BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಿ
ಇತರೆ ಸುದ್ಧಿಗಳು

ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಿ

ಪೂರ್ವಭಾವಿ ಸಭೆಯಲ್ಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ಒತ್ತಾಯ
By News Desk BenkiyabaleUpdated:January 09, 2026 4:10 pm

ತುಮಕೂರು: ರಾಜ್ಯದಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ನೀಡುತ್ತಿರುವ ವೇತನ ಸಾಕಾಗುತ್ತಿಲ್ಲ. ಹಾಗಾಗಿ ಅಂಬೇಡ್ಕರ್ ಅಭಿವೃದ್ದಿ ನಿಗಮದಲ್ಲಿ ಹೆಚ್ಚಳ ಮಾಡಿರುವಂತೆ ಎಲ್ಲಾ ಇಲಾಖೆಗಳಲ್ಲೂ ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ಒತ್ತಾಯಿಸಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಸಂಘದ ತುಮಕೂರು ಜಿಲ್ಲಾ ಘಟಕ ಉದ್ಘಾಟನೆ ಸಂಬ0ಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಇಲಾಖೆಗಳಲ್ಲಿ ಹೊರ ಗುತ್ತಿಗೆ ನೌಕರರ ನೀಡುತ್ತಿರುವ ವೇತನ ಸಾಕಾಗುತ್ತಿಲ್ಲ. ಇದನ್ನು ಮನಗಂಡು ಈಗಾಗಲೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಹೊರ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಮಾಡಿಸಲಾಗಿದೆ. ಇನ್ನೆರಡು ದಿನದಲ್ಲಿ ಈ ಆದೇಶ ಹೊರ ಬೀಳಲಿದ್ದು, ಎಲ್ಲಾ ಸರ್ಕಾರಿ ಇಲಾಖೆಗಳಿಗೂ ಈ ಆದೇಶ ಪತ್ರ ನೀಡಿ ಹೊರ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದರು.
ಸರ್ಕಾರ ಸುಮಾರು ಇಲಾಖೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿ ರುವ ಹೊರ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸಹಕಾರ ಸಂಘ ರಚನೆ ಮಾಡುವ ಸಂದರ್ಭದಲ್ಲೂ ಈಗ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರನ್ನು ಮುಂದುವರೆಸಬೇಕು ಎಂದು ಆಗ್ರಹಿ ಸಿದರು.
ಸಹಕಾರ ಸಂಘದ ನಡವಳಿಗಳು ಹೊರ ಗುತ್ತಿಗೆ ನೌಕರರಿಗೆ ಧಕ್ಕೆಯಾಗುತ್ತಿದೆ. ಇದರ ನಡವಳಿಗಳಲ್ಲಿ ೧೧ ತಿಂಗಳು ಕೆಲಸ ಕೊಟ್ಟರೆ ಮತ್ತೆ ಅವರಿಗೆ ಕೆಲಸ ಕೊಡುವುದಿಲ್ಲ ಎಂದು ಹೇಳಲಾಗಿದೆ. ಹಾಗಾಗಿ ಈ ನಡವಳಿಯನ್ನು ನಾವು ಸಂಪೂರ್ಣವಾಗಿ ತಿರಸ್ಕಾರ ಮಾಡಿದ್ದೇವೆ. ನಡವಳಿ ನೌಕರರ ಪರವಾಗಿರಬೇಕು. ಒಂದು ಬಾರಿ ಕೆಲಸ ಮಾಡಿದರೆ ಆ ನೌಕರರು ನಿವೃತ್ತಿಯಾಗುವವರೆಗೂ ಅದೇ ಇಲಾಖೆಯಲ್ಲೇ ಕೆಲಸ ಮಾಡಬೇಕು ಎಂದರು.
ಈಗಾಗಲೇ ಕಳೆದ ೧೦-೨೦ ವರ್ಷಗಳಿಂದ ಕೆಲಸ ಮಾಡುತ್ತಿರುವ ನೌಕರರನ್ನು ಅಲ್ಲೇ ಮುಂದುವರೆಸಬೇಕು ಎಂಬುದು ನಮ್ಮ ಬೇಡಿಕೆ. ಯಾವುದೇ ಕಾರಣಕ್ಕೂ ೬೦ ವರ್ಷದವರೆಗೂ ಆ ನೌಕರರನ್ನು ಕೆಲಸದಿಂದ ತೆಗೆಯಬಾರದು ಎಂದು ಅವರು ಒತ್ತಾಯಿಸಿದರು.
ಕೆಲ ಸರ್ಕಾರಿ ಇಲಾಖೆಗಳಲ್ಲಿ ನಿವೃತ್ತ ನೌಕರರನ್ನೆ ಹೊರ ಗುತ್ತಿದೆ ಆಧಾರದ ಮೇಲೆ ಮತ್ತೆ ನೇಮಕ ಮಾಡಿಕೊಂಡಿದ್ದಾರೆ. ಇದು ಸರಿಯಲ್ಲ. ಕೂಡಲೇ ನಿವೃತ್ತ ನೌಕರರ ಮರು ನೇಮಕಾತಿಯನ್ನು ಕೈ ಬಿಡಬೇಕು. ಇದನ್ನು ವಿರೋಧಿಸಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಮರುಗೇಶ ಟಿ.ಸಿ. ಮಾತನಾಡಿ, ಸರ್ಕಾರಿ ಹೊರ ಗುತ್ತಿಗೆ ನೌಕರರ ಸಂಘದ ಸದಸ್ಯರಿಗೆ ೧ ಲಕ್ಷ ರೂ. ಅಪಘಾತ ವಿಮೆ ನೀಡಬೇಕು. ಸಂಘದ ಪ್ರತಿ ಸದಸ್ಯರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯಾದ್ಯಂತ ಸಂಘಟನೆ ಮಾಡಲಾಗತ್ತಿದೆ ಎಂದರು.
ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಕೈಗೊಂಡಿರುವ ಬೀದರ್ ಮಾದರಿ ಸಹಕಾರ ಸಂಘದ ರಚನೆ ಕುರಿತು ಸಂಪುಟ ಉಪ ಸಮಿತಿ ಕೈಗೊಂಡಿರುವ ವರದಿಯಲ್ಲಿ ಕೆಲವು ಶಿಫಾರಸ್ಸುಗಳನ್ನು ಬದಲಾಯಿಸಿ ನೌಕರರ ಹಿತ ಕಾಯುವ ನಿಟ್ಟಿನಲ್ಲಿ ಹಾಲಿ ಕೆಲಸ ಮಾಡುವ ನೌಕರರನ್ನು ಸಂಘದ ಅಡಿಯಲ್ಲಿ ಮುಂದುವರಿಸಬೇಕು ಹಾಗೂ ನೌಕರರು ಅವರ ೬೦ ವರ್ಷ ವಯಸ್ಸಿನವರೆಗೂ ಸದರಿ ಸ್ಥಳದಲ್ಲೇ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘಟಿತರಾಗುವ ಮೂಲಕ ತಮ್ಮ ಬೇಡಿಕೆ ಈಡೇರಿಕೆಗೆ ಹಾಗೂ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು. ನೌಕರರ ಜತೆ ಸಂಘ ಸದಾ ಇರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಇಎಸ್‌ಐ, ಪಿಎಫ್, ಭದ್ರತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾ ಧ್ಯಕ್ಷ ಸುಧಾಕರ್, ಪ್ರಧಾನ ಕಾರ್ಯದರ್ಶಿ ಡಮರುಗೇಶ್, ರಾಜ್ಯ ವಕ್ತಾರ ಸುನೀಲ್, ರಾಜ್ಯ ಸಂಚಾಲಕ ಗಂಗಾಧರ್ ಮತ್ತಿತರರು ಪಾಲ್ಗೊಂಡಿದ್ದರು.

(Visited 1 times, 1 visits today)
Previous Articleಸಮಾಜದ ಏಳಿಗೆ ಬದ್ಧವಾಗಿ ಕಾರ್ಯ ನಿರ್ವಹಿಸಿ
Next Article ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ: ಮಾನವೀಯತೆ ಮೆರೆದ ಯುವಕರು
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.