ತುಮಕೂ
ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸುಮಾರು ೭೫೦ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ,ಸಂಬAಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಒದಗಿಸುವ ಕೆಲಸ ಮಾಡಿದ್ದಾರೆ.ಆದರೆ ಕೊನೆಯಲ್ಲಿ ಬಂದ ಕೆ.ಆರ್.ಎಸ್ ಪಕ್ಷದ ಕೆಲವರು ಉದ್ದೇಶಪೂರ್ವಕವಾಗಿಯೇ ಸಚಿವರನ್ನು ಕೆರಳಿಸುವಂತೆ ಪ್ರಶ್ನೆ ಮಾಡಿದಲ್ಲದೆ,ಅರ್ಜಿ ಪಡೆದ ಸಂಬAಧಪಟ್ಟವರಿಗೆ ನೀಡಿದ ನಂತರ ಹೊರಡಲು ಮುಂದಾದಾಗ ಉಢಾಪೆಯಾಗಿ ವರ್ತಿಸಿ,ಕೆಟ್ಟ ಹೆಸರು ತರುವ ಕೆಲಸ ಮಾಡಿದ್ದಾರೆ. ಇದು ಖಂಡನೀಯ.ಅಲ್ಲದೆ ಸೋಷಿಯಲ್ ಮಿಡಿಯಾದಲ್ಲಿ ಇಲ್ಲಸಲ್ಲದ ಸುಳ್ಳು ಹೇಳಿ ಮನಬಂದತೆ ಟ್ರೋಲ್ ಮಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕೆ.ಆರ್.ಎಸ್ ಪಕ್ಷದವರ ನಡವಳಿಕೆ ಇದೇ ರೀತಿ ಮುಂದುವರೆದರೆ ನಾವು ಕೂಡ ಎಲ್ಲೆಂದರಲ್ಲಿ ಕೆ.ಆರ್.ಎಸ್.ಪಕ್ಷದವರಿಗೆ ಘೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಮಸ್ಯೆಗಳ ಬಗ್ಗೆ ಮನವಿ ನೀಡಲು ಬಂದವರು, ಅದನ್ನು ವೀಡಿಯೋ ಮಾಡುವ ಅಗತ್ಯವೆನಿತ್ತು.? ,ತುಮಕೂರಿನ ಜನಸ್ಪಂದನ ಕಾರ್ಯಕ್ರಮಕ್ಕೆ ಮೈಸೂರಿ ವ್ಯಕ್ತಿ ಬಂದ ಮನವಿ ನೀಡುವ ಅಗತ್ಯವಿದೆಯೇ? ಇದೊಂದು ಷಡ್ಯಂತ್ರವಾಗಿದೆ. ಗೃಹ ಮಂತ್ರಿಗಳಿಗೆ ಕೆಟ್ಟ ಹೆಸರು ತರಬೇಕೆಂದು ನಡೆಸಿರುವ ಹುನ್ನಾರವಾಗಿದೆ.ಇಡೀ ದಿನ ಮದ್ಯಾಹ್ನದ ಊಟವನ್ನು ಮಾಡದೆ ಜನರ ಸಂಕಷ್ಟ ಆಲಿಸಿ ಪರಿಹಾರ ಒದಗಿಸಿದ್ದರೂ, ಸಭೆ ಮುಗಿಸಿ ಹೊರಡುವಾಗ ಬಂದು ಇಲ್ಲಸಲ್ಲದ ಕಿತಾಪತಿ ತೆಗೆದು ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡುತಿದ್ದಾರೆ ಎಂದು ದೂರಿದರು.
ಮುಖಂಡರರಾದ ಇಕ್ಬಾಲ್ ಅಹಮದ್ ಮಾತನಾಡಿ,ಪ್ರಜಾಪ್ರಭುತ್ವದ ಅಡಿಯಲ್ಲಿ ಸರಕಾರದ ಸವಲತ್ತುಗಳಿಗೆ ಅರ್ಜಿ ಸಲ್ಲಿಸಲು ಎಲ್ಲರಿಗೂ ಅವಕಾಶವಿದೆ.ಆದರೆ ಕೆ.ಆರ್.ಎಸ್ ಪಕ್ಷದವರು ಉದ್ದೇಶ ಪೂರ್ವಕವಾಗಿಯೇ ಮೊಬೈಲ್ ಹಿಡಿದು,ಬೇಕಾಬಿಟ್ಟಿ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಎಲ್ಲರಿಗೂ ಸಮಸ್ಯೆ ಪರಿಹಾರಕ್ಕೆ ಅವಕಾಶವಿದೆ. ಆದರೆ ಕೆ.ಆರ್.ಎಸ್ ಪಕ್ಷದ ದುಂಡಾವರ್ತನೆಯನ್ನು ಸಹಿಸುವುದಿಲ್ಲ.ನಮ್ಮ ಪಕ್ಷಕ್ಕೆ ೧೪೦ ವರ್ಷಗಳ ಇತಿಹಾಸವಿದೆ. ಲಕ್ಷಾಂತರ ಕಾರ್ಯಕರ್ತರಿದ್ದೇವೆ, ತಕ್ಕ ಪಾಠ ಕಲಿಸುವುದು ಅನಿವಾರ್ಯ ಎಂದರು.
ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಆರ್.ರಾಮಕೃಷ್ಣ ಮಾತನಾಡಿ, ದೇಶದಲ್ಲಿ ಹಲವಾರು ಸಮಸ್ಯೆಗಳಿಗೆ ಅವುಗಳನ್ನು ಬಿಟ್ಟು ಗೃಹ ಸಚಿವರನ್ನೇ ಟಾರ್ಗೆಟ್ ಮಾಡಿ,ಅವರ ತೇಜೋವಧೆಗೆ ಮುಂದಾಗಿರುವುದು ಖಂಡನೀಯ.ಮೈಸೂರು ಜಿಲ್ಲೆಯಿಂದ ಕಾರ್ಯಕರ್ತರನ್ನು ಎರವಲು ತರುವ ಅಗತ್ಯವೇನಿತ್ತು.ಇದರ ಬಗ್ಗೆ ತನಿಖೆಯಾಗಬೇಕು.ಕೆ.ಆರ್.ಎಸ್ ಪಕ್ಷದ ಚಟುವಟಿಕೆಗೆ ನಾವು ಅಡ್ಡಿ ಪಡಿಸಲ್ಲ.ಆದರೆ ಗೃಹ ಸಚಿವರನ್ನು ಟಾರ್ಗೆಟ್ ಮಾಡಿದರೆ ಮಾತ್ರ ಸಹಿಸಲ್ಲ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಸರಕಾರದ ಕೆಲಸವಾಗಿರುವ ಜನಸಂಪರ್ಕ ಸಭೆ ವ್ಯವಸ್ಥಿತವಾಗಿ ನಡೆಯುತ್ತಿರುವ ಸಂದರ್ಭದಲ್ಲಿ ೭೫೦ ಜನರಿಗೆ ಆಗದ ತೊಂದರೆ ಇವರಿಗೆ ಮಾತ್ರ ಆಗಿತ್ತೇ ?, ಕೆ.ಆರ್.ಎಸ್ ಪಕ್ಷದ್ದು ಕೇವಲ ಗಿಮಿಕ್, ಮುಖ್ಯಮಂತ್ರಿಗಳ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಸಚಿವರು, ಕಾರ್ಮಿಕ ಸಚಿವರು ಎಲ್ಲರ ಜನಸ್ಪಂದನ ಸಭೆಯಲ್ಲಿಯು ಇದೇ ರೀತಿ ವರ್ತಿಸುತಿದ್ದಾರೆ.ಅರ್ಜಿ ನೀಡುವ ಬದಲು ವಿಡಿಯೋ ಮಾಡಿ ಸೋಷಿಯೆಲ್ ಮಿಡಿಯಾದಲ್ಲಿ ಅಪಪ್ರಚಾರ ನಡೆಸುತ್ತಿರುವುದು ಸರಿಯಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸುವರ್ಣಮ್ಮ, ಹೆಚ್.ಸಿ.ಹನುಮಂತಯ್ಯ, ರೇವಣ್ಣ ಸಿದ್ದಯ್ಯ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಅಲ್ಪಸಂಖ್ಯಾತರ ಘಟಕದ ಇರ್ಫಾನ್ ಅಹಮದ್, ಎಸ್ಸಿ ಸೇಲ್‌ನ ಲಿಂಗರಾಜು, ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಮಹೇಶ, ಫೈಯಾಜ್, ನಾಗಲಕ್ಷಿö್ಮ, ವಿಜಯಲಕ್ಷಿö್ಮ, ಸುಜಾತ, ಪಿ.ಶಿವಾಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
(Visited 1 times, 1 visits today)


