ತಿಪಟೂರು: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗ ಣದಲ್ಲಿ ಜನವರಿ ಅಂತ್ಯಕ್ಕೆ ಸಂಬ0ಧಿಸಿದ0ತೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಯೋಜನೆಗಳ ಅಧ್ಯಕ್ಷ ಎಮ್.ಎನ್.ಕಾಂತರಾಜು ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ಸಭೆಯಲ್ಲಿ ಶಿಶು ಯೋಜನಾಧಿಕಾರಿ ಮಾತನಾಡಿ, ೨೦೨೩ರ ಆಗಸ್ಟ್ನಲ್ಲಿ ಆರಂಭವಾದ ಗೃಹಲಕ್ಷ್ಮಿ ಯೋಜನೆ ಮೂಲಕ ಆರಂಭದಲ್ಲಿ ೪೯,೪೦೮ ಫಲಾನುಭವಿಗಳಿದ್ದು, ಪ್ರಸ್ತುತ ೫೩,೬೨೫ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರಾಸರಿ ರೂ ೧೦.೭೩ ಲಕ್ಷ ಮೊತ್ತವನ್ನು ವಿತರಿಸಲಾಗುತ್ತಿದೆ. ಇದುವರೆಗೆ ತಾಲೂಕಿಗೆ ಒಟ್ಟು ರೂ.೨೫೩.೮೪ ಕೋಟಿ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಇದೀಗಾಗಲೇ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ೭೮೮ ಸದಸ್ಯರು ಮರಣ ಹೊಂದಿರುವ ಮಾಹಿತಿ ಸಂಗ್ರಹಿಸ ಲಾಗು ತ್ತಿದ್ದು, ಪಂಚ ಗ್ಯಾರಂಟಿ ಯೋಜನೆಯಡಿ ಹೋಬಳಿ ಮಟ್ಟದಲ್ಲಿ ಶಿಬಿರಗಳನ್ನು ಆಯೋಜಿಸಿ, ಬಂದ ಅರ್ಜಿಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ, ೫೮,೨೬೭ ಮಹಿಳಾ ಪ್ರಧಾನ ಮತ್ತು ೨,೫೨೮ ಪುರುಷ ಪ್ರಧಾನ ಪಡಿತರ ಚೀಟಿಗಳು ಸೇರಿ ಒಟ್ಟು ೬೧,೦೧೬ ಪಡಿತರ ಚೀಟಿಗಳು ಇದೆ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮಾತನಾಡಿ, ತಾಲೂಕಿನ ೩೭೬ ಅಂಗನವಾ ಡಿಗಳಲ್ಲಿ ಬಾಣಂತಿ ಹಾಗೂ ಗರ್ಭಿಣಿಯರಿಗೆ ನೀಡುವ ಪಡಿ ತರ ಮಾಹಿತಿಯನ್ನು ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ನಮೂದಿಸಬೇಕು. ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ವಿಶೇಷ ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಬೇಕು. ಜೊತೆಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಸೂಚಿಸಿದರು.
ಅಧ್ಯಕ್ಷ ಎಂ.ಎನ್. ಕಾಂತರಾಜು ಮಾತನಾಡಿ, ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ರೀತಿಯ ತಪ್ಪು ಅಂಕಿ-ಅ0ಶಗಳನ್ನು ನೀಡದೆ ನಿಖರ ಮಾಹಿತಿಯನ್ನು ನೀಡುವುದು ಅಧಿಕಾರಿಗಳ ಕರ್ತವ್ಯ ಎಂದು ಎಚ್ಚರಿಸಿದರು.
ಯುವನಿಧಿ ಯೋಜನೆ ಕುರಿತು ಮಾತನಾಡಿ, ಇವನಿಗೆ ಯೋಜನೆಯಡಿಯಲ್ಲಿ ೧,೦೮೦ ಜನ ನೋಂದಣಿಯಾಗಿದ್ದು, ೮೩೫ ನಿರುದ್ಯೋಗಿ ಯುವಕರಿಗೆ ಯೋಜನೆಯ ಸೌಲಭ್ಯ ನೀಡಲಾಗುತ್ತಿದೆ. ಪ್ರತಿ ತಿಂಗಳ ೫ರಿಂದ ೨೫ನೇ ತಾರೀಕಿನವರೆಗೆ ಫಲಾನುಭವಿಗಳು ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕು ಎಂದು ತಿಳಿಸಿದರು. ಜೊತೆಗೆ ಸರ್ಕಾರದ ವತಿಯಿಂದ ಉದ್ಯೋಗ ತರಬೇತಿ ಶಿಬಿರಗಳನ್ನು ಆಯೋಜಿ ಸಲಾಗುತ್ತಿದ್ದು, ಯುವನಿಧಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿ ಗಳು ತರಬೇತಿಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಆಹಾರ ಇಲಾಖೆ ಅಧಿಕಾರಿ ಮಾತನಾಡಿ ತಾಲೂಕಿನಲ್ಲಿ ೭೭ ನ್ಯಾಯಬೆಲೆ ಅಂಗಡಿಗಳು ಹಾಗೂ ಒಂದು ಆಹಾರ ಧಾನ್ಯ ಸಗಟು ಮಳಿಗೆ ವ್ಯವಸ್ಥೆಯಿದ್ದು, ೩,೪೧೬ ಅಂತ್ಯೋದಯ, ೫೧,೬೧೩ ಬಿಪಿಎಲ್ ಹಾಗೂ ೬,೨೩೪ ಎಪಿಎಲ್ ಪಡಿತರ ಚೀಟಿಗಳು ಜೊತೆ ಆದಾಯ ತೆರಿಗೆ ಸಂಬ0ಧಿತ ಕಾರಣಗಳಿಂದ ಈಗಾಗಲೇ ೧,೩೦೦ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸದಸ್ಯರು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ನರೇಗಾ ಯೋಜನೆಯ ಅಧಿಕಾರಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)