
ತುಮಕೂರು: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಸ್ಪೋಟಿಸುವುದಾಗಿ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.
ಬಾಂಬ್ ಬೆದರಿಕೆ ಮಾಹಿತಿ ಪಡೆದ ತಕ್ಷಣವೇ ಪೊಲೀಸ್ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿ, ಜಿಲ್ಲಾಧಿಕಾರಿ ಕಚೇರಿಗೆ ಬ್ ನಿಷ್ಕಿçಯ ದಳವನ್ನು ದೌಡಾಯಿಸಿದ್ದಾರೆ. ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ ಕಚೇರಿ ಸೇರಿದಂತೆ ಸಂಪೂರ್ಣ ಕಚೇರಿ ಆವರಣವನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಭದ್ರತಾ ಕ್ರಮವಾಗಿ ಕಚೇರಿ ಸಿಬ್ಬಂದಿಯ ಗುರು ತಿನ ಚೀಟಿಗಳನ್ನು ಪರಿಶೀಲಿಸಲಾಗುತ್ತಿದ್ದು, ಮೈನ್ ಗೇಟ್ನಲ್ಲಿ ಒಬ್ಬೊಬ್ಬರನ್ನೇ ಒಳಗೆ ಬಿಡಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿಯ ಹೊರಭಾಗದಲ್ಲಿ ಪೊಲೀ ಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಅಧಿಕಾರಿಗಳು ಕಚೇರಿಯಿಂದ ಹೊರಗೆ ನಿಂತಿದ್ದಾರೆ. ಸದ್ಯ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರ ಣದ ಬಗ್ಗೆ ತನಿಖೆ ಮುಂದುವರಿದಿದೆ.
(Visited 1 times, 1 visits today)



