕರಣಗಳು ಅವಧಿ ಖಾತರಿ ಹಂತದಲ್ಲಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅವರು ಹೇಳಿದರು.
ನಗರದ ವಿದ್ಯೋದಯ ಕಾನೂನು ಕಾಲೇಜು ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ, ಹಾಗೂ ವಿದ್ಯೋದಯ ಕಾನೂನು ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಜಿಲ್ಲೆಯಲ್ಲಿ ದಿನದಿನ ಕಾಯ್ದೆಗಳು ಬಾಲ ಗರ್ಭಿಣಿ ಪ್ರಕರಣಗಳು ಸೇರಿದಂತೆ ಬಾಲ ಮಕ್ಕಳ ಕಾಣೆ ಪ್ರಕರಣಗಳು ಗಡಿ ಭಾಗಗಳಲ್ಲಿ ಹೆಚ್ಚುತ್ತಿವೆ ಇದರಿಂದಾಗಿ ಕಾನೂನು ವಿದ್ಯಾರ್ಥಿಗಳು ಕಾಲೇಜು ಬಿಡುವಿನ ಸಮ ಯದಲ್ಲಿ ಶಾಲಾ ಕಾಲೇಜು ಹಾಗು ವಿವಿಧ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ನಾಗರಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಪ್ರತಿಯೊಬ್ಬ ಪ್ರಜೆಯು ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯ ಮತ್ತು ಇತರೆ ಎಲ್ಲಾ ಸಂಸ್ಥೆಗಳ ಆದ್ಯ ಕರ್ತವ್ಯ. ರಾಜ್ಯದ ಯಾವುದೇ ಕಚೇರಿಯಿಂದಾಗಲೀ ಅಥವಾ ಸಂಸ್ಥೆಯಿAದಾಗಲೀ ಯಾವುದೇ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಅಥವಾ ಮಾನವ ಹಕ್ಕುಗಳ ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭಗಳಲ್ಲಿ, ತೊಂದರೆಗೆ ಒಳಗಾದವರಾಗಲೀ ಅಥವಾ ಆತನ/ಆಕೆಯ ಪರವಾಗಿ ಬೇರೆ ಯಾರಾದರಾಗಲೀ ಅವರ ಕುಂದು ಕೊರತೆಗಳನ್ನು ಪರಿಹರಿಸಲು, ನ್ಯಾಯ ದೊರಕಿಸಿಕೊಳ್ಳಲು ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಬಹುದು.
ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾಭ್ಯಾಸದೊಂದಿಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಹಾಗೆ ವಿದ್ಯಾಭ್ಯಾಸ ಅಂಕಗಳಿಗೆ ಮಾತ್ರ ಸೀಮಿತವಾಗದೇ, ವಿವಿಧ ವಿಭಾಗಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ವಿಶೇಷ ಕರ್ತವ್ಯಾಧಿಕಾರಿ ಮುರಳೀಧರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇ ಶಕ ಈಶ್ವರ್ ಕು. ಮಿರ್ಜಿ, ವಿದ್ಯೋದಯ ಕಾನೂನು ಕಾಲೇಜು ಪ್ರಾಂಶುಪಾಲ ಶಮಾ ಸೈಯದಿ, ವಿದ್ಯೋದಯ ಫೌಂಡೇಷನ್ ಟ್ರಸ್ಟ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಚಂದ್ರಣ್ಣ, ಮಾನವ ಹಕ್ಕುಗಳ ಅನುಷ್ಠಾನ ಸಮಿತಿ ವಿದ್ಯೋದಯ ಕಾನೂನು ಕಾಲೇಜು ಸಂಚಾಲಕರು ಎನ್.ಎಸ್.ಮಂಜುಳ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





