ತುಮಕೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವ ಹಿಸುತ್ತಿರುವ ಪೌರ ಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ನ್ನು ಕಡ್ಡಾಯವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರ ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ವೇತನ ಸೌಲಭ್ಯ ನೀಡಬೇಕೆಂದು ಹೇಳಿದರು.
ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಪ್ರತಿ ೩ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಲು ಕ್ರಮ ವಹಿಸಬೇಕು. ಮುಂದಿನ ಸಭೆಯಲ್ಲಿ ಆರೋಗ್ಯ ತಪಾಸಣೆ ವರದಿಯನ್ನು ನೀಡಬೇಕೆಂದು ನಿರ್ದೇಶನ ನೀಡಿದರು.
ಹೊರ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾ ರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಿರುವ ಇಎಸ್‌ಐ, ಪಿಎಫ್ ಸೌಲಭ್ಯವನ್ನು ನೀಡಬೇಕು ಹಾಗೂ ಎಲ್ಲಾ ಪೌರಕಾ ರ್ಮಿಕರು ಕಡ್ಡಾಯವಾಗಿ ಜೀವ ವಿಮೆ ಮಾಡಿಸುವಂತೆ ಕ್ರಮವ ಹಿಸಬೇಕೆಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ. ಸಂಜೀವಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಯೋಗಾನಂದ, ತುಮಕೂರು ಮಹಾನಗರಪಾಲಿಕೆಯ ಆಯುಕ್ತೆ ಶುಭ ಹಾಗೂ ಉಪ ವಿಭಾಗಾಧಿಕಾರಿ ನಾಹಿದಾ ಜûಮ್ ಜûಮ್, ಉಪಸ್ಥಿತರಿದ್ದರು.

(Visited 1 times, 1 visits today)