
ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಗೊಲ್ಲಹಳ್ಳಿ ಗ್ರಾಮದ ಸರ್ಕಾರಿ ಹಳ್ಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಿಡಿಗೇಶಿ ಪಿ.ಎಸ್.ಐ ರವೀಂದ್ರ ಅವರು ತಮ್ಮ ಸಿಬ್ಬಂದಿಯೊ0ದಿಗೆ ಹಠಾತ್ ದಾಳಿ ನಡೆಸಿದರು. ದಾಳಿ ವೇಳೆ ಜೂಜಾಟದಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು.
ಬಂಧಿತರ ಬಳಿ ಪರಿಶೀಲನೆ ನಡೆಸಿದಾಗ ಜೂಜಾಟಕ್ಕೆ ಬಳಸಲಾಗುತ್ತಿದ್ದ ನಗದು ಹಣ ಪತ್ತೆಯಾಗಿದ್ದು, ಒಟ್ಟು ೫,೧೬೦ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬAಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಪೊಲೀಸರ ಪ್ರಾಥಮಿಕ ವಿಚಾರಣೆ ಬಳಿಕ ಬಂಧಿತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಜೂಜಾಟ, ಮದ್ಯಪಾನ ಹಾಗೂ ಇತರ ಕಾನೂನುಬಾಹಿರ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ಸಾರ್ವಜನಿಕರು ತಮ್ಮ ಸುತ್ತಮುತ್ತ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಸಹಕಾರ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮಿಡಿಗೇಶಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.




