
ತುಮಕೂರು: ಜಿಲ್ಲೆ ಸೇರಿದಂತೆ ಏಳು ಜಿಲ್ಲೆಗಳ ಜನರ ಕುಡಿಯುವ ನೀರಿನ ಬವಣೆ ತೀರಿಸುವ ಎತ್ತಿನಹೊಳೆ ಯೋಜನೆಯ ಶೇ೯೦ರಷ್ಟುç ಕಾಮಗಾರಿಗಳು ಪೂರ್ಣಗೊಂಡ ನಂತರ ಯೋಜನೆಗೆ ಕೇಂದ್ರ ಸರಕಾರ ಅಡ್ಡಿ ಪಡಿಸುತ್ತಿದ್ದು,ಈ ಬಗ್ಗೆ ಕೇಂದ್ರದ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಲು ಡಿಸೆಂಬರ್ ೧೩-೧೪ ರಂದು ರಾಜ್ಯ ಸರಕಾರದ ದೆಹಲಿ ನಿಯೋಗ ಕಂಡೊಯ್ಯಲಿದೆ ಎಂದು ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,೨೦೧೨ರಲ್ಲಿ ಆರಂಭವಾದ ಎತ್ತಿನಹೊಳೆ ಯೋಜನೆಯ ಶೇ೯೦ರಷ್ಟು ಕಾಮಗಾರಿ ಗಳು ಪೂರ್ಣಗೊಂಡಿದೆ.ಈಗ ಕೇಂದ್ರ ಸರಕಾರ ಯೋಜನೆಗೆ ನಿಗಧಿಗಿಂತ ಹೆಚ್ಚು ಭೂಮಿ ಬಳಕೆ ಮಾಡಲಾಗಿದೆ. ಹಸಿರು ಪೀಠದ ಅನುಮತಿ ಪಡೆದಿಲ್ಲ,ಇನ್ನಿತರ ಅನಗತ್ಯ ತರಕಾರುಗಳನ್ನು ತೆಗೆದು,ಯೋಜನೆ ವಿಳಂಭವಾಗಲು ಕಾರಣವಾಗುತ್ತದೆ. ಎತ್ತಿನ ಹೊಳೆ ಯೋಜನೆ ರಾಜ್ಯ ಸರಕಾರದ ಮಹಾತ್ವಕಾಂಕ್ಷೆಯ ಯೋಜನೆಯಾಗಿದ್ದು,ಜನರ ಕುಡಿಯುವ ನೀರಿನ ಬವಣೆ ತೀರಿಸಲು ಇರುವ ಮಹತ್ವದ ಯೋಜನೆಯಾಗಿದೆ.ಇದಕ್ಕೆ ಸಹಕಾರ ನೀಡುವ ಬದಲು,ಕೇಂದ್ರ ಸರಕಾರ ಯೋಜನೆ ಯನ್ನು ತಡೆಯಲು ಯತ್ನಿಸುತ್ತಿರುವುದು ಸರಿಯಲ್ಲ.ಇದರ ವಿರುದ್ದ ರಾಜ್ಯದ ಎಲ್ಲಾ ಸಂಸದರು ದ್ವನಿ ಎತ್ತಬೇಕಾಗಿದೆ ಎಂದರು.
ಕೇAದ್ರ ಸರಕಾರ ಕೇಳಿರುವ ಪ್ರಶ್ನೆಗಳಿಗೆ ಈಗಾಗಲೇ ವಿಶ್ವೇಶ್ವರಯ್ಯ ಜಲ ಅಭಿವೃದ್ದಿ ನಿಗಮದಿಂದ ಸಮರ್ಪಕ ಉತ್ತರವನ್ನು ನೀಡಿದ್ದರೂ ಸಹ,ಯೋಜನೆಗೆ ಅನುಮತಿ ನೀಡದೆ ಅನಗತ್ಯ ವಿಳಂಭ ಮಾಡುತ್ತಿದೆ.ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ಜಲಸಂಪನ್ಮೂಲ ಸಚಿವರು ರಾಜ್ಯದ ಎಲ್ಲಾ ಸಂಸದರ ಸಭೆ ಕರೆದಾಗ,ವಿವಿಧ ಕಾರಣ ಹೇಳಿ ಯಾವೊಬ್ಬ ಬಿಜೆಪಿ ಸಂಸದರು ಸಭೆಗೆ ಹಾಜರಾಗಿಲ್ಲ. ಇದು ರಾಜ್ಯದ ಬಗ್ಗೆ ಬಿಜೆಪಿ ಪಕ್ಷಕ್ಕೆ ಇರುವ ಕಾಳಜಿಯನ್ನು ತೋರಿಸುತ್ತದೆ.ಈಗಲಾದರೂ ಬಿಜೆಪಿ ಸಂಸದರು, ಕೇಂದ್ರ ಸರಕಾರದ ಮೇಲೆ ಒತ್ತಡ ತಂದು,ಎತ್ತಿನಹೊಳೆ ಯೋಜನೆಗೆ ಇರುವ ಅಡ್ಡಿ, ಆತಂಕಗಳನ್ನು ನಿವಾರಿಸಿ,ತಮ್ಮ ಪಾಲಿನ ಅನುದಾನ ನೀಡುವ ಮೂಲಕ, ಯೋಜನೆ ಪೂರ್ಣಗೊಳ್ಳಲು ಸಹಕಾರ ನೀಡಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರಾಜಣ್ಣ ಮಾತನಾಡಿ,ಬಯಲು ಸೀಮೆಗೆ ಸೇರಿದ ತುಮಕೂರು,ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ ಜಿಲ್ಲೆಗಳಿಗೆ ಎತ್ತಿನ ಹೊಳೆ ಕುಡಿಯುವ ನೀರಿನ ವಿಚಾರದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.ಹಾಗಾಗಿ ಕೇಂದ್ರ ಸರಕಾರ ಈ ಯೋಜನೆಗೆ ಕಲ್ಲು ಹಾಕುವ ಕೆಲಸ ಮಾಡಬಾರದು.ಇಂದು ಪರಿಸರ ಇಲಾಖೆಯಿಂದ ಎನ್.ಓ.ಸಿ ಪಡೆದಿಲ್ಲ ರಾದ ರೇವಣ್ಣ ಸಿದ್ದಯ್ಯ,ಅಶೋಕ್ ರಾಜವರ್ಧನ್,ರೈತ ಮುಖಂಡರಾದ ರಾಚಪ್ಪ, ಕೆ.ಆರ್.ವೆಂಕಟೇಶ್ ಇವರುಗಳು ಎತ್ತಿನ ಹೊಳೆ ಯೋಜನೆ ಹಾಗೂ ಕೇಂದ್ರದ ಅಡ್ಡಿ ಕುರಿತಂತೆ ಮಾತನಾಡಿದರು ಹಲವರು ಉಪಸ್ಥಿತರಿದ್ದರು.
(Visited 1 times, 1 visits today)





