
ತುಮಕೂರು: ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರು ಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲೆಯಲ್ಲಿ ತೆರೆಯಲಾಗಿರುವ ಕಂಟ್ರೋಲ್ ರೂಮ್ ದೂರ ವಾಣಿ ಸಂಖ್ಯೆ ೭೩೦೪೯೭೫೫೧೯, ಅಥವಾ ೦೮೧೬-೨೨೧೩೪೦೦, ೧೫೫೩೦೪ ಈ ನಂಬರಿಗೆ ಸಾರ್ವಜನಿಕರು ದೂರು ಸಲ್ಲಿಸಬೇಕು. ಸಂಬAಧಿಸಿದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಬಹುದಾಗಿದೆ ಎಂದರು.
ಮಧುಗಿರಿ, ಶಿರಾ, ಕೊರಟಗೆರೆ ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜಾಗುತ್ತಿರುವ ಬಗ್ಗೆ ಪ್ರಯೋ ಗಾಲಯದ ವರದಿ ಬಂದಿದ್ದು, ಈಗಾಗಲೆ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಅಲ್ಲದೆ ಬಯಲು ಶೌಚ ಇನ್ನಿತರ ಸಾಂಕ್ರಾಮಿಕ ರೋಗ ಹರಡಬಹುದಾದ ವಿಷಯಗಳ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಸಾಂಕ್ರಾಮಿಕ ರೋಗಗಳು ಹರಡಬಹುದಾದ ವಿದ್ಯಾರ್ಥಿ ನಿಲಯಗಳ ನೀರು ಸರಬರಾಜು, ಜಾತ್ರೆ, ಹಬ್ಬಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕೆಂದು ತಿಳಿಸಿದ ಅವರು, ತಮ್ಮ ತಾಲೂಕುಗಳಲ್ಲಿ ಯಾವ ಹಬ್ಬ, ಜಾತ್ರೆಗಳು ನಡೆಯುತ್ತವೆ, ಹೆಚ್ಚು ಜನರು ಸೇರುವ ಜಾಗಗಳ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದ ಅವರು ಜಾತ್ರೆ ಮತ್ತು ಹಬ್ಬ ಆಚರಣೆಗೆ ಅನುಮತಿಸುವ ಸಂದ ರ್ಭದಲ್ಲಿ ಸಾಂಕ್ರಾಮಿಕ ರೋಗಗಳ ಹಾಗೂ ಎಚ್ಚರಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದರು.
ಊರುಹಬ್ಬ, ಜಾತ್ರೆ ನಡೆಸಲು ತಹಸೀಲ್ದಾರ್ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದ ಅವರು, ತಾಲೂಕು ಆಡಳಿತದ ಅನುಮತಿ ಇಲ್ಲದೆ ಹಬ್ಬ ಅಥವಾ ಜಾತ್ರೆ ನಡೆದ ಬಗ್ಗೆ ದೂರುಗಳು ಬಂದರೆ ಸಂಬ0ಧಿಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ವಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜ ನಿಕವಾಗಿ ಆಯೋಜನೆಗೊಳ್ಳುವ ಊರ ಹಬ್ಬ/ಜಾತ್ರೆಗಳ ವೇಳೆ ಆಹಾರ/ಪ್ರಸಾದ ಮತ್ತು ಕುಡಿಯುವ ನೀರಿನಿಂದ ಹರಡಬಹುದಾದ ಕಾಯಿಲೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸಿ ಆರೋಗ್ಯ ಇಲಾಖೆ ಸಮನ್ವಯದೊಂದಿಗೆ ಸಂಪೂರ್ಣ ಮೇಲುಸ್ತುವಾರಿ ವಹಿಸಲು ಸೂಚಿಸಿದರು.
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಊರ ಹಬ್ಬ/ಜಾತ್ರೆಗಳ ಅವಧಿಗೂ ಮುನ್ನವೇ ಜಾತ್ರೆ/ಹಬ್ಬ ಆಯೋಜಕರಿಗೆ/ಗ್ರಾಮಸ್ಥರಿಗೆ ಕುಡಿಯುವ ನೀರಿನ ನಿರ್ವಹಣೆ, ಆಹಾರ/ಪ್ರಸಾದ ತಯಾರಿಸುವ ಸ್ಥಳದ ಶುಚಿತ್ವ, ತ್ಯಾಜ್ಯ ವಿಸರ್ಜನ ಮತ್ತು ಶೌಚಾಲಯಗಳ ಕುರಿತಂತೆ ಸೂಕ್ತ ಮಾರ್ಗದರ್ಶನ/ಅರಿವು ಮೂಡಿಸಬೇಕು. ಊರ ಹಬ್ಬ/ಜಾತ್ರೆ ವೇಳೆ ವಿತರಿಸುವ ಕುಡಿಯುವ ನೀರನ್ನು ಪಡೆದ ನೀರಿನ ಮೂಲ, ಅದರ ಗುಣಮಟ್ಟ, ಸಾಗಿಸಲು ಉಪಯೋಗಿಸುವ ಟ್ಯಾಂಕರ್ ಮತ್ತು ಶೇಖರಿಸುವ ಟ್ಯಾಂಕ್‌ಗಳ ಶುಚಿತ್ವದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಆಹಾರ/ಪ್ರಸಾದ ತಯಾರಿಸಲು ಬಳಸುವ ನೀರು ಮತ್ತು ಅಡುಗೆ ಪ್ರದೇಶದ ಸುತ್ತಮುತ್ತ ಶುಚಿತ್ವದ ಬಗ್ಗೆ, ಪರಿವೀಕ್ಷಣೆ ನಡೆಸಬೇಕಲ್ಲದೆ, ಕುಡಿಯುವ ನೀರು/ಆಹಾರ/ಪ್ರಸಾದ ವಿತರಿಸುವವರು ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ವಿಸರ್ಜನೆ ಸ್ಥಳಗಳು ಮತ್ತು ಶೌಚಾಲಯಗಳಿಂದ ಕುಡಿಯುವ ನೀರು/ಆಹಾರ/ಪ್ರಸಾದ ವಿತರಿಸುವ ಸ್ಥಳಗಳಲ್ಲಿ ಅಗತ್ಯ ಅಂತರ ಕಾಪಾಡುವುದು, ಕ್ರಮಬದ್ದವಾಗಿ ತ್ಯಾಜ್ಯ ವಿಲೇವಾರಿ ಮಾಡುವುದೂ ಸೇರಿದಂತೆ ಮನೆಗಳಲ್ಲಿ ಎಲ್ಲಾ ಗ್ರಾಮಸ್ಥರು ಮುಖ್ಯವಾಗಿ ವೃದ್ಧರು, ಗರ್ಭಿಣಿ/ಬಾಣಂತಿ ಅನಾರೋಗಿಗಳು ಕಾಯಿಸಿ ಆರಿಸಿದ ನೀರನ್ನು ಸೇವಿಸುವಂತೆ ಸೂಚಿಸಬೇಕು.
ಗ್ರಾಮಗಳಲ್ಲಿನ ಕೊಳವೆಬಾವಿ, ಪೈಪ್‌ಲೈನ್ ಓಹೆಚ್‌ಟಿ ಆರ್‌ಓ ಪ್ಲಾಂಟ್ ಇತ್ಯಾದಿಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಊರ ಹಬ್ಬ/ಜಾತ್ರೆಗಳ ಅವಧಿ ಯಲ್ಲಿ ಸಂಬ0ಧ ಪಟ್ಟ ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೌಕರರು ಗ್ರಾಮಸ್ಥರೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದು, ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬ0ದಲ್ಲಿ ಕೂಡಲೇ ಆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮತ್ತು ಮೇಲಾಧಿಕಾರಿಗಳಿಗೆ ವರದಿ ಮಾಡಬೇಕೆಂದು ಸೂಚನೆ ನೀಡಿದರು.
ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದ0ತೆ ಮತ್ತು ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದAತೆ ಸಮರ್ಪ ಕವಾಗಿ ಕಾರ್ಯನಿರ್ವಹಿಸಬೇಕು. ತುಮಕೂರು ಜಿಲ್ಲೆಯ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯ ಕ್ರಮಗಳ ಕುರಿತು ಯಾವುದೇ ಅಧಿಕಾರಿ ನಿರ್ಲಕ್ಷö್ಯತೆ ತೋರಿದ್ದಲ್ಲಿ ಅಂತಹ ಅಧಿಕಾರಿ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ನಿರ್ದೇಶನ ನೀಡಿದರು.





