ತುಮಕೂರು: ಇಂದಿನಿ0ದ ರಾಷ್ಟ್ರಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನದಡಿ ೧೦೦ ದಿನಗಳ ಕಾಲ ಸಕ್ರಿಯವಾಗಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಮಂಗಳವಾರ ಬೆಳಿಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ೬೮೨ ಹೆಚ್ಚಿನ ಕ್ಷಯರೋಗದ ಅಪಾಯದ ಅಂಚಿನಲ್ಲಿರುವ ಹಳ್ಳಿಗಳನ್ನು ಗುರುತಿಸಿದ್ದು, ೯,೭೩,೪೭೧ ಜನಸಂ ಖ್ಯೆಯನ್ನು ಹೊಂದಿದೆ. ಆ ಹಳ್ಳಿಗಳಲ್ಲಿ ಸಂಪೂರ್ಣವಾಗಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಮತ್ತು ಜಿಲ್ಲೆಯಾದ್ಯಂತ ಡಯಾಬಿಟಿಸ್, ರಕ್ತದೊ ತ್ತಡ, ಹಳೆಯ ಕ್ಷಯರೋಗಿಗಳು, ದೀರ್ಘಾವದಿ ಖಾಯಿಲೆಯಿಂದ ಬಳಲುತ್ತಿರುವವರಿಗೂ ತಪಾಸಣೆಗೆ ಒಳಪಡಿಸಲಾಗುವುದು ಹಾಗೂ ಜಿಲ್ಲೆ ಯಾದ್ಯಂತ ಕ್ಷಯರೋಗದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿಶ್ವ ಕ್ಷಯರೋಗ ದಿನದ ಅಂಗವಾಗಿ ಇಂದು ತುಮಕೂರಿನ ಸರ್ಕಾರಿ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆಗಳಲ್ಲಿ ಕರಪತ್ರ ಹಂಚುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಎಲ್ಲಾ ತಾಲ್ಲೂಕು, ಪ್ರಾ ಥಮಿಕ ಆರೋಗ್ಯ ಕೇಂದ್ರ, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ೧೦೦ ದಿನಗಳ ಕ್ಷಯಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಬಡ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರದ ಪೊಟ್ಟಣ ವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

(Visited 1 times, 1 visits today)