
ತುಮಕೂರು ನಗರ: ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ನಿವೇಶನ ಹಂಚಿಕೆ ಸಂಬ0ಧ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹ ತ್ವದ ಚರ್ಚೆ ನಡೆಸಲಾಯಿತು. ಈಗಾಗಲೇ ಗುರು ತಿಸಲಾದ ನಿವೇಶನಗಳನ್ನು ವಿಳಂಬವಿಲ್ಲದೆ, ನಿಯ ಮಾನುಸಾರವಾಗಿ ಅರ್ಹ ಫಲಾನುಭವಿಗಳಿಗೆ ವಿತರಿಸುವಂತೆ ಸಂಬ0ಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಯಿತು.
ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಅರ್ಹರಿಗೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಯಾವುದೇ ಅಡೆತಡೆಗಳು ಉಂಟಾಗದ0ತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಈ ಸಭೆಯಲ್ಲಿ ಉಪ ಕಾರ್ಯದರ್ಶಿ (ಅಭಿವೃದ್ಧಿ), ಉಪ ಕಾರ್ಯದರ್ಶಿ (ಆಡಳಿತ), ಮುಖ್ಯ ಯೋಜನಾಧಿಕಾರಿಗಳು, ವಿವಿಧ ಯೋಜನಾ ನಿರ್ದೇಶಕರು ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊ0ಡರು. ಜಿಲ್ಲೆಯ ಅಭಿವೃದ್ಧಿ ಹಾಗೂ ಜನಹಿತದ ಕಾರ್ಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಯುಕ್ತವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.



