
ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜರುಗಿತು.
ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ ರಾಷ್ಟçಧ್ವ ಜಾರೋಹಣ ನೆರವೇರಿಸಿ ಧ್ವಜಾ ವಂದನೆಯನ್ನು ಸ್ವೀಕರಿಸಿ ಮಾತನಾಡಿ ನಮ್ಮ ದೇಶದ ಸ್ವಾತಂತ್ರ‍್ಯಕ್ಕಾಗಿ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರು ಹೋರಾಟ ನಡೆಸಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ ಮಾದರಿಯ ಆಡಳಿತಕ್ಕೆ ಅಗತ್ಯವಾದ ನಿಯಮಗಳನ್ನು ರೂಪಿಸಿ ಶ್ರೇಷ್ಠ ಸಂವಿಧಾನವನ್ನು ರಚಿಸಿಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಿಸಿಬೇಕು.
೧೯೪೯ರ ನವೆಂಬರ್ ೨೬ರಂದು ಅಂಗೀಕಾರಗೊ0ಡು ೧೯೫೦ರ ಜನವರಿ ೨೬ರಂದು ಜಾರಿಗೆ ಬಂದ ಸಂವಿಧಾನವೇ ಭಾರತದ ಆಡಳಿತದ ಅಡಿಪಾಯವಾಗಿದೆ. ಸಂವಿಧಾನವು ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನಿರ್ದಿಷ್ಟಪಡಿಸಿದ್ದು, ಭಾರತದಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದರು.
ಇ0ದು ಭಾರತ ಶಿಕ್ಷಣ, ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಯೋಗ, ಅಧ್ಯಾತ್ಮ, ಸಂಸ್ಕೃತಿ, ಆರೋಗ್ಯ, ರಕ್ಷಣೆ ಹಾಗೂ ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದು, ಜಗತ್ತೇ ಭಾರತದತ್ತ ಗಮನ ಹರಿಸುತ್ತಿದೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಸಾರ್ವಭೌಮರಾಗಿದ್ದು, ಉತ್ತಮ ನಾಯಕರನ್ನು ಆಯ್ಕೆಮಾಡುವ ಜವಾಬ್ದಾರಿ ನಾಗರಿಕರ ಮೇಲಿದೆ.
೧೮ ವರ್ಷ ತುಂಬಿದ ಪ್ರತಿಯೊಬ್ಬ ಅರ್ಹ ನಾಗರಿಕನು ಮತದಾ ರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊAಡು, ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ನಿರ್ಲಕ್ಷಿಸದೇ ತಪ್ಪದೇ ಮತದಾನ ಮಾಡಬೇಕು. ಜನವರಿ ೨೫ರಂದು ಮತದಾರರ ದಿನಾಚರಣೆ ಮೂಲಕ ಹೊಸ ಮತದಾರರಿಗೆ ಗುರುತಿನ ಚೀಟಿ ನೀಡಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಶಾಸಕ ಕೆ.ಷಡಕ್ಷರಿ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವೇ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯಾಗಿದ್ದು, ಪ್ರತಿಯೊಬ್ಬ ನಾಗರಿಕನು ಸಂವಿಧಾನವನ್ನು ಗೌರವಿಸುವುದರೊಂದಿಗೆ ಅದರ ತತ್ವಗಳು ಹಾಗೂ ಮೂಲ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸಬೇಕಾಗಿದೆ. ಭಾರತವು ಹಲವು ಸವಾಲುಗಳ ನಡುವೆಯೂ ನಿರಂತರವಾಗಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದ್ದು, ಜನಸಂಖ್ಯೆಯ ಅಗತ್ಯಕ್ಕೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಅಧಿಕಾರಿಗಳು, ಕಾರ್ಮಿಕರು ಹಾಗೂ ಜನಪ್ರ ತಿನಿಧಿಗಳು ಸಂವಿಧಾನದ ಆಶಯಗಳನ್ನು ಮನಗಂಡು ಕಾರ್ಯ ನಿರ್ವಹಿಸಬೇಕು.
ತಿಪಟೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಕೆಲವೊಂದು ಅಡಚಣೆಗಳಿದ್ದರೂ ಅವನ್ನು ಬಗೆಹರಿಸಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಗಣರಾಜ್ಯೋತ್ಸವವನ್ನು ಕೇವಲ ಸರ್ಕಾರಿ ಮಟ್ಟಕ್ಕೆ ಸೀಮಿತ ಗೊಳಿಸದೆ ಪ್ರತಿಯೊಂದು ಮನೆಯಲ್ಲೂ ಆಚರಿಸುವ ಮನೋಭಾವ ಬೆಳೆಸಬೇಕು. ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದ್ದು, ಈ ಬಾರಿ ಸಾರ್ವಜನಿಕರ ಹಾಜರಾತಿ ಕಡಿಮೆ ಯಾಗಿರುವುದು ಗಮನಿಸಲಾ ಗಿದೆ ಎಂದರು.
ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಆಯೋಜಿಸ ಲಾಗಿದ್ದ ಸಾಂಸ್ಕೃತಿಕ ಹಾಗೂ ಪಥಸಂಚಲನ (ಪರೇಡ್) ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಹಿರಿಯ ಪ್ರಾ ಥಮಿಕ ಶಾಲಾ ವಿಭಾಗದಲ್ಲಿ ದೀಕ್ಷಾ ಹೆರಿಟೇಜ್ ಶಾಲೆ ಪ್ರಥಮ, ಡ್ಯಾಪಿಡೆಲ್ಸ್ ಶಾಲೆ ದ್ವೀತೀಯ, ಕಲ್ಪತರು ಸೆಂಟ್ರಲ್ ಸ್ಕೂಲ್ ತೃತೀಯ, ಪ್ರೌಢಶಾಲಾ ವಿಭಾಗದಲ್ಲಿ ಠಾಗೂರು ಪ್ರೌಢಶಾಲೆ ಪ್ರಥಮ, ಎಸ್.ವಿ.ಪಿ. ವಿದ್ಯಾಸಂಸ್ಥೆ ದ್ವಿತೀಯ, ಮಾರುತಿ ಟೇಕ್ವಾಂಡೋ ಕರಾಟೆ ಪ್ರದರ್ಶನಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
ಪಥಸ0ಚಲನ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಎಸ್.ವಿ.ಪಿ. ವಿದ್ಯಾಸಂಸ್ಥೆ ಪ್ರಥಮ ಸ್ಥಾನ, ನಳಂದ ಪ್ರೌಢಶಾಲೆ ದ್ವಿತೀಯ ಸ್ಥಾನ ಹಾಗೂ ಎನ್.ಎಸ್.ಎಂ. ಪ್ರೌಢಶಾಲೆ ತೃತೀಯ, ಹಿರಿಯ ಪ್ರಾ ಥಮಿಕ ಪಾಠಶಾಲಾ ವಿಭಾಗದಲ್ಲಿ ಕಲ್ಪತರು ಸೆಂಟ್ರಲ್ ಸ್ಕೂಲ್ ಪ್ರಥಮ, ದೀಕ್ಷಾ ಹೆರಿಟೇಜ್ ಶಾಲೆ ದ್ವೀತೀಯ, ಸ್ಟೆಲ್ಲಾ ಮೇರಿಸ್‌ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
ರಾಷ್ಟ್ರಮಟ್ಟದ ಥ್ರೋಬಾಲ್ ಚಾಂಪಿಯನಿಶಿಪ್‌ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಹೊಸಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ಶಾಂಭವಿ ಹಾಗೂ ಮಾನ್ಯ ರಾಜ್ಯಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಶ್ರೇಯಸ್ ಗೌಡ.ಎಸ್ ಹಾಗೂ ಅದ್ಭುತ ಜ್ಞಾಪನ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸಾಧನೆ ಮಾಡಿದ ಲಾಸ್ಯ.ಬಿ.ಕೆ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸನ್ಮಾನಿಸಲಾಯಿತು.



