BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

By News Desk BenkiyabaleUpdated:January 27, 2026 4:02 pm

ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜರುಗಿತು.
ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ ರಾಷ್ಟçಧ್ವ ಜಾರೋಹಣ ನೆರವೇರಿಸಿ ಧ್ವಜಾ ವಂದನೆಯನ್ನು ಸ್ವೀಕರಿಸಿ ಮಾತನಾಡಿ ನಮ್ಮ ದೇಶದ ಸ್ವಾತಂತ್ರ‍್ಯಕ್ಕಾಗಿ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರು ಹೋರಾಟ ನಡೆಸಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ ಮಾದರಿಯ ಆಡಳಿತಕ್ಕೆ ಅಗತ್ಯವಾದ ನಿಯಮಗಳನ್ನು ರೂಪಿಸಿ ಶ್ರೇಷ್ಠ ಸಂವಿಧಾನವನ್ನು ರಚಿಸಿಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಿಸಿಬೇಕು.
೧೯೪೯ರ ನವೆಂಬರ್ ೨೬ರಂದು ಅಂಗೀಕಾರಗೊ0ಡು ೧೯೫೦ರ ಜನವರಿ ೨೬ರಂದು ಜಾರಿಗೆ ಬಂದ ಸಂವಿಧಾನವೇ ಭಾರತದ ಆಡಳಿತದ ಅಡಿಪಾಯವಾಗಿದೆ. ಸಂವಿಧಾನವು ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನಿರ್ದಿಷ್ಟಪಡಿಸಿದ್ದು, ಭಾರತದಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದರು.
ಇ0ದು ಭಾರತ ಶಿಕ್ಷಣ, ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಯೋಗ, ಅಧ್ಯಾತ್ಮ, ಸಂಸ್ಕೃತಿ, ಆರೋಗ್ಯ, ರಕ್ಷಣೆ ಹಾಗೂ ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದು, ಜಗತ್ತೇ ಭಾರತದತ್ತ ಗಮನ ಹರಿಸುತ್ತಿದೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಸಾರ್ವಭೌಮರಾಗಿದ್ದು, ಉತ್ತಮ ನಾಯಕರನ್ನು ಆಯ್ಕೆಮಾಡುವ ಜವಾಬ್ದಾರಿ ನಾಗರಿಕರ ಮೇಲಿದೆ.
೧೮ ವರ್ಷ ತುಂಬಿದ ಪ್ರತಿಯೊಬ್ಬ ಅರ್ಹ ನಾಗರಿಕನು ಮತದಾ ರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊAಡು, ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ನಿರ್ಲಕ್ಷಿಸದೇ ತಪ್ಪದೇ ಮತದಾನ ಮಾಡಬೇಕು. ಜನವರಿ ೨೫ರಂದು ಮತದಾರರ ದಿನಾಚರಣೆ ಮೂಲಕ ಹೊಸ ಮತದಾರರಿಗೆ ಗುರುತಿನ ಚೀಟಿ ನೀಡಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಶಾಸಕ ಕೆ.ಷಡಕ್ಷರಿ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವೇ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯಾಗಿದ್ದು, ಪ್ರತಿಯೊಬ್ಬ ನಾಗರಿಕನು ಸಂವಿಧಾನವನ್ನು ಗೌರವಿಸುವುದರೊಂದಿಗೆ ಅದರ ತತ್ವಗಳು ಹಾಗೂ ಮೂಲ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸಬೇಕಾಗಿದೆ. ಭಾರತವು ಹಲವು ಸವಾಲುಗಳ ನಡುವೆಯೂ ನಿರಂತರವಾಗಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದ್ದು, ಜನಸಂಖ್ಯೆಯ ಅಗತ್ಯಕ್ಕೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಅಧಿಕಾರಿಗಳು, ಕಾರ್ಮಿಕರು ಹಾಗೂ ಜನಪ್ರ ತಿನಿಧಿಗಳು ಸಂವಿಧಾನದ ಆಶಯಗಳನ್ನು ಮನಗಂಡು ಕಾರ್ಯ ನಿರ್ವಹಿಸಬೇಕು.
ತಿಪಟೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಕೆಲವೊಂದು ಅಡಚಣೆಗಳಿದ್ದರೂ ಅವನ್ನು ಬಗೆಹರಿಸಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಗಣರಾಜ್ಯೋತ್ಸವವನ್ನು ಕೇವಲ ಸರ್ಕಾರಿ ಮಟ್ಟಕ್ಕೆ ಸೀಮಿತ ಗೊಳಿಸದೆ ಪ್ರತಿಯೊಂದು ಮನೆಯಲ್ಲೂ ಆಚರಿಸುವ ಮನೋಭಾವ ಬೆಳೆಸಬೇಕು. ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದ್ದು, ಈ ಬಾರಿ ಸಾರ್ವಜನಿಕರ ಹಾಜರಾತಿ ಕಡಿಮೆ ಯಾಗಿರುವುದು ಗಮನಿಸಲಾ ಗಿದೆ ಎಂದರು.
ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಆಯೋಜಿಸ ಲಾಗಿದ್ದ ಸಾಂಸ್ಕೃತಿಕ ಹಾಗೂ ಪಥಸಂಚಲನ (ಪರೇಡ್) ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಹಿರಿಯ ಪ್ರಾ ಥಮಿಕ ಶಾಲಾ ವಿಭಾಗದಲ್ಲಿ ದೀಕ್ಷಾ ಹೆರಿಟೇಜ್ ಶಾಲೆ ಪ್ರಥಮ, ಡ್ಯಾಪಿಡೆಲ್ಸ್ ಶಾಲೆ ದ್ವೀತೀಯ, ಕಲ್ಪತರು ಸೆಂಟ್ರಲ್ ಸ್ಕೂಲ್ ತೃತೀಯ, ಪ್ರೌಢಶಾಲಾ ವಿಭಾಗದಲ್ಲಿ ಠಾಗೂರು ಪ್ರೌಢಶಾಲೆ ಪ್ರಥಮ, ಎಸ್.ವಿ.ಪಿ. ವಿದ್ಯಾಸಂಸ್ಥೆ ದ್ವಿತೀಯ, ಮಾರುತಿ ಟೇಕ್ವಾಂಡೋ ಕರಾಟೆ ಪ್ರದರ್ಶನಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
ಪಥಸ0ಚಲನ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಎಸ್.ವಿ.ಪಿ. ವಿದ್ಯಾಸಂಸ್ಥೆ ಪ್ರಥಮ ಸ್ಥಾನ, ನಳಂದ ಪ್ರೌಢಶಾಲೆ ದ್ವಿತೀಯ ಸ್ಥಾನ ಹಾಗೂ ಎನ್.ಎಸ್.ಎಂ. ಪ್ರೌಢಶಾಲೆ ತೃತೀಯ, ಹಿರಿಯ ಪ್ರಾ ಥಮಿಕ ಪಾಠಶಾಲಾ ವಿಭಾಗದಲ್ಲಿ ಕಲ್ಪತರು ಸೆಂಟ್ರಲ್ ಸ್ಕೂಲ್ ಪ್ರಥಮ, ದೀಕ್ಷಾ ಹೆರಿಟೇಜ್ ಶಾಲೆ ದ್ವೀತೀಯ, ಸ್ಟೆಲ್ಲಾ ಮೇರಿಸ್‌ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
ರಾಷ್ಟ್ರಮಟ್ಟದ ಥ್ರೋಬಾಲ್ ಚಾಂಪಿಯನಿಶಿಪ್‌ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಹೊಸಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ಶಾಂಭವಿ ಹಾಗೂ ಮಾನ್ಯ ರಾಜ್ಯಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಶ್ರೇಯಸ್ ಗೌಡ.ಎಸ್ ಹಾಗೂ ಅದ್ಭುತ ಜ್ಞಾಪನ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸಾಧನೆ ಮಾಡಿದ ಲಾಸ್ಯ.ಬಿ.ಕೆ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸನ್ಮಾನಿಸಲಾಯಿತು.

(Visited 1 times, 1 visits today)
Previous Articleಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
Next Article ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.