ಶಿರಾ: ತಾಲ್ಲೂಕಿನ ಶಿರಾ, ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಘಟನೆಯ ವಿವರ: ಶಿರಾ ತಾಲ್ಲೂಕಿನ ಮುದ್ದರಂಗ ನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋ ಡುತ್ತಿದ್ದಂತೆಯೇ ಇಡೀ ಕಾರು ಬೆಂಕಿ ಯ ಕೆನ್ನಾಲಿಗೆಗೆ ಸಿಲುಕಿ ಸಂಪೂ ರ್ಣವಾಗಿ ಭಸ್ಮವಾಗಿದೆ.
ಕಾರಿನಲ್ಲಿದ್ದ ಚಾಲಕ ಹೊರಬರಲಾಗದೆ ಬೆಂಕಿಯ ನಡುವೆಯೇ ಸಿಲುಕಿ ಮೃತಪಟ್ಟಿದ್ದಾರೆ. ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹೊತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬ0ಧಿಸಿದ0ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

(Visited 1 times, 1 visits today)