
ಸಿರಾ: ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ್ಯುವೆಲರಿ ಅಂಗಡಿಗಳು, ಹೋಟೆಲ್ಗಳು ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಿಗಾಗಿ ಜಾಗೃತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ದರೋಡೆ, ಸುಲಿಗೆ ಹಾಗೂ ಕಳವು ಪ್ರಕರಣಗಳ ಕುರಿತು ಮಾಹಿತಿ ನೀಡಿ, ಇಂತಹ ಅಪರಾಧಗಳನ್ನು ತಡೆಯಲು ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಸೈರನ್ ವ್ಯವಸ್ಥೆ ಅಳವಡಿಸಿ ಸದಾ ಕಣ್ಗಾವಲು ಇರಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು.
ಇದಲ್ಲದೆ, ಇತ್ತೀಚಿನ ಆರ್ಬಿಐ ಹಾಗೂ ಪೊಲೀಸ್ ಇಲಾಖೆ ಮಾರ್ಗಸೂಚಿಗಳ ಅನುಸಾರ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಂಗಡಿ ಮಾಲೀಕರಿಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬ0ದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು.
ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಪೊಲೀಸ್ ಇಲಾಖೆ ಸದಾ ಭದ್ರತೆಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
(Visited 1 times, 1 visits today)



