
ತುಮಕೂರು: ೨೦೨೬ರ ಗಣರಾಜ್ಯೋತ್ಸ ವವನ್ನು ಸುವ್ಯವಸ್ಥಿತವಾಗಿ ಹಾಗೂ ಅರ್ಥ ಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡ ಳಿತದಿಂದ ಪೂರ್ವಭಾವಿ ಸಭೆಯನ್ನು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟದ ಅಧಿಕಾ ರಿಗಳು ಭಾಗವಹಿಸಿದ್ದರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದ್ದಾರೆ.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳು ಉಂಟಾಗದ0ತೆ ಪ್ರತಿಯೊಂದು ವಿಭಾಗವೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಕಾರ್ಯಕ್ರಮದ ರೂಪು ರೇಷೆ, ಭದ್ರತಾ ವ್ಯವಸ್ಥೆ, ವೇದಿಕೆ ಸಿದ್ಧತೆ, ಗಣ್ಯರ ಆಸನ ವ್ಯವಸ್ಥೆ, ಪೆರೇಡ್, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ಸೇರಿದಂತೆ ವಿವಿಧ ಅಂಶಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಲಾಯಿತು.
ಪ್ರತಿ ಇಲಾಖೆಗೆ ಸ್ಪಷ್ಟವಾದ ಕಾರ್ಯ ಹಂಚಿಕೆಯನ್ನು ಮಾಡಿ, ನಿಗದಿತ ಸಮಯದೊಳಗೆ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಯಿತು. ವಿಶೇಷವಾಗಿ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ನಗರಸಭೆ, ಆರೋಗ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಲಾಯಿತು.
ಗಣರಾಜ್ಯೋತ್ಸವವು ರಾಷ್ಟ್ರಭಕ್ತಿ ಮತ್ತು ಏಕತೆಯನ್ನು ಪ್ರತಿಬಿಂಬಿಸುವ ಮಹತ್ವದ ಕಾರ್ಯ ಕ್ರಮವಾಗಿರುವುದರಿಂದ, ಶಿಸ್ತಿನೊಂದಿಗೆ ಹಾಗೂ ಗೌರವಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾ ಧಿಕಾರಿ ಶುಭ ಕಲ್ಯಾಣ್ ಅವರು ಹೇಳಿದರು. ಎಲ್ಲ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಅವರು ಮನವಿ ಮಾಡಿದರು.



