ಕೊರಟಗೆರೆ: ಹೈಕಮಾಂಡ್‌ಗೆ ಕೆ.ಎನ್. ರಾಜಣ್ಣ ಬರೆದಿರುವ ಪತ್ರದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ರಾಜಣ್ಣ ಅವರು ನನಗೆ ಇನ್ನೂ ಆ ಪತ್ರವನ್ನು ತೋರಿಸಿಲ್ಲ. ಪತ್ರವನ್ನು ಸಂಪೂರ್ಣವಾಗಿ ನೋಡಿದ ನಂತರವೇ ನಾನು ಈ ಕುರಿತು ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಪತ್ರದ ವಿಷಯವನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕವೇ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಈ ನಡುವೆ ಮಲ್ಲಿಕಾರ್ಜುನ ಖರ್ಗೆ ಅವರು ಬೇಸರಗೊಂಡಿದ್ದಾರೆ ಎನ್ನುವ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, ಖರ್ಗೆಯವರು ಎಐಸಿಸಿ ಅಧ್ಯಕ್ಷರು. ಖರ್ಗೆಯವರು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಹೇಳಿ ದರು. ಪಕ್ಷದೊಳಗೆ ಯಾವುದೇ ಗೊಂದಲ ಉಂಟಾಗಬಾರದು ಎಂಬ ಉದ್ದೇಶ ದಿಂದಲೇ ಖರ್ಗೆಯವರು ಈ ರೀತಿಯ ಹೇಳಿಕೆ ನೀಡಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
(Visited 1 times, 1 visits today)


