ಪಾವಗಡ: ತಾಲೂಕಿನ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿ ಸುವ ನಿಟ್ಟಿನಲ್ಲಿ, ತಾಲೂಕು ಕಛೇರಿ ಹಾಗೂ ಸಿ.ಕೆ. ಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳ ಲಾಗಿದ್ದ ‘ಜನಸಂಪರ್ಕ ಸಭೆ’ ಯಶಸ್ವಿಯಾಗಿ ಜರುಗಿತು.
ಸಾರ್ವಜನಿಕರು ತಮ್ಮ ದೈನಂದಿನ ಸಮಸ್ಯೆಗ ಳನ್ನು ನೇರವಾಗಿ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲು ಈ ಸಭೆ ವೇದಿಕೆಯಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಿಸುವಲ್ಲಿ ವಿಳಂಬವಾಗಬಾರದು. ಸಾರ್ವಜನಿಕರು ಅಲೆದಾಡು ವುದನ್ನು ತಪ್ಪಿಸಲು ಅವರಿದ್ದಲ್ಲಿಗೆ ಆಡಳಿತವನ್ನು ತರುವುದೇ ಈ ಕಾರ್ಯಕ್ರಮದ ಉದ್ದೇಶ, ಸ್ವೀಕೃತ ವಾದ ಅರ್ಜಿಗಳಲ್ಲಿ ಸರಳವಾದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಅವರು, ಜಟಿಲವಾದ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಾಲೂಕು ಕೇಂದ್ರದ ಜೊತೆಗೆ ಸಿ.ಕೆ. ಪುರ ಗ್ರಾಮದಲ್ಲಿಯೂ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು.
ಗ್ರಾಮೀಣ ಭಾಗದ ರೈತರ ಪೌತಿ ಖಾತೆ ಬದಲಾವಣೆ ಹಾಗೂ ಪೋಡಿ ಮುಂತಾದ ಸಮಸ್ಯೆಗಳಿಗೆ ಆದ್ಯತೆ ನೀಡಿ ಪರಿಹರಿಸಲು ಕಂದಾಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು.
ಸಭೆಯಲ್ಲಿ ಮಾಜಿ ಶಾಸಕ ತಿಮ್ಮರಾಯ ಪ್ಪನವರ ಸರಳತೆ ಎಲ್ಲರ ಗಮನ ಸೆಳೆಯಿತು. ಸಾಮಾನ್ಯ ಜನರಂತೆ ಸರತಿ ಸಾಲಿನಲ್ಲಿ ನಿಂತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ ಅವರು, ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ರವರು ಆಡಳಿತ ಯಂತ್ರವು ಜನಸಾ ಮಾನ್ಯರಿಗೆ ಹತ್ತಿರವಾಗಬೇಕು. ಸಣ್ಣಪುಟ್ಟ ಕೆಲಸಗಳಿಗಾಗಿ ಜನರು ಜಿಲ್ಲಾ ಕೇಂದ್ರಗಳಿಗೆ ಅಲೆಯಬಾರದು ಎನ್ನುವ ಕಾರಣಕ್ಕೆ ಈ ಜನಸಂಪರ್ಕ ಸಭೆ ನಡೆಸಲಾಗುತ್ತಿದೆ. ಸ್ವೀಕರಿಸಲಾದ ೩೯೫ ಅರ್ಜಿಗಳಲ್ಲಿ ಬಹುತೇಕ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾ ಗುವುದು,” ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾ ಧಿಕಾರಿಗಳಾದ ಗೋಟೂರು ಶಿವಪ್ಪ, ತಹಶೀ ಲ್ದಾರ್ ರವಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಧುಸೂದನ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ರವಿ, ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರತಿನಿಧಿಗಳು ಉಪಸ್ಥಿತರಿದ್ದರು.

(Visited 1 times, 1 visits today)