BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ
  • ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
  • ಪುಟ್ಟ ಮನೆ ಬೆಂಕಿಗೆ ಆಹುತಿ
  • ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್
ಇತರೆ ಸುದ್ಧಿಗಳು

ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್

By News Desk BenkiyabaleUpdated:January 07, 2026 4:35 pm

ತುಮಕೂರು: ರಾಜ್ಯಾದ್ಯಂತ ಸುಮಾರು ೨೦ ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಸಿರಿಧಾನ್ಯಗಳನ್ನು ಬೆಳೆಸಲಾಗುತ್ತಿದ್ದು, ಅದರಲ್ಲಿ ತುಮಕೂರು ಜಿಲ್ಲೆಯಲ್ಲಿ ೧.೭೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳ ಬೆಳೆ ಬೆಳೆಯುತ್ತಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯಗಳನ್ನು ಬೆಳೆಸುವ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದರು.
ಬುಧವಾರ ನಗರದ ಗಾಜಿನ ಮನೆಯ ಸಭಾಂಗಣದಲ್ಲಿ ಜಿಲ್ಲಾಡಾಳಿತ, ಜಿಲ್ಲಾಪಂಚಾಯತ್, ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಮತ್ತು ವಾಣಿಜ್ಯ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಿರಿಧಾನ್ಯಗಳಿಗೆ ೧೦ ಸಾವಿರ ವರ್ಷಗಳ ಇತಿಹಾಸವಿದ್ದು, ಮಾನವನು ಬೆಳೆದ ಮೊದಲ ಕೃಷಿ ಬೆಳೆಗಳಲ್ಲಿ ಸಿರಿಧಾನ್ಯಗಳು ಒಂದು, ಭಾರತದಲ್ಲಿ ಸಿರಿಧಾನ್ಯ ಬೆಳೆಯುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಿರಿಧಾನ್ಯಗಳ ಉತ್ಪಾದನೆ ಕ್ರಮೇಣ ಹೆಚ್ಚುತ್ತಿದೆ ಎಂದು ಹೇಳಿದರು.
೬೦ರ ದಶಕದವರೆಗೂ ದೇಶದಲ್ಲಿ ಆಹಾರ ಉತ್ಪಾದನೆ ಕಡಿಮೆ ಇದ್ದರೂ, ೮೦ರ ನಂತರ ಕೃಷಿ ತಂತ್ರಜ್ಞಾನದಲ್ಲಿ ನಡೆದ ಅಭಿವೃದ್ಧಿಯಿಂದ ಅಕ್ಕಿ, ಗೋಧಿ, ಸಕ್ಕರೆ, ಹಾಲು ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳಲ್ಲಿ ಭಾರತ ಆತ್ಮನಿರ್ಭರ ದೇಶವಾಗಿದೆ. ಇಂದು ನಮ್ಮ ದೇಶವು ಸಾಕಷ್ಟು ಆಹಾರ ಉತ್ಪಾದನೆ ಮಾಡಿ ಇತರೆ ದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ತಲುಪಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಿರಿಧಾನ್ಯಗಳ ಉತ್ಪಾದನೆ ಹೆಚ್ಚಾಗುವುದರಿಂದ ರೈತರ ಆರ್ಥಿಕ ಸ್ಥಿತಿ ಬಲವಾಗುವುದಲ್ಲದೆ, ಜನರ ಆರೋಗ್ಯ ಕಾಪಾಡುವಲ್ಲಿ ಸಹ ಮಹತ್ತರ ಪಾತ್ರ ವಹಿಸುತ್ತವೆ. ಸಿರಿಧಾನ್ಯಗಳಿಂದ ಇಂದಿಗೆ ವಿವಿಧ ರೀತಿಯ ಆಹಾರ. ಪದಾರ್ಥಗಳನ್ನು ತಯಾರಿಸಲಾಗುತ್ತಿದೆ ತುಮಕೂರಿನ ಜಿನಿ ಸಂಸ್ಥೆ ಸಿರಿ ಧಾನ್ಯಗಳ ಆಹಾರ ಪದಾರ್ಥಗಳನ್ನು ತಯಾರಿಸಿ ಆರಂಭದಲ್ಲಿ ಸಣ್ಣ ಮಟ್ಟಿನಲ್ಲಿ ಕಾರ್ಯಾರಂಭಮಾಡಿದರೂ, ಇಂದು ವರ್ಷಕ್ಕೆ ಸುಮಾರು ೭ ಕೋಟಿ ರೂಪಾಯಿಗಳ ಆದಾಯ ಗಳಿಸುವ ಮಟ್ಟಕ್ಕೆ ಬೆಳೆದಿದೆ ಎಂದು ಹೇಳಿದರು.
ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ್ ಎಸ್ ಕಳ್ಳೆನ್ನವರ ಮಾತನಾಡಿ, ಸಿರಿಧಾನ್ಯಗಳು ಕಡಿಮೆ ಮಳೆ ಪ್ರಮಾಣದಲ್ಲಿಯೇ ಬೆಳೆದು ಬೆಳೆಗಾರರಿಗೆ ಹೆಚ್ಚಿನ ಅನುಕೂಲತೆ ನೀಡುವ ಬೆಳೆಗಳಾಗಿವೆ. ಇವುಗಳಿಗೆ ಹೆಚ್ಚು ರಸಗೊಬ್ಬರ ಹಾಗೂ ರಾಸಾಯನಿಕ ಕೀಟನಾಶಕಗಳ ಅವಶ್ಯಕತೆಯಿಲ್ಲದೆ, ಕೀಟ-ರೋಗ ಬಾಧೆ ಕಡಿಮೆಯಾಗಿರುವುದರಿಂದ ಬೆಳೆ ವೆಚ್ಚವೂ ತಗ್ಗುತ್ತದೆ.
ಸಿರಿಧಾನ್ಯಗಳು ಮಣ್ಣಿನ ಸಾರಾಂಶವನ್ನು ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಬೆಳೆಯಾಗಿಯೂ ಪರಿಗಣಿಸಲ್ಪಟ್ಟಿವೆ. ಪೋಷಕಾಂಶಗಳಿAದ ಸಮೃದ್ಧವಾಗಿರುವುದರಿಂದ ಉತ್ತಮ ಪಶುವಿನ ಮೇವು ಆಗಿಯೂ ಬಳಸಬಹುದು. ರೈತರು ಸಿರಿಧಾನ್ಯಗಳನ್ನು ಬೆಳೆದರೆ ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಲಾಭ ಗಳಿಸುವುದು ಮಾತ್ರವಲ್ಲ, ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿರುವ ಕಾರಣ ಆರ್ಥಿಕ ಭದ್ರತೆಯಿಗೂ ಸಹಾಯವಾಗುತ್ತದೆ. ಜೊತೆಗೆ, ಸಿರಿಧಾನ್ಯಗಳಿಂದ ತಯಾರಾಗುವ ಆಹಾರ ಪದಾರ್ಥಗಳು ಮಾನವ ಆರೋಗ್ಯವನ್ನು ಕಾಪಾಡಲು ಮಹತ್ತರ ಪಾತ್ರ ವಹಿಸುತ್ತಿದ್ದು, ಗ್ರಾಹಕರಿಗೆ ಆರೋಗ್ಯಕರ ಜೀವನಶೈಲಿಯನ್ನು ನೀಡುವಲ್ಲಿ ಸಹಕಾರಿ ಆಗುತ್ತವೆ.

(Visited 1 times, 1 visits today)
Previous Articleಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
Next Article ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು
News Desk Benkiyabale

Related Posts

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm news

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm Trending

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm news
ತಾಜಾ ಸುದ್ಧಿಗಳು
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm
Trending

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
Trending

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
Our Youtube Channel
Our Picks

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

By News Desk BenkiyabaleSeptember 22, 2026 5:12 pm

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.