ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾಗಿದ್ದ ರತ್ನಮ್ಮ ರೇವಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ಏರ್ಪಡಿಸಲಾಗಿತ್ತು.
ಅಧಿಕೃತ ವೇಳಾಪಟ್ಟಿಯಂತೆ ಬೆಳಿಗ್ಗೆ ೧೦ ಗಂಟೆಯಿ0ದ ಮಧ್ಯಾಹ್ನ ೧೨ ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿಪ ಡಿಸಲಾಗಿತ್ತು. ಪ್ರೀತಿ ರಾಘವೇಂದ್ರ ಅವರು ಹೇಮಂತ್ ಅವರನ್ನು ಸೂಚಿಕರಾಗಿ, ಸಿದ್ದೀಕ್ ಅವರ ಅನುಮೋದಕರಾಗಿ ನಾಮಪತ್ರ ಸಲ್ಲಿಸಿ ದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಕಣದಲ್ಲಿ ಅವರೊಬ್ಬರೇ ಉಳಿದರು. ಹೀಗಾಗಿ, ಚುನಾವಣಾಧಿಕಾರಿ ಕೆ. ಪುರಂದರ ಅವರು ಪ್ರೀತಿ ರಾಘವೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದರು.
ಈ ಆಯ್ಕೆಯೊಂದಿಗೆ ಅಧ್ಯಕ್ಷ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪಟ್ಟಣದ ಜನರ ಕುತೂಹಲಕ್ಕೆ ತೆರೆ ಬಿದ್ದಿತು. ಈ ಬಾರಿ ಕೂಡ ೩ ಪಕ್ಷದ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಪಕ್ಷದ ಮೂವರು ಸದಸ್ಯರು, ಕಾಂಗ್ರೆಸ್ ಪಕ್ಷದ ನಾಲ್ವರು ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರು ಸೇರಿ ಒಟ್ಟು ೯ ಸದಸ್ಯರು ಪ್ರೀತಿ ರಾಘವೇಂದ್ರ ಅವರ ಅವಿರೋಧ ಆಯ್ಕೆಗೆ ಬೆಂಬಲ ಸೂಚಿಸಿದರು.
ಮಾಜಿ ಅಧ್ಯಕ್ಷೆ ರತ್ನಮ್ಮ, ಹೇಮಂತ್ ಕುಮಾರ್, ಬಿ.ಬಿ. ಫಾತಿಮಾ, ಉಪಾಧ್ಯಕ್ಷೆ ಕಾವ್ಯಾರಾಣಿ, ಮಂಜಾ ನಾಯ್ಕ, ಅಬೂಬುಕರ್ ಸಿದ್ದಿಕ್, ಮಹಮ್ಮದ್ ಜುಬೇರ್, ಎಸ್.ಆರ್.ಎಸ್. ದಯಾನಂದ್, ಬಡಿಗಿರಾಜು ಸೇರಿದಂತೆ ಎಲ್ಲ ಸದಸ್ಯರುಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ನೂತನ ಅಧ್ಯಕ್ಷರ ಪ್ರತಿಕ್ರಿಯೆ: ಅವಿರೋಧ ವಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನೂತನ ಅಧ್ಯಕ್ಷೆ ಪ್ರೀತಿ ರಾಘವೇಂದ್ರ, ತಮ್ಮ ನ್ನು ಬೆಂಬಲಿಸಿದ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿಕೊಳ್ಳಲು ಶಾಸಕ ಸಿ.ಬಿ.ಸುರೇಶ್ ಬಾಬು ಹಾಗೂ ಬೆಂಬಲಿಸಿದ ಸದಸ್ಯರುಗಳ ಸಹಕಾ ರವೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ, ಕೆಲಸ ಮಾಡಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದರು.
ಶಾಸಕ ಸಿ.ಬಿ. ಸುರೇಶ್ ಬಾಬು ಹೇಳಿಕೆ: ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಬಿ. ಸುರೇಶ್ ಬಾಬು, ಈ ಅಧ್ಯಕ್ಷರ ಆಯ್ಕೆಯು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ನಡೆದಿದ್ದು, ಹುಳಿಯಾರು ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು. ಅಲ್ಲದೆ ಈಗಾಗಲೇ ಹುಳಿಯಾರಿನ ಸಮಗ್ರ ಅಭಿವೃದ್ಧಿಗಾಗಿ ಪಂಚಾಯ್ತಿ ಜೊತೆ ಇರುತ್ತೇನೆ. ಈಗಾಗಲೇ ಮನೆಮನೆಗೂ ಕುಡಿಯುವ ನೀರು ಸಂಪರ್ಕ ಕಾರ್ಯ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಪ್ರತಿ ಬೀದಿಗೂ ಸಿಸಿ ರಸ್ತೆ ಹಾಗೂ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಒತ್ತು ನೀಡುವುದಾಗಿ ತಿಳಿಸಿದರು.
ಚುನಾವಣಾ ಪ್ರಕ್ರಿಯೆಯ ವೇಳೆ ಚುನಾವಣಾ ಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಸಿ ಲ್ದಾರ್ ಕೆ. ಪುರಂದರ್, ಸಾಲಾಪುರ ಪ್ರತಾ ಪ್, ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾ ಧಿಕಾರಿ ಎಲ್.ವಿ. ಮಂಜುನಾಥ್, ಕಂದಾಯ ಅಧಿಕಾರಿ ಶ್ರುತಿ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

(Visited 1 times, 1 visits today)