ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ ವೈಜ್ಞಾನಿಕ ಕಾರ್ಯಾಗಾರವು ದಿ. ಮಾ.೨೯ ರಂದು ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಕುವೆಂಪು ಕಲಾ ಕ್ಷೇತ್ರದಲ್ಲಿ ವಿಜೃಂಭಣೆಯಿ0ದ ನಡೆಯಿತು.
ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬಂದ ವೈದ್ಯಕೀಯ ತಂತ್ರಜ್ಞರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ವಿಜ್ಞಾನಾಧಾರಿತ ಚರ್ಚೆಗಳಲ್ಲಿ ತೊಡಗಿಸಿಕೊಂಡರು. ವೈದ್ಯ ಕೀಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನಗಳ ಬಳಕೆ, ರೋಗನಿರ್ಣಯ ವಿಧಾನಗಳ ಅಭಿವೃದ್ಧಿ, ಪ್ರಯೋಗಾಲಯದ ಗುಣಮಟ್ಟ ನಿರ್ವಹಣೆ ಹಾಗೂ ಭವಿಷ್ಯದ ಸವಾಲುಗಳ ಕುರಿತು ವಿಶೇಷ ಉಪನ್ಯಾಸಗಳು ನಡೆಯಿತು.
ಈ ಮಹತ್ವದ ಕಾರ್ಯಕ್ರಮದಲ್ಲಿ ವಿದ್ಯಾವಾಹಿನಿ ಪ್ಯಾರಾಮೆಡಿಕಲ್ ಕಾಲೇಜು ಹಾಗೂ ವಿದ್ಯಾನಿಧಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ನ ಒಟ್ಟು ೧೭ ವಿದ್ಯಾರ್ಥಿಗಳು ಭಾಗವಹಿಸಿದ್ದು, ತಮ್ಮ ಅಧ್ಯಯನ ಕ್ಷೇತ್ರಕ್ಕೆ ಸಂಬ0ಧಿಸಿದ ವಿಷಯಗಳಲ್ಲಿ ತಜ್ಞರಿಂದ ಮಾರ್ಗದರ್ಶನ ಪಡೆದುಕೊಂಡರು. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪ್ರಾಯೋಗಿಕ ಪ್ರದರ್ಶನಗಳು, ಪೋಸ್ಟರ್ ಪ್ರೆಸೆಂಟೇಷನ್‌ಗಳು ಮತ್ತು ಸಂವಾದಾತ್ಮಕ ಅಧಿವೇಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಗಮನ ಸೆಳೆದರು.
ಸಂಸ್ಥೆಯ ಕಾರ್ಯದರ್ಶಿ ಶ್ರೀ ಎನ್. ಬಿ. ಪ್ರದೀಪ್ ಕುಮಾರ್ ಈ ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಾ, ಇಂತಹ ಸಮ್ಮೇಳನಗಳು ವೃತ್ತಿಪರ ಕೌಶಲ್ಯ ವನ್ನು ವೃದ್ಧಿಸುವುದು ಬಹಳ ಮುಖ್ಯ. ವಿದ್ಯಾರ್ಥಿಗಳಿಗೆ ಇಂತಹ ಅವಕಾಶಗಳು ಅವರಲ್ಲಿ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಹಾಗೂ ನವೀನ ಜ್ಞಾನ ವೃದ್ಧಿಸಿಕೊಳ್ಳಲು ಸಹಕಾರಿ ಎಂದು ಹೇಳಿದರು. ಪ್ರಾಂಶುಪಾಲರಾದ ಪ್ರೊ. ಹುಮೆರಾ ಪರ್ವೀನ್ ಅವರು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಭವಿಷ್ಯದಲ್ಲಿ ಇನ್ನಷ್ಟು ಇಂತಹ ರಾಷ್ಟ್ರೀಯ ಮಟ್ಟದ ಕಾರ್ಯ ಕ್ರಮಗಳಲ್ಲಿ ಭಾಗವಹಿಸಲು ಸಲಹೆ ನೀಡಿದರು.
ಈ ಸಮ್ಮೇಳನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲರಿಗೂ ಅನುಭವ ವಿನಿಮಯಕ್ಕೆ ಅವಕಾಶ ಲಭ್ಯವಾಯಿತು.
ಈ ರೀತಿಯ ವೈಜ್ಞಾನಿಕ ಸಮ್ಮೇಳನಗಳು ವಿದ್ಯಾರ್ಥಿ ಗಳಲ್ಲಿ ಹೊಸ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ತಾಂತ್ರಿಕ ಜ್ಞಾನವನ್ನು ಬೆಳೆಸಲು ಪ್ರಮುಖ ಪಾತ್ರವಹಿಸುತ್ತವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

(Visited 1 times, 1 visits today)