BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಕ್ತರಹಳ್ಳಿ ಗ್ರಾಮದಲ್ಲಿ ಆಹಾರ ಅದಾಲತ್ ಕಾರ್ಯಕ್ರಮ
ಇತರೆ ಸುದ್ಧಿಗಳು

ಭಕ್ತರಹಳ್ಳಿ ಗ್ರಾಮದಲ್ಲಿ ಆಹಾರ ಅದಾಲತ್ ಕಾರ್ಯಕ್ರಮ

By News Desk BenkiyabaleUpdated:December 30, 2025 4:22 pm

ತುಮಕೂರು: ಜಿಲ್ಲಾಡಳಿತ ಮತ್ತು ಕುಣಿಗಲ್ ತಾಲ್ಲೂಕು ಆಡಳಿತದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ಸೋಮವಾರ ಕುಣಿಗಲ್ ತಾಲ್ಲೂಕು, ಕೊತ್ತಗೆರೆ ಹೋಬಳಿ, ಭಕ್ತರಹಳ್ಳಿ ಗ್ರಾಮದಲ್ಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಲ್. ರಾಮಣ್ಣ ರವರ ಅಧ್ಯಕ್ಷತೆಯಲ್ಲಿ ಹಾಗೂ ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲೀಲಾವತಿ ಹೊನ್ನೇಗೌಡ ರವರ ಉಪಸ್ಥಿತಿಯಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ನಡೆಸಲಾಯಿತು.
ಜಂಟಿನಿರ್ದೇಶಕರು, ಆಹಾರ ಇಲಾಖೆ ಮತ್ತು ಮಾನ್ಯ ತಹಶೀಲ್ದಾರ್ ಕುಣಿಗಲ್ ತಾಲ್ಲೂಕುರವರುಗಳ ಅನುಪಸ್ಥಿತಿಯಲ್ಲಿ ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆಹಾರ ಶಿರಸ್ತೇದಾರರಾದ ಶ್ರೀಹರ್ಷ ಬಿ.ಎಸ್. ರವರು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಜಿಲ್ಲೆಯ ಪ್ರತಿ ತಾಲ್ಲೂಕಿನ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಡಿತರ ಚೀಟಿದಾರರು ಜಿಲ್ಲಾ/ ತಾಲ್ಲೂಕು ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಅನರ್ಹರು ಪಿಹೆಚ್‌ಹೆಚ್(ಬಿಪಿಎಲ್) ಪಡಿತರ ಚೀಟಿ ಹೊಂದಿದ್ದಲ್ಲಿ ತಾವಾಗಿಯೇ ಎನ್‌ಪಿಹೆಚ್‌ಹೆಚ್ (ಎಪಿಎಲ್) ಪಡಿತರ ಚೀಟಿಗಳನ್ನಾಗಿ ಬದಲಾಯಿಸಿಕೊಳ್ಳಲು ಸಲಹೆ ನೀಡಿದರು ಹಾಗೂ ತಿಳುವಳಿಕೆಯಿಲ್ಲದೇ ಪಡಿತರ ಚೀಟಿ ಹೊಂದಿಲ್ಲದೇ ಇರುವ ಅರ್ಹ ಬಡವರಿಗೆ ಪಡಿತರ ಚೀಟಿ ಹೊಂದಲು ಸಹಾಯ ಮಾಡುವ ಮೂಲಕ ಅಸಮಾನತೆಯನ್ನು ಹೋಗಲಾಡಿಸಲು ಸಹಕರಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಹಾಗೂ ವಯೋವೃದ್ದರಿಗೆ, ಹಾಸಿಗೆ ಹಿಡಿದಿರುವ ಪಡಿತರ ಚೀಟಿದಾರರಿಗೆ ಬಯೋಮೆಟ್ರಿಕ್‌ನಿಂದ ವಿನಾಯಿತಿ ನೀಡಬಹುದಾಗಿದ್ದು, ಇದರ ಸದುಪಯೋಗ ಪಡೆಯಲು ತಿಳಿಸಿದರು.
ಸಾರ್ವಜನಿಕರಿಂದ ಅಹವಾಲು ಸ್ವೀಕಾರ: ಪಡಿತರಚೀಟಿದಾರರಿಂದ/ಸಾರ್ವಜನಿಕರಿ0ದ ಅರ್ಜಿಗಳನ್ನು ಸ್ವೀಕರಿಸಿ ಕೆಲವು ಅರ್ಜಿದಾರರಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಯಿತು ಹಾಗೂ ಸ್ವೀಕರಿಸಿರುವ ಎಲ್ಲಾ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ವಿಲೇವಾರಿ ಮಾಡಲು ಆಹಾರ ನಿರೀಕ್ಷಕರಾದ ಶ್ರೀಮತಿ ಚನ್ನಮ್ಮ ಎನ್.ಟಿರವರಿಗೆ ಸೂಚಿಸಿದರು.
ಹೊಸ ಪಡಿತರ ಚೀಟಿ ವಿತರಣೆ: ವೈದ್ಯಕೀಯ ಕಾರಣದಡಿ ಅರ್ಜಿ ಸಲ್ಲಿಸಿ ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳಾದ ೦೩ ಪಡಿತರ ಚೀಟಿದಾರರಿಗೆ ಸ್ಥಳದಲ್ಲಿಯೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಭಕ್ತರಹಳ್ಳಿ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಭಕ್ತರಹಳ್ಳಿ ರವರು ಹೊಸ ಪಡಿತರ ಚೀಟಿಗಳನ್ನು ವಿತರಿಸಿದರು.
ಅನ್ನಸುವಿಧ ಯೋಜನೆಯಡಿ ಪಡಿತರ ವಿತರಣೆ: ಪಿ.ಹೆಚ್.ಹೆಚ್ ಪಡಿತರ ಚೀಟಿ ಹೊಂದಿರುವ ೭೫ ವರ್ಷದ ಮೇಲ್ಪಟ್ಟ ಏಕ ಸದಸ್ಯರಿರುವ ವಯೋವೃದ್ದರಿಗೆ ಅವರ ಮನೆ ಬಾಗಿಲಿಗೆ ಪಡಿತರ ವಿತರಿಸಲು ಸರಕಾರ ಹೊಸದಾಗಿ ಅನ್ನ ಸುವಿಧ ಯೋಜನೆ ಜಾರಿಗೆ ತಂದಿದ್ದು, ಅರ್ಹ ಫಲಾನುಭವಿಗಳು ತಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಹೆಸರನ್ನು ನಿಗಧಿತ ಅವಧಿಯಲ್ಲಿ ನೊಂದಾಯಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಭಕ್ತರಹಳ್ಳಿ ಗ್ರಾಮದ ಗೌರಮ್ಮ ಮತ್ತು ವೆಂಕಟಮ್ಮ ಎಂಬುವವರ ಮನೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಭಕ್ತರಹಳ್ಳಿ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಭಕ್ತರಹಳ್ಳಿ ರವರೊಂದಿಗೆ ತೆರಳಿ ಅನ್ನಸುವಿಧ ಯೋಜನೆಯಡಿ ಪಡಿತರ ಧಾನ್ಯ ವಿತರಿಸಿದರು ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ಗುಣಮಟ್ಟ ಪರಿಶೀಲಿಸಿದರು.
ಸದರಿ ಕಾರ್ಯಕ್ರಮದಲ್ಲಿ ಕುಣಿಗಲ್ ತಾಲ್ಲೂಕಿನ ಆಹಾರ ಶಿರಸ್ತೇದಾರರಾದ ಶ್ರೀಹರ್ಷ ಬಿ.ಎಸ್., ಆಹಾರ ನಿರೀಕ್ಷಕರಾದ ಚನ್ನಮ್ಮ ಎನ್.ಟಿ, ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲೀಲಾವತಿಹೊನ್ನೇಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರಾಮಣ್ಣ, ಜಾಗೃತ ಸಮಿತಿ ಸದಸ್ಯರಾದ ಪದ್ಮಮ್ಮ, ಭಕ್ತರಹಳ್ಳಿ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ಪಡಿತರ ಚೀಟಿದಾರರು, ನ್ಯಾಯಬೆಲೆ ಅಂಗಡಿಗಳ ಮಾಲೀಕರು/ಕಾರ್ಯದರ್ಶಿಗಳು ಹಾಜರಿದ್ದರು.

 

 

(Visited 1 times, 1 visits today)
Previous Articleಕೊನೆಗೂ ಸೆರೆ ಸಿಕ್ಕ ನರಭಕ್ಷಕ ಚಿರತೆ
Next Article ಕಲ್ಪತರುನಾಡಿನಲ್ಲಿ ವೈಕುಂಠ ಏಕಾದಶಿಯ ಸಡಗರ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.