ಕೊರಟಗೆರೆ: ತುಂಬು ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ತಹಶೀಲ್ದಾರ್ ಮುಖೇನಾ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿ ತಾಲೂಕಿನ ವೀರಾಪುರ ಗ್ರಾಮದ ಯುವತಿ ಅಂತ ರ್ಜಾತಿ ವಿವಾಹ ಆಗಿದ್ದಕ್ಕೆ ತಂದೆಯೇ ಮಗಳು ೭ ತಿಂಗಳು ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಭೀಕರವಾಗಿ ಕೊಲೆ ಮಾಡಿರುವುದನ್ನು ದಲಿತ ಪರ ಸಂಘಟನೆಗಳ ಒಕ್ಕೂಟ ತೀವ್ರ ವಾಗಿ ಖಂಡಿಸುತ್ತದೆ. ಬೀಕರವಾಗಿ ಹತ್ಯೆ ಮಾಡಿದ ತಂದೆಗೆ ವಿಶೇಷ ಕಾನೂನು ರಚನೆ ಮಾಡಿ ಮುಲಕ ಗಲ್ಲು ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಮಾದಿಗ ಸಮುದಾಯದ ಯುವಕ ಅಂತರ್ಜಾತಿ ವಿವಾಹವಾಗಿ ಒಂದೂವರೆ ವರ್ಷ ಕಳೆದಿದೆ. ಮಗಳು ೭ ತಿಂಗಳ ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ವಿಕೃತವಾಗಿ ಕೊಲೆ ಮಾಡಿದ ಪಾಪಿ ತಂದೆಗೆ ಸರ್ಕಾರ ವಿಶೇಷ ಕಾನೂನು ರಚಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ ಎಂದರು.
ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕ ಟೈಗರ್‌ನಾಗ್ ಮಾತನಾಡಿ, ದಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನಲ್ಲಿ ತಂದೆಯ ಮಗಳನ್ನು ವಿಕೃತವಾಗಿ ಕೊಲೆ ಮಾಡಿ ನಂತರ ದಲಿತ ಸಮುದಾಯ ಯುವಕನ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ. ಬಸವಣ್ಣನವರು ಸಮ ಸಮಾಜ ನಿರ್ಮಾಣಕ್ಕೆ ಸಂದೇಶ ನೀಡಿದ್ದರು ಘೋರ ಘಟನೆಗಳು ರಾಜ್ಯದಲ್ಲಿ ನಡೆಯುತ್ತಲೆ ಇವೆ, ಈ ಪ್ರಕರಣಕ್ಕೆ ಗೃಹ ಇಲಾಖೆ ವಿಶೇಷ ಕಾನೂನು ರಚಿಸಿ ಪಾಪಿ ತಂದೆಗೆ ಗಲ್ಲು ಶಿಕ್ಷೆ ಸಿಗುವಂತೆ ಮಾಡಿ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ದಲಿತ ಪರ ಸಂಘಟನೆಯ ಗೋಪಿನಾಥ್, ಪುಟ್ಟಸಂದ್ರ ಭೀಮಣ್ಣ, ಕಾಮರಾಜನಹಳ್ಳಿ ದೊಡ್ಡಯ್ಯ, ನಾಗಣ್ಣ, ಪುಟ್ಟರಾಜು, ಭೀಮರಾಜು ಸೇರಿದಂತೆ ಇತರರು ಹಾಜರಿದ್ದರು.

(Visited 1 times, 1 visits today)