
algolist: 0;
multi-frame: 1;
brp_mask:0;
brp_del_th:null;
brp_del_sen:null;
delta:null;
module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 50;
ಪಾವಗಡ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪಾವಗಡ ಘಟಕದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಶೋಕಸಭೆಯಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡು ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿದರು.
ಸಂತಾಪ ಸೂಚಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಹೆಚ್.ವಿ. ರವಿಕುಮಾರ್ ರವರು ನಮ್ಮ ತಾಲ್ಲೂಕಿನಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಆಘಾತಕಾರಿ ಮತ್ತು ಕಳವಳದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆಗಳು ಮರುಕಳಿಸಬಾರದು,ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನದ ನೌಕರರನ್ನು ವಿಶ್ವಾಸಕ್ಕೆ ಪಡೆದು ಸೌಹಾರ್ಧಯುತವಾಗಿ ಕೆಲಸ ನಿರ್ವಹಿಸಲು ಸಹಕರಿಸಬೇಕು. ಯಾವುದೇ ನೌಕರರಿಗೆ ಅಥವಾ ಅಧಿಕಾರಿಗಳಿಗೆ ಕೆಲಸದ ಸ್ಥಳದಲ್ಲಿ ಸಮಸ್ಯೆಗಳಾದಲ್ಲಿ ಕೂಡಲೇ ಸಂಘದ ಗಮನಕ್ಕೆ ತನ್ನಿ, ಸಂಘವು ಸದಾ ನಿಮ್ಮ ಹಿತರಕ್ಷಣೆಗೆ ಬದ್ಧವಾಗಿರುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರವಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಧುಸೂದನ, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಮಾರುತೇಶ್, ಖಜಾಂಚಿ ಶೇಖರ ಬಾಬು, ಹಿರಿಯ ಉಪಾಧ್ಯಕ್ಷರಾದ ನಾಗರಾಜು, ರಾಜಣ್ಣ, ಉಪಾಧ್ಯಕ್ಷರಾದ ಗಂಗಾಧರ, ರಾಜು ಸಂಘಟನಾ , ಕಾರ್ಯದರ್ಶಿ ರಾಜಗೋಪಾಲ್, ಸಹಕಾರ್ಯದರ್ಶಿ ರಮೇಶ್, ಕ್ರೀಡಾ ಕಾರ್ಯ ದರ್ಶಿ ವಿನೋದ್ ಕುಮಾರ್ ನಾಮ ನಿರ್ದೇಶನ ಸದಸ್ಯರಾದ ಹನುಮಂತರಾಯ ಸೇರಿದಂತೆ ಇತರರು ಉಪಸ್ಥಿತರಿದ್ದರು.



