ಕುಣಿಗಲ್: ತಾಲೂಕಿನ ಕಸಬಾ ಹೋಬಳಿಯ ಚನ್ನಾಪುರ ಗ್ರಾಮದ ಪಾಪಣ್ಣ (೬೫) ಎಂಬ ವ್ಯಕ್ತಿಯನ್ನು ಗಾಂಜಾ ಮಾರಾಟ ಪ್ರಕರಣದಲ್ಲಿ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಭಾನು ವಾರ ಮಧ್ಯಾಹ್ನ ಸುಮಾರು ೩.೩೦ರ ವೇಳೆಗೆ ಬೇಗೂರು ಬ್ರಿಡ್ಜ್ನ ಸರ್ವೀಸ್ ರಸ್ತೆಯಲ್ಲಿ ಅನು ಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯ ಮೇಲೆ ಕುಣಿಗಲ್ ಠಾಣೆಯ ಪೊಲೀಸರು ನಿಗಾ ವಹಿಸಿದ್ದರು. ಆತನ ಚಲನವಲನ ಶಂಕಾಸ್ಪದ ವಾಗಿದ್ದರಿಂದ ತಕ್ಷಣವೇ ವಶಕ್ಕೆ ಪಡೆದು ವಿಚಾ ರಣೆ ನಡೆಸಿದರು.

ವಿಚಾರಣೆಯ ವೇಳೆ ಪಾಪಣ್ಣನ ಬಳಿ ಗಾಂಜಾ ಸೊಪ್ಪು ಪತ್ತೆಯಾಗಿದ್ದು, ಅದನ್ನು ಮಾರಾಟ ಮಾಡುವ ಉದ್ದೇಶದಿಂದಲೇ ಆತ ರಸ್ತೆಯ ಬಳಿ ಸಂಚರಿಸುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ಗಾಂಜಾ ಸೊಪ್ಪನ್ನು ಜಪ್ತಿ ಮಾಡಿಕೊಂಡು, ಆರೋಪಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾ0ಜಾ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂ ರ್ಣ ವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಕೂಡ ಇಂತಹ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡು ವಂತೆ ಮನವಿ ಮಾಡಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದು, ಗಾಂಜಾ ಪೂರೈಕೆ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಕುಣಿಗಲ್ ತಾಲೂಕಿನಲ್ಲಿ ಮಾದಕ ವಸ್ತು ಗಳ ವಿರುದ್ಧ ನಡೆಯುತ್ತಿರುವ ಪೊಲೀಸ್ ಕಾರ್ಯಾಚರಣೆ ಮುಂದುವರಿಯಲಿದ್ದು, ಕಾನೂ ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

(Visited 1 times, 1 visits today)