ತುಮಕೂರು: ಬೆಳಗಾವಿಯ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯದ ಬೋಧನಾ ಮತ್ತು ಪಠ್ಯಕ್ರಮ ಜಗತ್ತಿಗೆ ಮಾದರಿಯಾಗಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಗೌರವಾನ್ವಿತ ಕುಲಪತಿಯಾದ ಪ್ರೊ.ವಿದ್ಯಾಶಂಕರ್.ಎಸ್. ರವರು ಅಭಿಪ್ರಾಯಪಟ್ಟಿದ್ದಾರೆ.
ನಗರದ ಶಿರಾರಸ್ತೆಯ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಮಾರ್ಚ್ ೨೬ ರಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ಶ್ರೀದೇವಿ ಕಾಲೇಜಿನ ಆವರಣದಲ್ಲಿ ಶ್ರೀಉತ್ಸವ ವಾರ್ಷಿಕೋತ್ಸವ-೨೦೨೬ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಪ್ರೊ.ವಿದ್ಯಾಶಂಕರ್.ಎಸ್.ರವರು ಮಾತನಾಡುತ್ತಾ ಕೃತಕ ಬುದ್ಧಿಮತ್ತೆ ಬೆಳೆದಷ್ಟು ಉದ್ಯೋಗಾವಕಾಶಗಳು ಕಡಿಮೆಯಾಗಲಿದೆ. ಎಂಬ ಆತಂಕದಲ್ಲಿ ಸತ್ಯಾಂಶವಿಲ್ಲ ಆದರೆ ಕೃತಕ ಬುದ್ಧಿಮತ್ತೆಯನ್ನು ಮೀರಿ ಬೆಳೆಯುವಂತಹ ಅವಕಾಶಗಳನ್ನು ನಾವು ಸೃಷ್ಟಿಸಿಕೊಳ್ಳದೆ ಹೋದಲ್ಲಿ ಮನುಷ್ಯ ಬೇಡವಾದ ವಸ್ತುವಾಗುತ್ತಾನೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹೀಗಾಗಿ ೨೦೩೦ರ ವೇಳೆಗೆ ಕೃತಕ ಬುದ್ಧಿಮತ್ತೆಯನ್ನು ನಿಯಂತ್ರಿಸುಲು ಇಂದಿನಿ0ದಲೇ ನಮ್ಮ ಪ್ರಯತ್ನಗಳನ್ನು ಮತ್ತು ಹೊಸ ಹೊಸ ಅಲೋಚನೆ, ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚು ಗಮನಕೊಡಬೇಕು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಶೈಕ್ಷಣಿಕ ಕ್ರಮಕ್ರಮ ಅಂತರಾಷ್ಟ್ರೀಯ ಮಟ್ಟದಲ್ಲಿ ಶ್ರೇಷ್ಠವಾಗಿದೆ. ಹೀಗಾಗಿ ನಮಗೆ ಮಾನ್ಯತೆ ಕೊಡಿ ಎಂದು. ಸೌದಿಅರೇಬಿಯಾ,  ದಕ್ಷಿಣ ಅಮೇರಿಕಾ ಸೇರಿದಂತೆ ಜಗತ್ತಿನ ಹಲವು ರಾಷ್ಟçಗಳು ಮನವಿ ಮಾಡುತ್ತಿವೆ. ಬರುವ ೨೦೩೦ರ ವೇಳೆಗೆ ಇಂಜಿನಿಯರಿAಗ್ ಕ್ಷೇತ್ರದಲ್ಲಿ ಈಗ ಮಾಡುತ್ತಿರುವ ಕೆಲಸಗಳು ಇರುವುದಿಲ್ಲ ಬದಲಾಗಿ ಹೊಸ ಹೊಸ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ. ಜಗತ್ತಿನಲ್ಲಿ ಜ್ಞಾನಕ್ಕಿಂತ ದೊಡ್ಡದು ಯಾವುದೂ ಇಲ್ಲ ವಿದ್ಯಾರ್ಥಿಗಳು ಗುರಿಯೊಂದಿಗೆ ಜ್ಞಾನ ಸಂಪಾದನೆ-ಸಾಧನೆಗೆ ಗಮನ ಕೊಡಬೇಕು. ಸಿನಿಮಾ ಹೀರೋಗಳು ನಿಮ್ಮ ಅದರ್ಶವಲ್ಲ ಬದಲಿಗೆ ನೀವೇ ಹೀರೋಗಳಾಗಿ ಸಾಧನೆ ಮಾಡಿ ಎಂದರು. ಶ್ರೀದೇವಿ ಇಂಜಿನಿಯರಿ0ಗ್ ಕಾಲೇಜುನ್ನು ರಾಜ್ಯದ ಮಾದರಿ ಕಾಲೇಜನ್ನಾಗಿ ಪರಿವರ್ತಿಸುವಲ್ಲಿ, ರೂಪಿಸುವಲ್ಲಿ ಡಾ.ಎಂ.ಆರ್.ಹುಲಿನಾಯ್ಕರ್ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ತುಮಕೂರು ಸುತ್ತಮುತ್ತಲಿನ ಭಾಗದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ ಎಂದರು.
ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಗ್ರೀನ್‌ವೇ ಹೆಲ್ತ್ ಇಂಡಿಯಾ ಪ್ರೆöÊವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಎನ್.ಎಲ್.ಎಸ್.ಮೂರ್ತಿರವರು ಮಾತನಾಡುತ್ತಾ ಹೆಚ್ಚಿನ ಕೌಶಲ್ಯ ಬೆಳೆಸಿಕೊಂಡರೆ ಕೃತಕ ಬುದ್ಧಿಮತ್ತೆಯಿಂದ ಪಾರಾಗಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಜಾಗತಿಕ ತಂತ್ರಜ್ಞಾನ ಮತ್ತು ಸ್ವತಂತ್ರ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಸಿ.ಎನ್.ಮಹಾಂತೇಶ್‌ರವರು ಮಾತನಾಡುತ್ತಾ ಯುವ ಜನಾಂಗ ಹೊಸ ಚಿಂತನೆಗೆ ಹೆಚ್ಚಿನ ಒತ್ತು ಕೊಡಬೇಕು. ಪ್ರತಿ ಮೂರು ಮತ್ತು ಆರು ತಿಂಗಳಿಗೊಮ್ಮೆ ಹೊಸ ಹೊಸ ಆವಿಷ್ಕಾರಗಳ ಬಗ್ಗೆ ಚಿಂತನೆ ಮಾಡುವ ಮತ್ತು ಹೊಸದನ್ನು ಕಲಿಯುವ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‌ರವರು ಮಾತನಾಡುತ್ತಾ ತಾಂತ್ರಿಕ ಶಿಕ್ಷಣದಲ್ಲಿ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಅತ್ಯುತ್ತಮ ಕೆಲಸ ಮಾಡಿದೆ. ಮಾಡುತ್ತಲೂ ಇದೆ. ಅದರ ಪಠ್ಯಕ್ರಮಕ್ಕೆ ಅಂತರಾಷ್ಟ್ರೀಯ ಮಾನ್ಯತೆ, ಬೇಡಿಕೆ ಹೆಚ್ಚಾಗುತ್ತಿರುವುದು ತಾಂತ್ರಿಕ ಶಿಕ್ಷಣದಲ್ಲಿ ದೇಶದ ಸಾಧನೆ ಬೇರೆಯವರಿಗೆ ಮಾದರಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಯಾದ ಶ್ರೀಮತಿ.ಅಂಬಿಕಾ ಎಂ ಹುಲಿನಾಯ್ಕರ್‌ರವರು ಮಾತನಾಡುತ್ತಾ ಕಾಲೇಜಿನಲ್ಲಿ ಕಲಿಯುವ ವಿದ್ಯಾಭ್ಯಾಸ ಒಂದು ಭಾಗವಾದರೆ ಅನಿಶ್ಚಿತ ಪರಿಸ್ಥಿತಿ ಎದುರಿಸುವಂತಹ ಶಕ್ತಿಯನ್ನು ರೂಡಿಸಿಕೊಳ್ಳಬೇಕು. ಹೊಸದನ್ನು ಕಲಿಯುವ ಪ್ರಯತ್ನ ಮಾಡಿದರೆ ಭವಿಷ್ಯಕ್ಕೆ ಹೆದರುವ ಪರಿಸ್ಥಿತಿ ಬರುವುದಿಲ್ಲ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಎಂ.ಎಸ್.ಪಾಟೀಲ್‌ರವರು ಮಾತನಾಡುತ್ತಾ ತಂತ್ರಜ್ಞಾನ ವಿಕಾಸವಾದಂತೆ ಉದ್ಯೋಗ ಕಡಿಮೆಯಾಗುತ್ತದೆ. ಎಂಬ ಆತಂಕ ಸಹಜ. ಆದರೆ ಇದರಲ್ಲಿ ಸತ್ಯಾಂಶವಿಲ್ಲ ಎಂದು ಹಲವು ಉದಾಹರಣೆಗಳನ್ನು ಬಿಡಿಸಿ ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀದೇವಿ ಇಂಜಿನಿಯರಿ0ಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನರೇಂದ್ರ ವಿಶ್ವನಾಥ್‌ರವರು ಸ್ವಾಗತಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಗೌರವಾನ್ವಿತ ಕುಲಪತಿಯಾದ ಪ್ರೊ.ವಿದ್ಯಾಶಂಕರ್.ಎಸ್. ಗ್ರೀನ್‌ವೇ ಹೆಲ್ತ್ ಇಂಡಿಯಾ ಪ್ರೆöÊವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಎನ್.ಎಲ್.ಎಸ್.ಮೂರ್ತಿ, ಜಾಗತಿಕ ತಂತ್ರಜ್ಞಾನ ಮತ್ತು ಸ್ವತಂತ್ರ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಸಿ.ಎನ್.ಮಹಾಂತೇಶ್‌ರವರಿಗೆ ಸನ್ಮಾನಿಸಿ ಗೌರವಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಟ್ರಸ್ಟಿಯಾದ ಡಾ.ರಮಣ್ ಹುಲಿನಾಯ್ಕರ್, ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಯಾದ ಹಾಗೂ ಶ್ರೀದೇವಿ ಆಸ್ಪತ್ರೆಯ ನೇತ್ರತಜ್ಞರಾದ ಡಾ.ಲಾವಣ್ಯ, ಶ್ರೀದೇವಿ ಇಂಜಿನಿಯರಿ0ಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನರೇಂದ್ರ ವಿಶ್ವನಾಥ್, ಉಪಪ್ರಾಂಶುಪಾಲರಾದ ಡಾ.ಎನ್.ಚಂದ್ರಶೇಖರ್, ಕಾರ್ಯಕ್ರಮದ ಶ್ರೀಉತ್ಸವದ ಮುಖ್ಯಸಂಯೋಜಕರಾದ ಡಾ.ಕಿರಣ್.ಜಿ.ಎಂ.ರವರು ಭಾಗವಹಿಸಲಿದ್ದಾರೆ.

 

(Visited 1 times, 1 visits today)