
ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾಂಸ್ಕೃತಿಕ ಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಲ್ಕು ದಿನಗಳ ಕಾಲ ಖ್ಯಾತ ವೈದ್ಯರಾದ ದಿ. ಡಾ. ಸಿ. ಜಯರಾಮರಾವ್ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ಡಾ.ಪುನೀತ್ ರಾಜ್ ಕಪ್ ರಾಜ್ಯಮಟ್ಚದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಅನೇಕ ಮಂದಿ ಕ್ರಿಕೆಟ್ ಆಟಗಾರರನ್ನು ವಿಶ್ವಕ್ಕೆ ನೀಡಿದೆ. ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ಹಾಗೂ ತುಮಕೂರು ಜಿಲ್ಲೆಯ ಕೆ.ಎಲ್. ರಾಹುಲ್ ರವರನ್ನು ಸಹ ಕ್ರಿಕೆಟ್ ಜಗತ್ತಿಗೆ ಕೊಡುಗೆಯಾಗಿ ನಮ್ಮ ರಾಜ್ಯ ನೀಡಿದೆ ಎಂದು ಹೇಳಿದರು.
ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳು ಮನುಷ್ಯನ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಒಂದು ತಂಡ ಮಾತ್ರ ಗೆಲುವು ಸಾಧಿಸಲು ಸಾಧ್ಯ. ಹಾಗಾಗಿ ಸೋತವರು ಬೇಸರಗೊಳ್ಳದೆ ಒಂದು ತಂಡವಾಗಿ ಕ್ರೀಡಾಕೂಟದಲ್ಲಿ ಆಟ ಆಡಬೇಕು ಎಂದು ಸಲಹೆ ನೀಡಿದರು.
ಅದೇ ರೀತಿ ಪಂದ್ಯಾವಳಿಯಲ್ಲಿ ಗೆದ್ದವರು ಸಹ ಬೀಗದೆ ಎಲ್ಲರೊಂದಿಗೆ ಸೇರಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.
ಇತ್ತೀಚೆಗೆ ಕೊಲಂಬದಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಮಹಿಳಾ ಅಂಧರ ತಂಡ ವಿಶ್ವಕಪ್ ಗೆದ್ದಿರುವುದು ನಮ್ಮ ದೇಶಕ್ಕೆ ಮತ್ತು ರಾಜ್ಯಕ್ಕೆ ಹೆಮ್ಮೆಯ ಸಂಗತಿ ಎಂದರು.
ಈ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಆಡಿದ ಭಾರತ ಮಹಿಳಾ ಅಂಧರ ತಂಡದಲ್ಲಿ ತುಮಕೂರಿನ ಇಬ್ಬರು ಆಟಗಾರರು ಇದ್ದರು ಎಂಬುದು ತುಂಬಾ ಸಂತೋಷದ ಸಂಗತಿ ಎಂದರು.
ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಸಿದ್ಧಗಂಗಾ ಮಠ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ತುಮಕೂರು ಜಿಲ್ಲೆ ಕ್ರೀಡೆಗೆ ಬಹಳ ಒತ್ತು ನೀಡಿದೆ ಎಂದರು.
ಡಾ. ಜಯರಾಮರಾವ್ ರವರ ಸ್ಮರಣಾರ್ಥ ರಾಜ್ಯಮಟ್ಟದ ಒಂದನ್ನು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಜಯರಾಮ್ ರಾವ್ ರವರಿಗೆ ತುಮಕೂರಿನಲ್ಲಿ ಒಂದು ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕ ಎಂಬ0ತೆ ರಾಜ್ಯ ಸರ್ಕಾರ ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ನೆರವೇರಿಸಿದೆ. ಈ ಕ್ರೀಡಾಂಗಣ ನಿರ್ಮಾಣವಾದರೆ ತುಮಕೂರಿನ ಚಿತ್ರಣವೇ ಬದಲಾಗಲಿದೆ ಎಂದರು.
ಕ್ರೀಡೆಗಳು ಮನುಷ್ಯನ ಬದುಕಿಗೆ ಅತ್ಯವಶ್ಯಕವಾಗಿ ಬೇಕಾಗಿವೆ. ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ ಎಂದರು.
ನಾಲ್ಕು ದಿನಗಳ ಕಾಲ ನಗರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಜಿ.ಪಂ. ಮಾಜಿ ಸದಸ್ಯ ಟಿ.ಎನ್. ಕೃಷ್ಣಮೂರ್ತಿ, ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಹೆಚ್.ಎನ್ ದೀಪಕ್, ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ಅಧ್ಯಕ್ಷ ಶಂಕರ್, ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ರಂಜನ್, ಸಿದ್ದಗಂಗಾ ಆಸ್ಪತ್ರೆಯ ಡಾ. ಪರಮೇಶ್, ವಿದ್ಯಾ ವಾಹಿನಿ ಶಿಕ್ಷಣ ಸಂಸ್ಥೆಯ ಪ್ರದೀಪ್ ಕುಮಾರ್, ಸ್ಪೂರ್ತಿ ಡೆವಲಪರ್ಸ್ ಚಿದಾನಂದ್ , ಮಾಜಿ ಶಾಸಕ ಮಸಾಲೆ ಜಯರಾಮ್, ಮುಖಂಡರಾದ ಬ್ಯಾಟರಂಗೇ ಗೌಡ, ಟಿ.ಆರ್. ನಾಗರಾಜು, ದಿಲೀಪ್ ಕುಮಾರ್, ಗ್ಯಾಸ್ ಬಾಬು, ಕೆ.ಬಿ. ಕೃಷ್ಣಮೂರ್ತಿ, ಅಂಬಿಕಾ ಹುಲಿನಾಯ್ಕರ್ ಮತ್ತಿತರರು ಉಪಸ್ಥಿತರಿದ್ದರು.



