filter: 0; fileterIntensity: 0.0; filterMask: 0; captureOrientation: null;
brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

ತುಮಕೂರು: ಪಠ್ಯೇತರ ಚಟುವಟಿಕೆಗಳೂ ಕೂಡ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ ಎಂದು ತುಮಕೂರು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಎಂ. ಅಭಿಪ್ರಾಯಪಟ್ಟರು.
ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಜಿಲ್ಲಾ ಬಾಲಭವನ ಸಮಿತಿ ಹಾಗೂ ತಾಲ್ಲೂಕು ಬಾಲಭವನ ಸಮಿತಿ ವತಿಯಿಂದ ಕ್ಯಾತ್ಸಂದ್ರ ನಗರದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಾಶಾಲೆಯಲ್ಲಿ ೫-೧೬ ವಯೋಮಾನದ ಮಕ್ಕಳಿಗಾಗಿ ಶನಿವಾರ ಏರ್ಪಡಿಸಲಾಗಿದ್ದ ಓಟದ ಸ್ಪರ್ಧೆ ಮತ್ತು ಆಶುಭಾಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಅವರು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ತುಮಕೂರು ನಗರ ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಹಾಗೂ ತಾಲ್ಲೂಕು ಬಾಲಭವನ ಸಮಿತಿ ಕಾರ್ಯದರ್ಶಿ ನಾಗರಾಜ್ ಕೆ. ಅವರು ಮಕ್ಕಳು ಪ್ರತಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯ. ಸ್ಫರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳು ಸೋತರೂ ಕೂಡಾ ಮುಂದಿನ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಲು ದಾರಿಯಾಗುತ್ತದೆ ಎಂದು ತಿಳಿಸಿ ಸ್ಫರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಕೋರಿದರು.
ಮಕ್ಕಳಿಗೆ ಶಾಲೆಯ ಶಿಕ್ಷಣದ ಜೊತೆಗೆ ಇತರೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ತುಮಕೂರು ಗ್ರಾಮಾಂತರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಾಲ್ಲೂಕು ಬಾಲಭವನ ಸಮಿತಿ ಕಾರ್ಯದರ್ಶಿ ಶಶಿಧರ್ ಮಾತನಾಡಿ ಬಾಲ್ಯದಿಂದಲೇ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಬೇಕು. ಓದು ಮುಖ್ಯವಾದರೂ ಅದರೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.
ಓಟದ ಸ್ಪರ್ಧೆ ಮತ್ತು ಆಶುಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿ ಪ್ರಥಮ, ದ್ವಿತೀಯ ಮತ್ತು ತೃತೀ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ, ಪ್ರಮಾಣ ಪತ್ರ ಹಾಗೂ ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತುಮಕೂರು ನಗರದ ಸಿ.ಆರ್.ಪಿ. ಚೇತನ ಮತ್ತು ಸುರೇಶ್, ಆರೋಗ್ಯ ಇಲಾಖೆಯ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಜಯಣ್ಣ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ಮಕ್ಕಳು ಹಾಗೂ ಜಿಲ್ಲಾ ಬಾಲಭವನ ಸಮಿತಿಯ ಕಾರ್ಯಕ್ರಮ ಸಂಯೋಜಕರು ಮತ್ತು ಕಚೇರಿ ಸಹಾಯಕರು ಉಪಸ್ಥಿತರಿದ್ದರು.

(Visited 1 times, 1 visits today)