BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
  • ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

By News Desk BenkiyabaleUpdated:March 25, 2026 4:58 pm

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು ಹಾಗೂ ಡಿಡಿ ಚಂದನದ ಥಟ್ ಅಂತ ಹೇಳಿ ಕಾರ್ಯಕ್ರಮದ ರೂವಾರಿಗಳಾದ ಡಾ. ನಾ. ಸೋಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಡಿವಿಜಿ ಕಗ್ಗಗಳ ವಾಚನ, ವ್ಯಾಖ್ಯಾನಕಾರರು ಹಾಗೂ ವೈದ್ಯರಾದ ಡಾ.ಕೆ.ರಾಜಶೇಖರ್ ತಿಳಿಸಿದರು.
ತುಮಕೂರು ವಿವಿಯಲ್ಲಿ ಹಿರಿಯ ನಾಗರೀಕರ ಪರಿಸರ ವೇದಿಕೆ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಕನ್ನಡ ವಿಭಾಗ ಇವರ ಸಹಯೋಗದಲ್ಲಿ ಮಾ.24 ಮಂಗಳವಾರ ಆಯೋಜಿಸಲಾಗಿದ್ದ ಡಿ.ವಿ.ಜಿ ಅವರ ಕಗ್ಗಗಳ ವಾಚನ, ವ್ಯಾಖ್ಯಾನ ಮುಕ್ತಾಯ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೇವಲ ನಾಲ್ಕು ಸಾಲುಗಳಲ್ಲಿ ಇಡೀ ಬದುಕಿನ ಸಾರವನ್ನು ಹಿಡಿದಿಡುವ ಕಗ್ಗ, ಕನ್ನಡಿಗರ ಪಾಲಿನ ‘ಆಧುನಿಕ ಭಗವದ್ಗೀತೆ’. ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ಎಂಬ ಸಾಲುಗಳು ಮನುಷ್ಯನಿಗೆ ಇರಬೇಕಾದ ವಿನಯ ಮತ್ತು ಸಮಾಜಕ್ಕೆ ನೀಡಬೇಕಾದ ಕೊಡುಗೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸುತ್ತವೆ ಎಂದರು.
ಇAದಿನ ಸ್ಪರ್ಧಾತ್ಮಕ ಯುಗದಲ್ಲಿ ಸೋಲು-ಗೆಲುವನ್ನು ಸಮಾನ ವಾಗಿ ಸ್ವೀಕರಿಸುವ ಸ್ಥಿತಪ್ರಜ್ಞತೆಯ ಅಗತ್ಯವಿದೆ. ವಿಧಿಯಾಟ ಮತ್ತು ಮನುಷ್ಯನ ಪುರುಷಾರ್ಥದ ನಡುವಿನ ಸಮತೋಲನವನ್ನು ಕಗ್ಗ ನಮಗೆ ಕಲಿಸಿಕೊಡುತ್ತದೆ. ವಿಜ್ಞಾನ ಮತ್ತು ಅಧ್ಯಾತ್ಮದ ಅಪೂರ್ವ ಸಂಗಮವೇ ಈ ಕೃತಿಯ ಯಶಸ್ಸಿನ ಗುಟ್ಟು ಎಂದು ವಿಶ್ಲೇಷಿಸಿದರು.
ಕನ್ನಡ ಸಾಹಿತ್ಯ ಲೋಕದ ಅಮೂಲ್ಯ ರತ್ನವಾಗಿರುವ ಈ ಕೃತಿಯನ್ನು ಕೇವಲ ಓದುವುದಷ್ಟೇ ಅಲ್ಲದೆ, ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. ಯುವ ಪೀಳಿಗೆಯು ಇಂತಹ ಮೌಲ್ಯಯುತ ಸಾಹಿತ್ಯದತ್ತ ಒಲವು ತೋರಿದಾಗ ಮಾತ್ರ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಡಿವಿಜಿ ಕಗ್ಗಗಳ ವಾಚನ, ವ್ಯಾಖ್ಯಾನಕಾರರು ಹಾಗೂ ವೈದ್ಯರಾದ ಡಾ.ಕೆ.ರಾಜಶೇಖರ್ ಮಾತನಾಡಿ ಇಂದಿನ ವೇಗದ ಬದುಕಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವ ಪೀಳಿಗೆಗೆ ಡಿ.ವಿ. ಗುಂಡಪ್ಪನವರ ಮಂಕುತಿಮ್ಮನ ಕಗ್ಗದ ವಿಚಾರಗಳ ಅರಿವು ಅತ್ಯಂತ ಅಗತ್ಯವಾಗಿದೆ. ವೃತ್ತಿಯಲ್ಲಿ ವೈದ್ಯರಾಗಿದ್ದರೂ ಸಾಹಿತ್ಯದ ಮೇಲೆ ಅಪಾರ ಅಭಿಮಾನ ಹೊಂದಿರುವ ಡಾ. ರಾಜಶೇಖರ್ ಅವರು, ಕಳೆದ ೯ ರಿಂದ 10 ವರ್ಷಗಳ ಕಾಲ ಹಿರಿಯ ನಾಗರಿಕರಿಗೆ ಕಗ್ಗವನ್ನು ಪರಿಚಯ ಮಾಡಿಕೊಟ್ಟ ಸಾರ್ಥಕ ಕ್ಷಣಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು. ಬದುಕು ಜಟಕಬಂಡಿ, ವಿಧಿ ಅದರ ಸಾಹೇಬ ಎಂಬ ಅಮೋಘ ಸಾಲುಗಳ ಮೂಲಕ ಜನಪ್ರಿಯರಾದ ಡಿವಿಜಿಯವರ ಸಾಹಿತ್ಯವು ಸಕಾಲಿಕವಾಗಿದೆ ಎಂದರು.
ಮ0ಕುತಿಮ್ಮನ ಕಗ್ಗ ಕೇವಲ ಪದ್ಯಗಳ ಸಂಕಲನವಲ್ಲ, ಅದು ಕನ್ನಡಿಗರ ಪಾಲಿನ ಆಧುನಿಕ ಭಗವದ್ಗೀತೆ. ಇದರಲ್ಲಿ ಆತ್ಮ, ಕರ್ಮ ಮತ್ತು ವಿಧಿಯ ಕುರಿತಾದ ಗಹನವಾದ ವಿಚಾರಗಳನ್ನು ಅತ್ಯಂತ ಸರಳವಾಗಿ ತಿಳಿಸಲಾಗಿದೆ. ಬದುಕಿನಲ್ಲಿ ಅಹಂಕಾರ ಮತ್ತು ಮಮಕಾರವನ್ನು ಬಿಟ್ಟು ಹೇಗೆ ಬಾಳಬೇಕು ಎಂಬುದೇ ಕಗ್ಗದ ನೈಜ ಅರ್ಥ ಎಂದು ಅವರು ವಿವರಿಸಿದರು.
ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜು ಪ್ರಾಂಶುಪಾಲರಾದ ಡಾ.ಜಿ.ದಾಕ್ಷಾಯಣಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಹೆಚ್. ಆರ್. ರೇಣುಕ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಸಿಬಂತಿಪದ್ಮನಾಭ ಕೆ.ವಿ., ನಿವೃತ್ತ ಪ್ರಾಂಶುಪಾಲರಾದ ಪ್ರೊ.ಬಿ.ಕರಿಯಣ್ಣ, ಪ್ರಕಾಶ್ ಕುಮಾರ್ ಮತ್ತು ವಿವೇಕಾನಂದ ಶೆಟ್ಟಿ ಸೇರಿದಂತೆ ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
Next Article ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಜಗತ್ತಿಗೆ ಮಾದರಿ
News Desk Benkiyabale

Related Posts

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm news
ತಾಜಾ ಸುದ್ಧಿಗಳು
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm
news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm
news

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
Our Youtube Channel
Our Picks

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

By News Desk BenkiyabaleSeptember 30, 2026 6:04 pm

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು…

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.