BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಮರ್ಶೆ ಎಂದರೇ ಅಂತಿಮ ತೀರ್ಪು ಅಲ್ಲ: ನಾಗಭೂಷಣಸ್ವಾಮಿ ಅಭಿಮತ
ಇತರೆ ಸುದ್ಧಿಗಳು

ವಿಮರ್ಶೆ ಎಂದರೇ ಅಂತಿಮ ತೀರ್ಪು ಅಲ್ಲ: ನಾಗಭೂಷಣಸ್ವಾಮಿ ಅಭಿಮತ

By News Desk BenkiyabaleUpdated:January 08, 2026 4:43 pm

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಮತ್ತು ಅಮೂಲ್ಯ ಪುಸ್ತಕ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಗೀತಾ ವಸಂತ ಅವರ “ತೆರೆದಷ್ಟೂ ಅರಿವು” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ವಿಮರ್ಶಕ ಒಂದು ನಿಲುವನ್ನು ತಾಳಬೇಕು ಮತ್ತು ಈ ನಿಲುವಿನ ಬಗೆಗೂ ವಿಮರ್ಶೆ ಇರಬೇಕು. ಒಂದು ಸಾಹಿತ್ಯ ಕೃತಿಯನ್ನು ಅರ್ಥ ಮಾಡಿಕೊಳ್ಳುವುದು ಎನ್ನುವುದು ಇಲ್ಲ. ಅರ್ಥ ಎನ್ನುವುದು ಅನುಭವದ ಸಾವು. ಒಂದು ಸತ್ಯ ಎನ್ನುವುದು ಇದೆಯೇ, ಸತ್ಯ, ಅನುಭವ ಎಂದರೇನು, ಅನುಭವಗಳ ಮೂಲಕ ಅರಳಿ ಬೆಳೆಯುವುದೆಂದರೇನು ಇತ್ಯಾದಿ ಮಹತ್ವದ ಪ್ರಶ್ನೆಗಳನ್ನು ಹಾಕಿಕೊಳ್ಳುವ ಲೇಖಕಿ, ತಮ್ಮ ಓದನ್ನು ಕುರಿತ ಪ್ರಾಮಾಣಿಕವಾದ ವಿಮರ್ಶೆಯನ್ನು ಈ ಕೃತಿಯಲ್ಲಿ ಮಂಡಿಸಿದ್ದಾರೆ ಎಂದು ಹೇಳಿದರು.
ಕೃತಿಯನ್ನು ಕುರಿತು ಮಾತನಾಡಿದ ರಂಗನಾಥ ಕಂಟನಕುAಟೆಯವರು “ಕೃತಿಯ ಒಳಗಿನ ಅನುಭವ, ತಿಳಿವು ಮತ್ತು ದರ್ಶನವನ್ನು ನಾವು ನಮ್ಮದಾಗಿಸಿಕೊಳ್ಳುವುದು ಗೀತ ವಸಂತ ಅವರ ವಿಮರ್ಶೆಯ ಮಾದರಿ. ಬೇರೆ ಬೇರೆ ಸಿದ್ಧಾಂತಗಳ ಹೊರಗೆ ನಿಂತು ಕೃತಿಯ ಅನುಭವ ಲೋಕವನ್ನು ಪ್ರವೇಶಿಸಬೇಕು. ಆ ಮೂಲಕ ನಮ್ಮ ಅನುಭವದ ತಿಳುವಳಿಕೆಯ ಕ್ರಮವನ್ನು ನಾವು ರೂಪಿಸಿಕೊಳ್ಳಬೇಕು ಎಂಬ ಉದ್ದೇಶ ಇವರ ಬರಹಗಳಲ್ಲಿ ಕಾಣುತ್ತಿದೆ. ಇದು ವಿಶೇಷವೂ ಹೌದು, ವಿಮರ್ಶಕರ ಮಿತಿಯೂ ಹೌದು. ಲೇಖಕರು ಸಾಹಿತ್ಯ ಕೃತಿಯ ಅನನ್ಯತೆಯನ್ನು ಮಾನ್ಯ ಮಾಡುವ, ಸಾಹಿತ್ಯ ಕೃತಿಯ ಅನುಭವವನ್ನೇ ಪ್ರಧಾನವಾಗಿ ನೋಡುವ ಪ್ರಯತ್ನ ಮಾಡಿದ್ದಾರೆ. ಕೋಮಲವಾದ ಸೃಜನಶೀಲ ಕೃತಿಗಳನ್ನು ಇಲ್ಲಿನ ಲೇಖಕರು ಅಷ್ಟೇ ಕೋಮಲವಾಗಿ ಎದುರುಗೊಳ್ಳುತ್ತಾರೆ. ಆದರೆ, ವಿಮರ್ಶೆ ಎಂಬುದೇ ಒಂದು ಬಂಡುಕೋರತನ, ಚಕಮಕಿತನ. ಜಾಗತಿಕ ಮಟ್ಟದಲ್ಲಿ, ವಿಮರ್ಶೆಯ ಪ್ರಜಾಸತ್ತಾತ್ಮಕ ಸ್ಪೇಸ್ ಕಳೆದುಹೊಗುತ್ತಿರುವ ಈ ಕಾಲದಲ್ಲಿ ನಮ್ಮ ನಿಲುವು ಏನು ಎಂಬುದು ಮುಖ್ಯ” ಎಂದು ಹೇಳಿದರು.
ಲೇಖಕಿ ಗೀತಾ ವಸಂತ ಮಾತನಾಡುತ್ತಾ, ಭಿನ್ನ-ಭಿನ್ನ ಆಲೋಚನಾ ಕ್ರಮಗಳ ಹಿನ್ನೆಲೆಯಿಂದ ಬಂದವರ ಅಭಿಪ್ರಾಯಗಳನ್ನು ಪಡೆಯುವ ಮೂಲಕ ಹೊಸ ಅರಿವನ್ನು ಕಾಣುವುದು ಕಾಣಿಸುವುದು ಆ ಮೂಲಕ ನಮ್ಮನ್ನ ನಾವು ಹಿಗ್ಗಿಸಿಕೊಳ್ಳುವುದು ಸಾಧ್ಯ ಇದನ್ನು ಇಂದಿನ ಕಾರ್ಯಕ್ರಮ ಆಗುಮಾಡಿದೆ. ಕೋಮಲವಾಗಿರುವುದು ದುರ್ಭಲವಲ್ಲ ಎನ್ನುವುದು ನನ್ನ ಅನುಭವದಲ್ಲಿ ಮೂಡಿದ ಲೋಕದೃಷ್ಟಿ. ಎಲ್ಲವನ್ನೂ ಸಾವಧಾನದಿಂದ, ಸೂಕ್ಷ್ಮತೆಯಿಂದ, ಅಂತಃಕರಣದಿ0ದ ಒಳಗೊಳ್ಳಬೇಕು ಎಂಬ ಹಿನ್ನೆಲೆಯಲ್ಲಿ ಸಾಹಿತ್ಯಿಕ ಒಳನೋಟಗಳನ್ನು ಕಾಣಿಸುವ ಪ್ರಯತ್ನ ಈ ಕೃತಿಯಲ್ಲಿದೆ ಎಂದರು. ಕಾರ್ಯಕ್ರಮದಲ್ಲಿ, ಪರೀಕ್ಷಾಂಗ ಕುಲಸಚಿವರಾದ ಪ್ರೊ. ಮೋಹನ್ ಎಚ್ ಎಸ್, ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಪ್ರೊ. ನಿತ್ಯಾನಂದ ಬಿ. ಶೆಟ್ಟಿ, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎನ್. ಎಸ್. ಗುಂಡೂರ, ಪ್ರಾಧ್ಯಾಪಕರಾದ ನಾಗಭೂಷಣ ಬಗ್ಗನಡು, ವಿದ್ವಾಂಸರಾದ ಎಸ್. ಪಿ. ಪದ್ಮಪ್ರಸಾದ್, ಸಾಹಿತಿ ರಂಗಮ್ಮ ಹೊದೆಕಲ್, ಕತೆಗಾರರಾದ ಮಿರ್ಜ ಬಷೀರ್, ಗುರುಪ್ರಸಾದ್ ಕಂಟಲಗೆರೆ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಂಶೋಧನಾರ್ಥಿಗಳು ಹಾಜರಿದ್ದು ಅರ್ಥಪೂರ್ಣ ಸಂವಾದಕ್ಕೆ ಸಾಕ್ಷಿಯಾದರು.

(Visited 1 times, 1 visits today)
Previous Articleಜ.೧೧: ನಗರದಲ್ಲಿ ವಿಶ್ವಕಪ್ ವಿಜೇತೆ ಅಂಧ ಬಾಲಕಿ ದೀಪಿಕಾ ಮತ್ತು ತಂಡಕ್ಕೆ ಸನ್ಮಾನ
Next Article ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ: ಪಟ್ಟಣದಲ್ಲಿ ಸಂಭ್ರಮಾಚರಣೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.